LatestNEWSನಮ್ಮರಾಜ್ಯ

ನಾಳೆ EPS ಪಿಂಚಣಿದಾರರ 88ನೇ ಮಾಸಿಕ ಸಭೆ: BMTC& KSRTC ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವ ಪಾರಂಪರಿಕ ಲಾಲ್‌ಬಾಗ್ ಹೂದೋಟದಲ್ಲಿ ಮೇ 4ರ ಭಾನುವಾರ ಬೆಳಗ್ಗೆ 8 ಗಂಟೆಗೆ ಇಪಿಎಸ್ ಪಿಂಚಣಿದಾರರ 88ನೇ ಮಾಸಿಕ ಸಭೆ ನಡೆಯಲಿದೆ ಎಂದು ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಈ ಮಾಸಿಕ ಸಭೆಯನ್ನು ಇತ್ತೀಚೆಗೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರಿಂದ ಮಡಿದ 26 ಮಂದಿ ಭಾರತೀಯ ನಾಗರಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಪ್ರಾರಂಭಿಸಲಾಗುವುದು. ಮಾಸಿಕ ಸಭೆಯನ್ನು ನಡೆಸುವ ಉದ್ದೇಶ, ಇಪಿಎಸ್ ನಿವೃತ್ತರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿ ನ್ಯಾಯಕ್ಕಾಗಿ ನಡೆಸುವ ಹೋರಾಟವಾಗಿದೆ.

ಏಪ್ರಿಲ್ 28, 2025 ರಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ, ಇಪಿಎಸ್ ನಿವೃತ್ತರು ನಡೆಸಿದ ಪ್ರತಿಭಟನಾ ಸಭೆ ಹಾಗೂ ಮನವಿ ಸಲ್ಲಿಸುವ ಕಾರ್ಯಕ್ರಮ ಅತ್ಯಂತ ಪರಿಣಾಮಕಾರಿಯಾಗಿತ್ತು. ದೇಶಾದ್ಯಂತ ಇರುವ ಇಪಿಎಸ್ ನಿವೃತ್ತರು ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿಯೂ ಸಹ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲಾ ನಿವೃತ್ತರಿಗೆ ಅಭಿನಂದನೆಗಳು.

ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ನಮ್ಮ ಸಂಘಟನೆಯು ಕಟಿಬದ್ಧವಾಗಿದ್ದು, ಇಪಿಎಫ್ಒ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರವನ್ನು ಬಡಿದೆಬ್ಬಿಸುವ ಸಲುವಾಗಿ, ಇದೇ ಮೇ ತಿಂಗಳಿನಲ್ಲಿ ಸೂಕ್ತ ದಿನಾಂಕದಂದು, ಪೊಲೀಸ್ ಅನುಮತಿ ಪಡೆದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ, ಈ ಮಾಸಿಕ ಸಭೆಯಲ್ಲಿ ಚರ್ಚಿಸಲಾಗುವುದು.

ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥರಾದ ಕಮಾಂಡರ್ ಅಶೋಕ್ ರಾಹುತ್ ಅವರು ಇಪಿಎಸ್ ನಿವೃತ್ತರ ಪರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವು ಅತ್ಯಂತ ವಿವೇಚನಾಯುತವಾಗಿದ್ದು, ಒಂದು ವೇಳೆ ನಿವೃತ್ತರ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ಈಡೇರಿಸಲು ವಿಳಂಬ ನೀತಿ ಅನುಸರಿಸಿದಲ್ಲಿ, ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ. ಏನೇ ಆಗಲಿ, ಕೇಂದ್ರ ಸರ್ಕಾರ ನಮ್ಮ ನಾಯಕರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲೇಬೇಕು.

ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿ ಅವರು ಈ ಮಾಸಿಕ ಸಭೆಯಲ್ಲಿ ನಿವೃತ್ತರ ಉದ್ದೇಶಿಸಿ ಮಾತನಾಡಲಿದ್ದಾರೆ. ನಮ್ಮ ಸಂಘದ ಎಲ್ಲ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಎಚ್ಎಂಟಿ, ಕಿರ್ಲೋಸ್ಕರ್, ಲಿಡ್ಕರ್, ಎಸ್ಕಾರ್ಟ್ ನಿವೃತ್ತರು ಭಾಗವಹಿಸಲಿದ್ದು ಮುಖಂಡರು ಇತ್ತೀಚಿನ ಎಲ್ಲ ಬೆಳವಣಿಗೆಗಳು ಹಾಗೂ ಮುಂದಿನ ಹೋರಾಟದ ರೂಪರೇಷೆಯ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾವೆಲ್ಲರೂ ಈ ಮೇಲ್ಕಂಡ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಎಲ್ಲ ನಿವೃತ್ತ ನೌಕರರುಭಾನುವಾರ ಬೆಳಗ್ಗೆ 8 ಸೇರೋಣ ಬನ್ನಿ ಎಂದು ಮನವಿ ಮಾಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ