ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ವಿವಿಧ ಕನ್ನಡ ಪರ ಸಂಘಟನೆಗಳು ಮತ್ತೆ ಶುಕ್ರವಾರ (ಸೆ.29) ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.
ನಾಳೆ ಅಖಂಡ ಕರ್ನಾಟಕ ಬಂದ್ ಮಾಡಲಿರುವ ಕನ್ನಡ ಪರ ಸಂಘಟನೆಗಳು ಮತ್ತು ಒಕ್ಕೂಟದ ಮುಖಂಡರು, ನಗರ ಪ್ರದೇಶಗಳಲ್ಲಿ ಬೃಹತ್ ಮೆರವಣಿಗೆ ಮಾಡುವ ಮೂಲಕ ಬಂದ್‌ಗೆ ಬೆಂಬಲ ನೀಡುವಂತ ನಾಗರಿಕರಲ್ಲಿ ಮನವಿ ಮಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ನಗರದ ಹಲವು ಪ್ರದೇಶಗಳಿಗೆ ತೆರೆದ ವಾಹನದಲ್ಲಿ ಸಾರ್ವಜನಿಕರ ಬೆಂಬಲ ಕೋರುತ್ತಿರುವ ಒಕ್ಕೂಟದ ಮುಖಂಡರು, ಅಧ್ಯಕ್ಷ ವಾಟಳ್ ನಾಗರಾಜ್ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
ಇನ್ನು ಸಾರಿಗೆ ಬಸ್‌ಗಳು ರಾಜ್ಯಾದ್ಯಂತ ಎಂದಿನಂತೆ ಚಲಿಸಲಿಸುವುದಕ್ಕೆ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ತೆಗೆದುಕೊಳ್ಳುವ ಮೂಲಕ ಸಂಸ್ಥೆಯ ಆಸ್ತಿಗಳಿಗೆ ಯಾವುದೇ ತೊಂದರೆ ಆಗದ ರೀತಿ ಎಚ್ಚರ ವಹಿಸುವಂತೆ ಸಾರಿಗೆ ನಿಗಮದ ಮೇಲಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜತೆಗೆ ಆಯಾಯಾ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಬಸ್‌ಗಳ ಕಾರ್ಯಾಚರಿಸಲು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸಾರಿಗೆಯ ನಾಲ್ಕೂ ನಿಗಮಗಳು ಬಂದ್‌ಗೆ ವೇಳೆ ಬಸ್‌ಗಳನ್ನು ರಸ್ತೆಗಿಳಿಸುವುದಕ್ಕೆ ಅಡ್ಡಿಯಾದರೆ ತೊಂದರೆ ತೆಗೆದುಕೊಳ್ಳಬೇಡಿ ಎಂದು ತಿಳಿಸಿದ್ದಾರೆ.
ಅಧಿಕಾರಿಗಳ ಸೂಚನೆ ಮೇರೆಗೆ ಡಿಪೋಗಳಿಂದ ಬಸ್‌ಗಳನ್ನು ರಸ್ತೆಗಿಳಿಸುವ ಬಗ್ಗೆ ಡಿಪೋಮಟ್ಟದ ಅಧಿಕಾರಿಗಳು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಿ ನಂತರ ಬಸ್‌ಗಳನ್ನು ಓಡಿಸುವುದಕ್ಕೆ ಅನುಮತಿ ಪಡೆಯಲಿದ್ದಾರೆ. ಅಲ್ಲದೆ ರಸ್ತೆಗಿಳಿದ ಬಸ್‌ಗಳ ಬಗ್ಗೆ ಗಂಟೆಗೊಮ್ಮೆ ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರ.