NEWSನಮ್ಮರಾಜ್ಯರಾಜಕೀಯ

ಕಾವೇರಿ ನೀರಿಗಾಗಿ ಬಿಜೆಪಿ-ಜೆಡಿಎಸ್​ ಒಂದೇ ಬ್ಯಾನರಡಿ ಜಂಟಿಯಾಗಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್​ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಒಂದೇ ಬ್ಯಾನರ್​ ಅಡಿಯಲ್ಲಿ ಜಂಟಿಯಾಗಿ ಬುಧವಾರವಾದ ಇಂದು ಪ್ರತಿಭಟನೆ ನಡೆಸಿತು.

ರಾಜ್ಯದಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಲೇ ಇವೆ ನಿನ್ನೆ ಮಂಗಳವಾರವಷ್ಟೇ ಬೆಂಗಳೂರು ಬಂದ್​ ಆಗಿತ್ತು. ನಾಳೆ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಈ ಹೊತ್ತಲೇ ​ಬಿಜೆಪಿ ಮತ್ತು ಜೆಡಿಎಸ್​ ಒಂದೇ ಬ್ಯಾನರ್​ ಅಡಿಯಲ್ಲಿ ಹೋರಾಟಕ್ಕೆ ಧುಮುಕಿರುವುದು ಆಡಳಿತ ಪಕ್ಷ ಕಾಂಗ್ರೆಸ್‌ ಬಿಸಿತುಪ್ಪವಾಗಿ ಪರಿಣಮಿಸುತ್ತಿದೆ.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುನಿರತ್ನ, ಅಶ್ವಥ್ ನಾರಾಯಣ, ‌ಸಂಸದ ಪಿ.ಸಿ. ಮೋಹನ್, ಶಾಸಕರಾದ ಮುನಿರಾಜು, ‌ಸಿ.ಕೆ. ರಾಮಮೂರ್ತಿ ಹಾಗೂ ಜೆಡಿಎಸ್​ ಎಂಎಲ್​ಸಿ ಗೋವಿಂದರಾಜು, ಜೆಡಿಎಸ್ ಶಾಸಕ ಎ.ಮಂಜು, ಮುಖಂಡರಾದ ಶ್ರೀಕಂಠೇಗೌಡ, ಶರವಣ ಸೇರಿದಂತೆ ಉಭಯ ಪಕ್ಷಗಳ ನಾಯಕರು ಪ್ರತಿಭಟನೆಯ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಪ್ರಧಾನಿ ಮಧ್ಯಪ್ರವೇಶ ಮಾಡಬೇಕು‌ ಅಂತಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಮೇಲೆ ‌ಹಾಕ್ತಿದ್ದಾರೆ. ಆದರೆ, ನೀರು ‌ಬಿಡುವ ಪರಿಸ್ಥಿತಿಯಲ್ಲಿ ಇಲ್ಲದಿದ್ದರೂ ನೀರು‌ಬಿಟ್ಟಿದ್ದಾರೆ. ಆರಂಭದಲ್ಲಿಯೇ‌ 10 ಸಾವಿರ ಕ್ಯೂಸೆಕ್ ನೀರು ಬಿಟ್ಟುರು. ನೀರು ಬಿಟ್ಟ ಮೇಲೆ ಸಭೆ ಮಾಡಿದರು. ನಿನ್ನೆ ಮತ್ತೆ ನೀರು ಬಿಡಬೇಕು ಎಂದು ಕಾವೇರಿ ನದಿ ನೀರು ಸಮಿತಿ ಹೇಳಿರುವುದು ದುರ್ದೈವದ ಸಂಗತಿ ಎಂದರು.

ಕ್ಷೇತ್ರ ಅಧ್ಯಯನ ಆಗಬೇಕು: ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಸತತವಾಗಿ ‌ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸರಿಯಾಗಿ ವಾದ ಮಾಡದೇ ವ್ಯತಿರಿಕ್ತವಾಗಿ ಆದೇಶ ಪಡೆದಿದ್ದಾರೆ. ನಿನ್ನೆ ಮತ್ತೆ 3 ಸಾವಿರ ಕ್ಯೂಸೆಕ್ ‌ಬಿಡಿ ಅಂತ ಆರ್ಡರ್ ಬಂದಿದೆ. ಡಿ.ಕೆ. ಶಿವಕುಮಾರ್ ಅವರು ಈ ಆರ್ಡರ್ ಖುಷಿ‌ ತಂದಿದೆ ಅಂತಾರೆ. ಇಲ್ಲಿನ ವಸ್ತುಸ್ಥಿತಿ ಅವಲೋಕಿಸುವಂತೆ ಸ್ಥಳ ಪರಿಶೀಲನೆ ಮಾಡುವಂತೆ ಅರ್ಜಿ ‌ಹಾಕಬೇಕಿದೆ ಮತ್ತು ಕ್ಷೇತ್ರ ಅಧ್ಯಯನ ಆಗಬೇಖು ಎಂದು ಹೇಳಿದರು.

ನೀರಾವರಿ ಸಚಿವರ‌ ಹೇಳಿಕೆ  ಮಾರಕ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ರೈತರು‌ ಪ್ರತಿ ದಿನ ಹೋರಾಟ ಮಾಡುತ್ತಿದ್ದಾರೆ. ಇವತ್ತು ಜಂಟಿಯಾಗಿ ಪ್ರತಿಭಟನೆ ಮಾಡ್ತಿರೋದು‌ ರಾಜಕಾರಣಕ್ಕೆ ಅಲ್ಲ. ಸಿಎಂ ರಾಜಕೀಯಕ್ಕೆ ಬಳಸಿಕೊಳ್ಳುವ ಕೆಲಸ ಮಾಡ್ತಿದ್ದಾರೆ. ಈಗಲೂ ಎಚ್ಚೆತ್ತುಕೊಳ್ಳುವ ಪರಿಜ್ಞಾನ ಸರ್ಕಾರಕ್ಕೆ ಇಲ್ಲ. ಸರ್ವಪಕ್ಷ ಸಭೆ‌ ಕರೆದಾಗ ನಾವು ಹೇಳಿದ್ದನ್ನು ಇವರು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಎಂದು ಕಿಡಿಕಾರಿದರು.

ಇನ್ನು ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವುದಾಗಿ ಹೇಳಿದರು. ಸುಪ್ರೀಂಕೋರ್ಟ್ ತೀರ್ಪು‌ ಬರೋವರೆಗೂ ಕಾಯಬೇಕಿತ್ತು. 10 ರಿಂದ 15 ದಿನಗಳು ನೀರನ್ನು ಉಳಿಸಿಕೊಳ್ಳಬಹುದಿತ್ತು‌. ನೀರಾವರಿ ಸಚಿವರಿಂದ ‌ಬೆಂಗಳೂರಿನಲ್ಲಿ ‌ವ್ಯವಹಾರ ಮಾಡೋಕೆ ಸಮಯ ಇಲ್ಲ. ಅಂತಹವರನ್ನು ನೀರಾವರಿ ಸಚಿವರನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಬೆಳಗ್ಗೆ ಪ್ರಾಧಿಕಾರದ ಸಭೆ ಇರುವಾಗ ಒಳಹರಿವು ಹೆಚ್ಚಾಗಿದೆ ಅಂತಾ‌ ಜವಾಬ್ದಾರಿ ಸ್ಥಾನದಲ್ಲಿ ‌ಇರೋರು ‌ಹೇಳ್ತಾರಾ? ಮೆಟ್ಟೂರು‌ ಜಲಾಶಯದಲ್ಲಿ ಒಳಹರಿವು, ಹೊರ ಹರಿವಿನ ಮಾಹಿತಿ ತರಿಸಿದ್ದೇನೆ. ಒಳಹರಿವು‌ 6400 ಕ್ಯೂಸೆಕ್ ಇದೆ. ಕಳೆದ‌ ಕೆಲ ದಿನ ಭಾಗಮಂಡಲದಲ್ಲಿ ಮಳೆ‌ ಆಗಿದ್ದಕ್ಕೆ ಸ್ವಲ್ಪ‌ನೀರು‌ ಬರ್ತಿದೆ. ಸ್ಥಳ‌ ಪರಿಶೀಲನೆಗೆ ಹೋಗ್ತಿಲ್ಲ. ನೀರಾವರಿ ಸಚಿವರ‌ ಹೇಳಿಕೆ ಮತ್ತಷ್ಟು ಮಾರಕ ಆಗಲಿದೆ. ಲಘುವಾದ ನಡವಳಿಕೆಯಿಂದ ಮುಂದಿನ ದಿನದಲ್ಲಿ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ. ಹೀಗಾಗಿ ಈಗಲಾದರೂ ಎಚೆತ್ತುಕೊಳ್ಳಿ ಎಂದು ಎಚ್ಚರಿಸಿದರು.

ಏಜೆಂಟ್​ನಂತೆ ವರ್ತನೆ: ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ರಾಜ್ಯ ಸರ್ಕಾರ ತಮಿಳುನಾಡಿನ ಏಜೆಂಟ್​ನಂತೆ ವರ್ತಿಸುತ್ತಿದೆ. ಬರುವ ದಿನಗಳಲ್ಲಿ ನಾಡಿನ‌ ಜನರ ಹಿತದೃಷ್ಟಿಯಿಂದ ಜೆಡಿಎಸ್‌-ಬಿಜೆಪಿ‌ ಹೋರಾಟ ನಡೆಸುತ್ತಿದೆ ಎಂದರು.

ಇನ್ನು  ನಿಮ್ಮ ರಾಜಕೀಯ ದೊಂಬರಾಟಕ್ಕೆ ಅವಕಾಶ ನೀಡಲ್ಲ. ಕರ್ನಾಟಕದಲ್ಲಿ ಮಳೆ ಮುಗಿದಿದೆ ಮತ್ತು ತಮಿಳುನಾಡಿನಲ್ಲಿ ಈಗ ಶುರುವಾಗಿದೆ. ಕಾವೇರಿ ಹೋರಾಟಕ್ಕೆ ಕುಮಾರಸ್ವಾಮಿ ಬಂದು ದೊಡ್ಡ ಶಕ್ತಿ ತಂದಿದ್ದಾರೆ. ವಾಸ್ತವ ಸ್ಥಿತಿ ಅರಿತು ನೀರು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು