NEWSನಮ್ಮಜಿಲ್ಲೆನಮ್ಮರಾಜ್ಯ

ಜನರ ಬೆಂಬಲದಿಂದ ಬಂದ್ ಸಂಪೂರ್ಣ ಯಶಸ್ವಿ: ಕರ್ನಾಟಕ ಜಲ ಸಂರಕ್ಷಣಾ ಸಮಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಸೇರಿದಂತೆ 150 ಕ್ಕೂ ಹೆಚ್ಚು ಸಂಘಟನೆಗಳು ಜತೆಗೂಡಿ ನಡೆಸಿದ ಬಂದ್‌ ಯಶಸ್ವಿಯಾಗಲು ಮಾಧ್ಯಮಗಳು ಕೂಡ ಕಾರಣ ಎಂದು ತಿಳಿಸಿದರು. ಯಾವುದೇ ಹಾನಿಯನ್ನು ಮಾಡದೇ ಶಾಂತಿಯುತವಾಗಿ ಬಂದ್ ಆಗಿದೆ. ಜನ ಸಂಪೂರ್ಣ ಸಹಕಾರ, ಬೆಂಬಲ ಕೊಟ್ಟರು ಎಂದು ಹೇಳಿದರು.

ಬಂದ್ ಹಿಂದಿನ ದಿನ ಸಿಎಂ ಸಿದ್ದರಾಮಯ್ಯ ಅವರೇ ಸ್ವತಃ ನನಗೆ ಮತ್ತು ಕುರುಬೂರು ಶಾಂತಕುಮಾರ್ ಅವರಿಗೆ ಕರೆ ಮಾಡಿ, ಮೈಸೂರಿನಲ್ಲಿ ತುರ್ತು ಕಾರ್ಯಕ್ರಮ ಇರುವುದರಿಂದ ಜವಾಬ್ದಾರಿಯುತ ವ್ಯಕ್ತಿಯನ್ನು ಮನವಿ ಸ್ವೀಕರಿಸಲು ಕಳುಹಿಸುತ್ತೇನೆ. ಬಂದ ತಕ್ಷಣ ನಿಮ್ಮನ್ನು ಭೇಟಿಯಾಗುತ್ತೇನೆ ಎಂದಿದ್ದರು ಎಂದು ಅವರು ಹೇಳಿದ್ದರು ಎಂದರು.

ತಮಿಳರನ್ನು ನೋಡಿ ಕಲಿಯಬೇಕು: ನಾನು ಮೂಲತಃ ರೈತ, ನಂತರ ಸಿನಿಮಾ ಕಲಾವಿದ, ನಾನು ಈಗ ಒಂದು ಪಕ್ಷದ ಅಧ್ಯಕ್ಷನಾಗಿದ್ದರೂ, ಮೊದಲಿನಿಂದಲೂ ನಾಡು, ನುಡಿ, ನೀರಿಗಾಗಿ ಕಲಾವಿದರನ್ನು ಸೇರಿಸಿ ಹೋರಾಟ ಮಾಡಿದ್ದೇನೆ. ನಾಡಿಗೆ, ಭಾಷೆಗೆ, ನೀರಿಗೆ, ಗಡಿಗೆ ತೊಂದರೆಯಾದಾಗ ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವುದನ್ನು ತಮಿಳು ಭಾಷಿಕರನ್ನು ನೋಡಿ ಕಲಿಯಬೇಕು ಎಂದರು.

ಸುಪ್ರೀಂಕೋರ್ಟ್ ಕಾವೇರಿ ನೀರು ಹಂಚಿಕೆ ಬಗ್ಗೆ ತೀರ್ಪು ಕೊಡುವುದು ಇದ್ದಾಗ, ರಾಜ್ಯದಲ್ಲಿ ಬಂದ್ ಮಾಡಿದರೆ, ಇಲ್ಲಿನ ಸಮಸ್ಯೆ ಬಗ್ಗೆ ಅವರಿಗೂ ಸಂದೇಶ ಹೋಗಲಿದೆ. ನೀರು ಬಿಡಲು ಸೂಚನೆ ಕೊಟ್ಟರೆ ಅಶಾಂತಿ ಉಂಟಾಗಬಹುದು ಎಂದು ಚಿಂತನೆ ಮಾಡುತ್ತಾರೆ ಎನ್ನುವ ಉದ್ದೇಶದಿಂದ ತುರ್ತಾಗಿ ಬಂದ್ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜನರ ಹೋರಾಟಕ್ಕೆ ಜಯ ಸಿಕ್ಕಿದೆ: ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಜನತೆಯ ಹೋರಾಟ ಹೋರಾಟದ ಗಂಭೀರತೆಯನ್ನು ಅರಿತು ಸೆ.26ರಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ನಡೆಸಿದ ಸಭೆಯಲ್ಲಿ ತಮಿಳುನಾಡಿನ 12500 ಕ್ಯೂಸೆಕ್‌ನೀರು ಬಿಡಬೇಕೆಂಬ ಅರ್ಜಿಯನ್ನು ವಜಾ ಮಾಡಿ 5000 ಕ್ಯೂಸೆಕ್‌ ಬಿಡಬೇಕೆಂಬ ಆದೇಶವನ್ನು ಬದಲಾಯಿಸಿ ನೀರನ್ನು 3,000 ಕ್ಯೂಸೆಕ್‌ ಬಿಡಲು ಸೂಚಿಸಿರುವುದು ಜನತೆಯ ಹೋರಾಟಕ್ಕೆ ಸಂದ ಜಯ ಎಂದು ಹೇಳಿದರು.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ ಬೆಂಗಳೂರು ಬಂದ್ ಸಂಪೂರ್ಣ ಶಾಂತಿಯುತ ಬಂದ್ ಯಶಸ್ವಿಯಾಗಿದೆ ಇದು ಜನರ ಆಕ್ರೋಶದ ಎಚ್ಚರಿಕೆಯಾಗಿದೆ. ಯಾವುದೇ ಬಲತ್ಕಾರವಿಲ್ಲದೆ ಜನರೇ ಪ್ರೀತಿಯಿಂದ ಬಂದ್ ಮಾಡಿ ಸಹಕಾರ ನೀಡಿದ್ದಾರೆ ಇದು ಜನತಂತ್ರದ ಜಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಚಳವಳಿ ಮುಖಂಡ ಗುರುದೇವ ನಾರಾಯಣ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೃಷ್ಣೇಗೌಡ, ಕರ್ನಾಟಕ ಚಾಲಕರ ಒಕ್ಕೂಟ ನಾರಾಯಣಸ್ವಾಮಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಪೋಷಕರ ಒಕ್ಕೂಟದ ಯೋಗಾನಂದ, ಪಿಸ್ ಆಟೋ ಒಕ್ಕೂಟದ ಅಧ್ಯಕ್ಷ ರಘು ಜಯಕರ್ನಾಟಕ ರಕ್ಷಣಾ ಸೇನೆ ಅಧ್ಯಕ್ಷ ರಾಜಪ್ಪ ಅತ್ತಹಳ್ಳಿ ದೇವರಾಜ್ ಇದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...