NEWSನಮ್ಮಜಿಲ್ಲೆನಮ್ಮರಾಜ್ಯ

ಕಾಂಗ್ರೆಸ್ ಸರ್ಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ!!: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು! ಕಾರಣವಿಷ್ಟೇ; ಕಾಂಗ್ರೆಸ್ ಸರ್ಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ!!
ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ. ಇದು ಸರ್ಕಾರದ ಸಂಕಲ್ಪ‌ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರ್ಕಾರವು ಧನಪಿಶಾಚಿ ಅವತಾರವೆತ್ತಿ‌ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ!! ಎಂದು ಕುಟುಕಿದ್ದಾರೆ.

ಖೊಟ್ಟಿ ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸ ಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ ಎಂದು ಪ್ರಶ್ನೆ ಮಾಡಿದ್ದಾರೆ.

3,000 ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರ್ಕಾರ.‌ ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರ್ಕಾರ ಎಂದು ಕಿಡಿಕಾರಿದ್ದಾರೆ.

ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರ್ಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ.‌ ‘ಗೃಹಲಕ್ಷ್ಮೀ’ ಎಂದ ಸರ್ಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರ್ಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರ್ಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...