NEWSಆರೋಗ್ಯ

ಐಸೋಲೇಶನ್ ವಾರ್ಡ್‍ಗೆ ಸಚಿವ ಶ್ರೀರಾಮುಲು ಭೇಟಿ ಪರಿಶೀಲನೆ

ಚಿಕಿತ್ಸೆ ಪಡೆಯುತ್ತಿರುವವರಿಗೆ ಧೈರ್ಯ ತುಂಬಿದ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ನೀವು ಧೈರ್ಯಕಳ್ಕೊಳ್ಳಬೇಡಿ; ನೀಮಗೇನು ಆಗಿಲ್ಲ. ದೇವರ ದಯೆಯಿಂದ ನಿಮ್ಮದು ನೆಗೆಟಿವ್ ರಿಪೋರ್ಟ್ ಬರುತ್ತದೆ ಅಷ್ಟೇ,ಅಲ್ಲಿಯವರೆಗೆ ಐಸೋಲೇಶನ್ ವಾರ್ಡ್‍ನಲ್ಲಿರಬೇಕು. ನಿಮ್ಮೊಂದಿಗೆ ನಾವಿದ್ದೇವೆ; ತಮಗೆ ಚಿಕಿತ್ಸೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ರೋಗಿಗಳಿಗೆ ಧೈರ್ಯ ತುಂಬಿದರು.

ನಿಮ್ಮನ್ನು ದೂರವಿಟ್ಟಿದ್ದೇವೆ ಎಂದು ಅಂದುಕೊಳ್ಳಬೇಡಿ; ದೇಶ ಹಾಗೂ ಎಲ್ಲರ ಸುರಕ್ಷತೆ ದೃಷ್ಟಿಯಿಂದ ತಮ್ಮನ್ನು ಐಸೋಲೇಶನ್ ವಾರ್ಡ್‍ನಲ್ಲಿಟ್ಟಿದ್ದೇವೆ ಅಷ್ಟೆ ಎಂದು ಹೇಳಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಹಿನ್ನೆಲೆ ಐಸೋಲೇಶನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಕೋವಿಡ್ ಸುರಕ್ಷಾ ಕಿಟ್ ಧರಿಸಿ ಒಳಗಡೆ ತೆರಳಿ ಬೆನ್ನುತಟ್ಟಿ ಅವರಿಗೆ ಧೈರ್ಯ ತುಂಬಿದರು.

ಜಿಲ್ಲಾಶಸ್ತ್ರಚಿಕಿತ್ಸ ಎನ್.ಬಸರೆಡ್ಡಿ ಐಸೋಲೇಶನ್ ವಾರ್ಡ್‍ನಲ್ಲಿ ಎಷ್ಟು ದಿನಗಳಿಂದಿರಿಸಲಾಗಿದೆ ಎಂಬುದು ಸೇರಿದಂತೆ ಕಲ್ಪಿಸಲಾಗುತ್ತಿರುವ ಇನ್ನಿತರ ಚಿಕಿತ್ಸಾ ಕ್ರಮಗಳನ್ನು ವಿವರಿಸಿದರು.

ಶಾಸಕ ಸೋಮಶೇಖರರೆಡ್ಡಿ, ನಾಗೇಂದ್ರ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಇನ್ನೀತರ ವೈದ್ಯಾಧಿಕಾರಿಗಳು ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್