CrimeNEWSನಮ್ಮಜಿಲ್ಲೆ

ಡೈರಿ ಚುನಾವಣೆಗೆ ಹೋಗುತ್ತಿದ್ದ ಅಧಿಕಾರಿಗಳ ಕಾರು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್, ಮೊಬೈಲ್ ದೋಚಿ ಪರಾರಿ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಹಾಲು ಉತ್ಪಾದಕ ಸಹಕಾರ ಸಂಘ ಚುನಾವಣೆಗೆ ಹೋಗುತ್ತಿದ್ದ ಚುನಾವಣಾಧಿಕಾರಿಯನ್ನೇ ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್, ಮೊಬೈಲ್ ಕಳವು ಮಾಡಿರುವ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.

ಹಾಲು ಉತ್ಪಾದಕ ಸಂಘದ ನಿರ್ದೇಶಕ ಸ್ಥಾನಕ್ಕೆ ಬುಧವಾರವಾದ ಇಂದು ಚುನಾವಣೆ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗಳಾದ ಉಮೇಶ್, ಉಷಾ ಎಂಬುವರು ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘ ಚುನಾವಣೆ ಹೋಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಅವರಿಗೆ ಮಾರಕಾಸ್ತ್ರ ತೋರಿಸಿ ಕಿತ್ತುಕೊಂಡು ಪಾರಾರಿಯಾಗಿದ್ದಾರೆ.

ಬ್ಯಾಲೆಟ್ ಪೇಪರ್ ಹಾಗೂ ಲ್ಯಾಪ್ ಟಾಪ್ ಕಸಿದು ಕೊಂಡು ಪರಾರಿ ಆಗಲು ಮುಂದಾದಾಗ ತಡೆಯಲು ಬಂದ ಚುನಾವಣಾಧಿಕಾರಿ ಉಷಾ ಅವರಿಗೆ ಕಾರಿನಿಂದ ಗುದ್ದಿ ಪರಾರಿ ಆಗಿದ್ದು ಈ ದೃಶ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ‌ ಸೆರೆ ಹಿಡಿದಿದ್ದಾರೆ.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ದರೋಡೆ ಪ್ರಕರಣಕ್ಕೆ ಜೆಡಿಎಸ್ ಮಾಜಿ ಶಾಸಕ ಎ.ಮಂಜು ಕುಮ್ಮಕ್ಕು ನೀಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಆರೋಪಿಸಿದ್ದಾರೆ.

ಚುನಾವಣೆ ಅಧಿಕಾರಿಗಳೂ ಊರಿಗೆ ಹೋಗ್ತಿದ್ದಾಗ ದುಷ್ಕರ್ಮಿಗಳು ರಸ್ತೆ ಮಧ್ಯೆಯೇ ಅಡ್ಡಗಟ್ಟಿ ಬ್ಯಾಲೆಟ್ ಪ್ಯಾಪರ್, ಲ್ಯಾಪ್‌ಟಾಪ್ ಕಳವು ಮಾಾಡಿದ್ದಾರೆ. ಇಡೀ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ಪ್ರವೀಣ್ ಕುಮಾರ್ ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಡೈರಿ ಚುನಾವಣೆಗೆ ಕುದೂರು ಪೊಲೀಸರು‌ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದು ಮತ್ತೊಮ್ಮೆ ಬ್ಯಾಲೆಟ್ ಪ್ಯಾಪರ್ ಮುದ್ರಿಸಿ ಚುನಾವಣೆ ನಡೆಸಲು ಮುಂದಾಗಿದ್ದಾರೆ.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು