Thursday, October 31, 2024
CrimeNEWSನಮ್ಮಜಿಲ್ಲೆ

KSRTC ತುಮಕೂರು: ಎರಡು ಬಸ್‌ಗಳ ನಡುವೆ ಸಿಲುಕಿ ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನಕ್ಕೆ ಹೋಗುತ್ತಿದ್ದ ಮಂಡ್ಯ ಜಿಲ್ಲೆಯ ಇಬ್ಬರು ಮಹಿಳೆಯರು ಮೃತ

ಸೆ.15ರ ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದ ಘಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯರಿಬ್ಬರು ಎರಡು ಬಸ್‌ ನಡುವೆ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಜರುಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ ಹಾಗೂ ಪಂಕಜ ಎಂಬುವರು ಮೃತಪಟ್ಟವರು.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಲು ಕೆ.ಶೆಟ್ಟಿಹಳ್ಳಿ ಗ್ರಾಮದ ರೇಣುಕಾ, ಅನುಸೂಯ, ಪುಷ್ಪ, ಮಂಜಮ್ಮ, ಪುಟ್ಟತಾಯಮ್ಮ ಹಾಗೂ ಪಂಕಜ ಈ ಆರು ಮಹಿಳೆಯರು ಇಂದು ಸೆ.15ರ ಬೆಳಗ್ಗೆ 10 ಸುಮಾರಿಗೆ  ಆಗಮಿಸಿದ್ದು ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗೊರವನಹಳ್ಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದರು.

ಬಸ್ ನಿಲ್ದಾಣಕ್ಕೆ ಬಂದ ಕೂಡಲೇ ಬಸ್ ಹತ್ತಲು ಮುಂದಾದಾಗ ಬಸ್ ಏಕಾಏಕಿ ಹಿಂದಕ್ಕೆ ಚಲಿಸಿದ್ದು ಎರಡು ಬಸ್‌ಗಳ ನಡುವೆ ಸಿಲುಕಿದ ಪುಟ್ಟತಾಯಮ್ಮ ಹಾಗೂ ಪಂಕಜ ಈ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇವರ ಜತೆಯಲ್ಲಿದ್ದ ಇನ್ನು ನಾಲ್ವರು ಮಹಿಳೆಯರಾದ ರೇಣುಕಾ ಅನುಸೂಯ ಪುಷ್ಪ ಹಾಗೂ ಮಂಜಮ್ಮ ಎಂಬುವವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ನಡೆದ ಕೂಡಲೇ ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ಮಹಿಳೆಯರ ಶವಗಳನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಸ್ಥಳದಲ್ಲಿದ್ದ ಮೃತ ಮಹಿಳೆಯರ ಕುಟುಂಬಸ್ಥರು ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಫ್ರೀ ಬಸ್ ಎಂದು ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಜಾರಿ ಬಳಿಕ ಇದೇ ಮೊದಲ ಬಾರಿಗೆ ಬಸ್‌ನಲ್ಲಿ ದೇವಸ್ಥಾನಕ್ಕಾಗಿ ತೆರಳಿದ್ದ ಮಹಿಳೆಯರು ಧಾರುಣವಾಗಿ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ.

ಈ ವೇಳೆ ಪ್ರತಿಕ್ರಿಯೆ ನೀಡಿರುವ ಜತೆಯಲ್ಲಿ ದೇವಸ್ಥಾನಕ್ಕೆ ಹೊರಟ್ಟಿದ್ದ ಪುಷ್ಪ ಎಂಬುವವರು ಇದೇ ಮೊದಲ ಬಾರಿಗೆ ಫ್ರೀ ಬಸ್ ಎಂದು ದೇವಸ್ಥಾನಕ್ಕಾಗಿ ಬಂದಿದ್ದವು. ಈ ಸಂದರ್ಭದಲ್ಲಿ ಇಂತಹ ಘಟನೆ ನಡೆದುಹೋಗಿದೆ ಎಂದು ದುಃಖದಲ್ಲೇ ಹೇಳಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...