NEWSಕೃಷಿನಮ್ಮಜಿಲ್ಲೆ

ಕಾವೇರಿಗಾಗಿ ಮೈ ಮೇಲೆ ಸಗಣಿ ಸುರಿದು ಕೊಂಡು ಮಂಡ್ಯದಲ್ಲಿ ವಿನೂತನ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ತಮಿಳುನಾಡಿಗೆ ನೀರು ಹರಿಸಿ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗುತತಿರುವುದರಿಂದ ರೈತರು ಫಸಲೊಡ್ಡಲೂ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗಾಂಜಾ ಬೆಳೆಯಲು ನಮಗೆ ಅವಕಾಶ ಕಲ್ಪಿಸಬೇಕು ಇಲ್ಲವೇ ದಯಾ ಮರಣ ನೀಡಿ ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮೈ ಮೇಲೆ ಸಗಣಿ ಸುರಿದುಕೊಂಡು ಮಂಡ್ಯದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತ ಶಿವಕುಮಾರ ಆರಾಧ್ಯ ಮೈ ಮೇಲೆ ಸಗಣಿ ಸುರಿದುಕೊಂಡು ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

ಕೆಆರ್‌ಎಸ್ ಜಲಾಶಯದ ಕಾವೇರಿ ನೀರನ್ನು ಸಂಪೂರ್ಣವಾಗಿ ತಮಿಳುನಾಡಿಗೆ ಹರಿಯಲು ಬಿಟ್ಟಿರುವುದರಿಂದ ಈಗಾಗಲೇ ಜಲಾಶಯಗಳು ಬರಿದಾಗಿವೆ. ಇಂಥ ಸನ್ನಿವೇಶದಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಿದೆ, ರೈತರಿಗೆ ಭತ್ತ, ರಾಗಿ, ಕಬ್ಬು ಬೆಳೆಯಲು ನೀರಿಲ್ಲದ ಕಾರಣ ಗಾಂಜಾ ಬೆಳೆಯಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಗಾಂಜಾ ಬೆಳೆ ಬೆಳೆಯಲು ಕಾವೇರಿ ನೀರಿನ ಅವಶ್ಯಕತೆಯಿಲ್ಲ, ಮನೆಯ ತಿಪ್ಪೆಯ ಗುಂಡಿ, ಸ್ನಾನ, ಪಾತ್ರೆ ತೊಳೆದ ನೀರು, ಸಸಿಯ ಕುಂಡಗಳಲ್ಲಿ, ಹಿತ್ತಲಿನ ಕೀರೆಮಡಿ ಮತ್ತು ಕೈತೋಟದಲ್ಲಿ ಗಾಂಜಾ ಬೆಳೆ ಬೆಳೆಯಲು ಸಾಧ್ಯವಿದೆ, ಇದರಿಂದ ಸಂಕಷ್ಟ ಕಾಲದಲ್ಲಿ ರೈತರ ಬದುಕು ಮುನ್ನಡಲಿದೆ ಎಂದು ಹೇಳಿದರು.

ಗಾಂಜ ಬೆಳೆಗೆ ಅವಕಾಶ ಮಾಡಿಕೊಡದಿದ್ದರೆ ರಾಷ್ಟ್ರಪತಿಯವರ ಮೂಲಕ ದಯಾಮರಣ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಾತನೂರು ಯೋಗೇಶ್, ನಂಜುಂಡಸ್ವಾಮಿ, ಹೊಸಹಳ್ಳಿ ಶಿವು, ಎಚ್.ಕೆ ಮಂಜುನಾಥ್,ಬಿ.ಟಿ ಶಿವಲಿಂಗಯ್ಯ, ಶಿವಣ್ಣ ಇತರರಿದ್ದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು