CrimeNEWSನಮ್ಮಜಿಲ್ಲೆ

ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: 5 ಅಡಿ ಎತ್ತರಕ್ಕೆ ಹಾರಿಬಿದ್ದು ಸ್ಥಳದಲ್ಲೇ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಸ್ಥಳದಲ್ಲೇ ಬಾಲಕ ಮೃತಪಟ್ಟಿರುವ ಘಟನೆ ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಈ ಭೀಕರ ಹಿಟ್ ಆಂಡ್ ರನ್​ ಪ್ರಕರಣ ಸೆ.17 ರಂದು ರಾತ್ರಿ 11:30ರಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬಾಲಕ ಸೇರಿ ಇನ್ನಿಬ್ಬರು ರಸ್ತೆ ದಾಟುತ್ತಿದ್ದರು. ಈ ವೇಳೆ ಬಾಲಕ ಮೊಬೈಲ್ ನೋಡಿಕೊಂಡು ಮುಂದೆ ಹೋಗುತ್ತಿದ್ದು ಉಳಿದ ಇಬ್ಬರು ಆತನ ಹಿಂದೆ ಹೋಗುತ್ತಿದ್ದರು. ಆಗ ಕೆಂಪು ಬಣ್ಣದ ಕಾರು ವೇಗವಾಗಿ ಬರುತ್ತಿರುವುದು ನೋಡಿದ ಇಬ್ಬರು ಕೂಗಿ ಹೇಳುವಷ್ಟರಲ್ಲೇ ಕಾರು ಅತೀವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ 5 ಅಡಿಗೂ ಹೆಚ್ಚು ಎತ್ತರಕ್ಕೆ ಹಾರಿ ನೆಲಕ್ಕೆ ಅಪ್ಪಳಿಸಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮಾನವೀಯತೆ ದೃಷ್ಟಿಯಿಂದ ಕಾರು ನಿಲ್ಲಿಸಬೇಕಿದ್ದ ಡ್ರೈವರ್ ಹಾಗೇ ಹೊರಟು ಹೋಗಿದ್ದಾನೆ. ಸದ್ಯ ಈ ಹಿಟ್​ ಅಂಡ್ ರನ್​ ದೃಶ್ಯವು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸಂಬಂಧ ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು