NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಅರಿಯರ್ಸ್ ಸೇರಿ ವಿವಿಧ ಬೇಡಿಕೆ ಈಡೇರಿಸದ ಸರ್ಕಾರ- ಆಡಳಿತ ವರ್ಗಗಳ ವಿರುದ್ಧ ಅ.5ರಂದು ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಸರ್ಕಾರ ಮತ್ತು ಆಡಳಿತ ವರ್ಗಗಳು ಮಾತುಕತೆಗಳ ಮೂಲಕ ಬಗೆಹರಿಸಲು ಮೀನಮೇಷ ಎಣಿಸುತ್ತಿವೆ. ಹೀಗಾಗಿ ಅಕ್ಟೋಬರ್‌ 5ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರಾರಸಾ ನಿಗಮಗಳ ನೌಕರರ ಫೆಡರೇಷನ್ ( CITU ) ತಿಳಿಸಿದೆ.

ಈ ಬಗ್ಗೆ ಸಿಐಟಿಯು ಅಧ್ಯಕ್ಷ ರೇವಪ್ಪ, ಉಪಾಧ್ಯಕ್ಷ ಡಾ. ಕೆ. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌. ಮಂಜುನಾಥ್ ಹಾಗೂ ಫೆಡರೇಷನ್ ಪದಾಧಿಕಾರಿಗಳು ಪತ್ರಿಕಾ ಹೇಳಿಕೆ ಹೊರಡಿಸಿದ್ದು, ಫೆಡರೇಶನ್ (CITU) ಮೂಲಕ ಈಗಾಗಲೇ ಸಾರಿಗೆ ಸಚಿವರಿಗೆ ಮನವಿ ಮಾಡಿ ಈ ಸಂಬಂಧ ಸಭೆ ಕರೆಯುವಂತೆ ಒತ್ತಾಯಿಸಿದ್ದೇವೆ. ಆದರೆ ಇಲ್ಲಿವರೆಗೂ ಸಭೆ ಕರೆದು ಬೇಡಿಕೆಗಳ ಬಗ್ಗೆ ಚರ್ಚಿಸಿಲ್ಲ ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

ಈ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ಸಾರಿಗೆ ಸಚಿವರು ಮತ್ತು ನಿಗಮಗಳ ಆಡಳಿತ ವರ್ಗ ಸಮಂಜಸವಾಗಿ ಸ್ಪಂದಿಸದ ಕಾರಣ ನಮ್ಮ ಈ ಬೇಡಿಕೆಗಳ ಈಡೇರಿಕೆಗಾಗಿ 5.10.2023ರ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳು ತೀರ್ಮಾನಿಸಲಾಗಿದೆ ಎಂದು ವಿವರಿಸಿದ್ದಾರೆ.

ಪ್ರಮುಖ ಬೇಡಿಕೆಗಳು : 1)01.01.2020 ರಿಂದ ವೇತನ ಹೆಚ್ಚಳದ ಬಾಕಿ (ಅರಿಯರ್ಸ್) ಹಣ ನೀಡಬೇಕು. 2) 01.01.2020 ರಿಂದ ನಿವೃತ್ತಿ ಆದ ನೌಕರರ ವೇತನ ಹೆಚ್ಚಳದ ಪಿಕ್ಸೇಷನ್ ಆಗಬೇಕು. 3) ತುಟ್ಟಿ ಭತ್ಯೆ ಬಾಕಿ ಹಣ ನೀಡಬೇಕು. 4) 2021 ರ ಮುಷ್ಕರದ ವೇಳೆ BJP ಸರ್ಕಾರ ತೆಗೆದುಕೊಂಡಿರುವ ಎಲ್ಲಾ ರೀತಿಯ ಅಕ್ರಮ ಶಿಕ್ಷೆಗಳು ವಾಪಸ್ಸು ಆಗಬೇಕು.

5) ಎಲೆಕ್ಟ್ರಿಕ್ ಬಸ್ಸುಗಳನ್ನು ನಮ್ಮ ಸಾರಿಗೆ ನಿಗಮಗದ ನೌಕರರೇ ಓಡಿಸಬೇಕು. 6) ಕೇಂದ್ರ ಸರ್ಕಾರ FAME-2 ಯೋಜನೆ ( ಎಲೆಕ್ಟ್ರಿಕ್ ಬಸ್ಸುಗಳನ್ನು ) ಖಾಸಗೀಯವರ ಮೂಲಕ ಓಡಿಸುವ ಖಾಸಗೀಕರಣವನ್ನು ವಿರೋಧಿಸಿ. 7) BMTC ಯಲ್ಲಿ ಡಬ್ಬಲ್ ಡ್ಯೂಟಿ ಮಾಡಿಸಿ 4 ಗಂಟೆಗಳ ಕಾಲ OT ನೀಡುವುದನ್ನು ನಿಲ್ಲಿಸಿ ಕಾನೂನು ಬದ್ಧವಾಗಿ ಡಬಲ್ ವೇತನ ನೀಡಬೇಕು.

8) ಕಿರುಕುಳಗಳು/ ದೌರ್ಜನ್ಯದ/ ಭ್ರಷ್ಟಾಚಾರದ ಆಡಳಿತಕ್ಕೆ ಕಡಿವಾಣ ಹಾಕಬೇಕು. 9) ಗುತ್ತಿಗೆ ಕಾರ್ಮಿಕರ ನೇಮಕಾತಿ ವಿರೋಧಿಸಿ. 10) ಆಡಳಿತ ವರ್ಗಗಳು ಏಕ ಪಕ್ಷೀಯವಾಗಿ ಸುತ್ತೋಲೆಗಳನ್ನು ತರುವ ಪದ್ಧತಿ ನಿಲ್ಲಿಸಿ, ಕಾರ್ಮಿಕ ಸಂಘಗಳ ಜತೆ ಮಾತುಕತೆ ನಡೆಸಬೇಕು. ಉತ್ತಮ ಕೈಗಾರಿಕಾ ಬಾಂಧವ್ಯ ರೂಪಿಸಬೇಕು ಎಂಬ ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಅಂದಿನ ಪ್ರತಿಭಟನೆಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು, ಜತೆಗೆ ಖಾಸಗೀಕರಣ ವಿರೋಧಿಸಲು ಹಾಗೂ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಂಘಟಿತ ಹೋರಾಟಕ್ಕೆ ಮುಂದಾಗೋಣ ಎಂದು ಕರೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು