NEWSಬೆಂಗಳೂರುಶಿಕ್ಷಣ

SSLC: ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ BBMP ಶಾಲೆಯ 78 ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರ ಪ್ರೋತ್ಸಾಹ ಧನ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ
  • ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 55.78 ಫಲಿತಾಂಶ:
  • ಬಿಬಿಎಂಪಿ ಶಾಲೆಯ ಮೂರು ವಿದ್ಯಾರ್ಥಿನಿಯರು ಶೇ. 95ಕ್ಕೂ ಹೆಚ್ಚು ಅಂಕ ಪಡೆದು ಉತ್ತೀರ್ಣ.

ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ  ಸಂಪೂರ್ಣ ಮಾಹಿತಿ: https://ksrtcarogya.in/

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2,257 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1,759 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 55.78 ರಷ್ಟು ಫಲಿತಾಂಶ ಬಂದಿದೆ.

ಬಿಬಿಎಂಪಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳ ಪೈಕಿ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಬಿಬಿಎಂಪಿ ಬಸವನಗುಡಿ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ.

ಬಿಬಿಎಂಪಿ ಶಾಂತಿ ನಗರ ಪ್ರೌಢಶಾಲೆಯು ಶೇ. 88.89 ರಷ್ಟು ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದರೆ ಬಿಬಿಎಂಪಿ ಶ್ರೀರಾಮಪುರ ಪ್ರೌಢಶಾಲೆಯು ಶೇ. 86.21 ರಷ್ಟು ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಇನ್ನು 2024-25 ನೇ ಸಾಲಿನಲ್ಲಿ ಒಟ್ಟು 78 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಅವರಲ್ಲಿ ಹೇರೋಹಳ್ಳಿ ಪ್ರೌಢಶಾಲೆಯಶಾಲಿನಿ ಬಿ.ಆರ್ ಅವರು 625 ಕ್ಕೆ 614 ಅಂಕಗಳನ್ನು ಪಡೆದು ಶೇ. 98.24 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿದ್ದಾರೆ.

ಶ್ರೀರಾಮಪುರ ಪ್ರೌಢಶಾಲೆಯ ರಾಜೇಶ್ವರಿ ಡಿ. ಅವರು 625 ಕ್ಕೆ 610 ಅಂಕಗಳನ್ನು ಪಡೆದು ಶೇ. 97.60 ರಷ್ಟು ಅಂಕಗಳನ್ನು ಗಳಿಸಿದ್ದು, ಜಯಮಹಲ್ ಬಿಬಿಎಂಪಿ ಬಾಲಕಿಯರ ಪ್ರೌಢಶಾಲೆಯ ಜೈನಬ್ ಫಿರ್ ದೋಸ್ ಖಾನಂ 606 (96.96%) ಪಾಲಿಕೆಗೆ ಕೀರ್ತಿ ತಂದಿದ್ದಾರೆ.

ಈ ಮೂವರು ವಿದ್ಯಾರ್ಥಿನಿಯರು ಸೇರಿದಂತೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ 78 ವಿದ್ಯಾರ್ಥಿಗಳಿಗೂ ಪಾಲಿಕೆ ವತಿಯಿಂದ ತಲಾ 25,000 ರೂಪಾಯಿ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Deva
the authorDeva

Leave a Reply

error: Content is protected !!