Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

KSRTC ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಡಬಲ್ ವೇತನ ಪಾವತಿಸಲು ಆದೇಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ರಾಷ್ಟ್ರೀಯ ರಜಾ ದಿನ ಮತ್ತು ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ  ಹೆಚ್ಚುವರಿ ವೇತನ  (Double Wages) ಪಾವತಿ ಮಾಡುವಂತೆ ಕೆಎಸ್ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಾ) ಸುತ್ತೋಲೆ ಹೊರಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಾರಾಂತ್ಯದ ಸರಣಿ ರಜೆ ಮತ್ತು ಹಬ್ಬದ ದಿನಗಳಲ್ಲೂ ರಜೆ ಇದ್ದರೂ ತೆಗೆದುಕೊಳ್ಳದೆ ಕೆಎಸ್ಆರ್‌ಟಿಸಿ ನೌಕರರು ಇನ್ನು ಹೆಚ್ಚು ಟ್ರಿಪ್‌ಗಳನ್ನು ಮಾಡುತ್ತಾರೆ. ಹೆಚ್ಚುವರಿಯಾಗಿಯೂ ಬಸ್‌ಗಳನ್ನು ನಿಗಮದಿಂದ ಓಡಿಸಲಾಗುತ್ತದೆ. ಇಂಥ ರಜೆ ಸಂದರ್ಭದಲ್ಲಿಯೂ ಚಾಲಕ, ನಿರ್ವಾಹಕರು ಕರ್ತವ್ಯದಲ್ಲಿ ನಿರತರಾಗಿ ಸುರಕ್ಷಿತವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾರ್ವಜನಿಕರನ್ನು ತಲುಪಿಸುವ ಕೆಲಸ ಮಾಡುತ್ತಾರೆ.

ಈ ಹಿನ್ನೆಯಲ್ಲಿ ಕೆಎಸ್ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಾ) ಸುತ್ತೋಲೆಯೊಂದನ್ನು ಹೊರಡಿಸಿದ್ದು, ರಾಷ್ಟ್ರೀಯ ರಜಾ ದಿನ ಮತ್ತು ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ (Double Wages) ಪಾವತಿ ಮಾಡುವ ಕುರಿತು ಸೂಚನೆ ನೀಡಿದ್ದಾರೆ.

ಈ ಸುತ್ತೋಲೆ ರಾಷ್ಟ್ರೀಯ ರಜಾ ದಿನ ಮತ್ತು ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿ ಮಾಡುವ ಕುರಿತು ಎಂಬ ವಿಷಯ ಒಳಗೊಂಡಿದೆ. 6/11/2020, ದಿನಾಂಕ 9/1/2023 ಮತ್ತು 7/9/2023ರ ಆದೇಶ/ ಸುತ್ತೋಲೆಗಳನ್ನು ಉಲ್ಲೇಖಿಸಲಾಗಿದೆ.

 ಸುತ್ತೋಲೆಗಳಲ್ಲಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ನಿಗಮದ ಸಾರಿಗೆ ಆದಾಯ ಹಾಗೂ ಇತರೇ ಆದಾಯವು ಕುಂಠಿತವಾಗಿದ್ದ ಹಿನ್ನೆಲೆಯಲ್ಲಿ ಸವೇತನ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ನಿರ್ದೇಶನ ನೀಡಲಾಗಿತ್ತು.

ತದನಂತರ ಜನದಟ್ಟಣೆ ಹೆಚ್ಚಿರುವ ಪೀಕ್ ಸೀಜನ್‌ಗಳಲ್ಲಿ ವಾಹನಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಡಿಸೆಂಬರ್-2022 ರಿಂದ ಜೂನ್-2023ರ ವರೆಗೆ ಮಾತ್ರ ಸವೇತನ ರಜೆ ಸೌಲಭ್ಯವನ್ನು ವಿಸ್ತರಣೆ ಮಾಡಲಾಗಿತ್ತು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ ‘ಶಕ್ತಿ ಯೋಜನೆ’ಯ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದ್ದು, ವಾಹನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಜುಲೈ-2023ರಿಂದ ಮುಂದುವರಿದಂತೆ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್-19 ಪೂರ್ವದಲ್ಲಿದ್ದಂತ ಹೆಚ್ಚುವರಿ ವೇತನವನ್ನು (Double Wages) ಪಾವತಿಸುವುದು ಹಾಗೂ ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಸಿಬ್ಬಂದಿಗಳನ್ನು ಕರ್ತವ್ಯದ ಮೇಲೆ ನಿಯೋಜಿಸುವುದು ಎಂದು ಸ್ಪಷ್ಟಪಡಿಸಿದೆ.

ಪ್ರಸ್ತುತ ಕೆಎಸ್‌ಆರ್‌ಟಿಸಿ ಚಾಲಕ & ನಿರ್ವಾಹಕರಾಗಿ ಕಾರ್ಯ ನಿರ್ವಹಣೆ ಮಾಡುವವರನ್ನು ನೇಮಕಾತಿ ಮಾಡಿಕೊಳ್ಳುತ್ತದೆ. ದೂರದ ಮಾರ್ಗದಲ್ಲಿ ಸಂಚಾರ ನಡೆಸುವ ಹಲವು ಬಸ್‌ಗಳಲ್ಲಿ ಒಬ್ಬರೇ ಚಾಲಕ & ನಿರ್ವಾಹಕರ ಕೆಲಸ ಮಾಡುತ್ತಾರೆ. ಹಬ್ಬ, ರಜಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿದ್ದು, ಹೆಚ್ಚುವರಿ ಬಸ್ ಓಡಿಸುವುದರಿಂದ ಅವರಿಗೆ ತೊಂದರೆ ಆಗುತ್ತಿತ್ತು.

ಈ ಹಿಂದೆ ಕೆಎಸ್‌ಆರ್‌ಟಿಸಿ ನೌಕರರ ಸಂಘ ಸರ್ಕಾರದೊಂದಿಗೆ ಸಭೆಗಳನ್ನು ನಡೆಸಿದಾಗ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು. ಇದರಲ್ಲಿ ಹಬ್ಬ/ ರಜೆ ದಿನಗಳಲ್ಲಿ ಕೆಲಸ ಮಾಡಿದರೆ ಹೆಚ್ಚುವರಿ ವೇತನ ಪಾವತಿ ಮಾಡಬೇಕು ಎಂಬುದು ಸಹ ಪ್ರಮುಖ ಬೇಡಿಕೆಯಾಗಿತ್ತು. ಹಿಂದೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ನಿರ್ದೇಶನಗಳನ್ನು ನೀಡಲಾಗಿತ್ತು.

ಈ ವರ್ಷದ ಜನವರಿಯಲ್ಲಿ ಕೆಎಸ್ಆರ್‌ಟಿಸಿ ಸಾರ್ವತ್ರಿಕ/ ಹಬ್ಬದ ರಜೆ ದಿನಗಳಂದು ಕರ್ತವ್ಯ ನಿರ್ವಹಿಸುವವರಿಗೆ ಹೆಚ್ಚುವರಿ ವೇತನ ನೀಡುವ ಬಗ್ಗೆ ಆದೇಶ ಹೊರಡಿಸಿತ್ತು. ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ಈ ಕುರಿತು ಹಿರಿಯ/ ವಿಭಾಗ ನಿಯಂತ್ರಣಾಧಿಕಾರಿಗಳು/ ಕಾರ್ಯ ವ್ಯವಸ್ಥಾಪಕರು ಕರಾರಸಾ ನಿಗಮ ಇವರಿಗೆ ಸೂಚನೆ ನಿಡಿದ್ದರು.

ಹೀಗಾಗಿ ನೌಕರರು ಆಯ್ಕೆ ಮಾಡಿಕೊಂಡಿರುವ ಸಾರ್ವತ್ರಿಕ/ ಹಬ್ಬದ ರಜಾ ದಿನಗಳಿಗೆ ಸೀಮಿತಗೊಳಿಸಿ ಸದರಿ ಸಾರ್ವತ್ರಿಕ/ ಹಬ್ಬದ ರಜೆ ದಿನದಂದು ಕರ್ತವ್ಯ ನಿರ್ವಹಿಸಿದ್ದಲ್ಲಿ ಹೆಚ್ಚುವರಿ ವೇತನ (Double, Wages) ಪಾವತಿ ಮಾಡಲು ಅಧಿಕಾರಿಗಳು ಮಂಜೂರಾತಿ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...