CrimeNEWSಆರೋಗ್ಯ

ಕೊಳ್ಳೇಗಾಲದಲ್ಲಿ ವೈದ್ಯೆ ಸಿಂಧುಜಾ ಅನುಮಾನಾಸ್ಪದ ಸಾವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ವೈದ್ಯೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿ ನಡೆದಿದೆ.

ಕೊಳ್ಳೇಗಾಲ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಅರಿವಳಿಕೆ ವಿಭಾಗದ ಡಾ. ಸಿಂಧುಜಾ (28) ಎಂಬುವರೇ ಅನುಮಾನಾಸ್ಪದವಾಗಿ ಮೃತಪಟ್ಟವರು.

ಮೂಲತಃ ತಮಿಳುನಾಡಿನ ಚೆನ್ನೈನವರಾದ ಸಿಂಧುಜಾ ಅವರು ಎಂಬಿಬಿಎಸ್ ಮುಗಿಸಿ ಬಳಿಕ ಸ್ನಾತಕೋತ್ತರ ಪದವಿಗೆ ಸೇರಿದ್ದರು. ಸ್ನಾತಕೋತ್ತರ ಪದವಿ ಶಿಕ್ಷಣದ ಭಾಗವಾಗಿ ಅವರು ನಗರದ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಜಿಲ್ಲೆಯ ಕೊಳ್ಳೇಗಾಲದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪವಿರುವ ಬಾಡಿಗೆ ಮನೆಯಲ್ಲಿ ವರ್ಷದಿಂದ ವಾಸವಿದ್ದರು. ಆಸ್ಪತ್ರೆಯಲ್ಲಿ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಸಿಂಧುಜಾ, ಗುರುವಾರ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದರು.

ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಾರದ ಕಾರಣ ವೈದ್ಯೆ ಲೋಕೇಶ್ವರಿ ಅವರು ಸಿಂಧುಜಾ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡು ವೈದ್ಯರು ಹಾಗೂ ಸಿಬ್ಬಂದಿ ಮನೆಗೆ ಹೋಗಿದ್ದಾರೆ. ಕೂಗಿದರೂ ಬಾಗಿಲು ತೆರೆದಿಲ್ಲ. ನಂತರ ಸಿಬ್ಬಂದಿ ಕಿಟಕಿ ಗಾಜನ್ನು ಒಡೆದು ನೋಡಿದಾಗ ಡಾ.ಸಿಂಧುಜಾ ನೆಲದ ಮೇಲೆ ಬಿದ್ದಿದ್ದರು. ಪಕ್ಕದಲ್ಲಿ ಸಿರಿಂಜ್, ಔಷಧ, ಚಾಕು ಇನ್ನಿತರ ವಸ್ತುಗಳು ಇದ್ದವು ಎಂದು ತಿಳಿದು ಬಂದಿದೆ.

ಸಿಂಧುಜಾ ಅವರಿಗೆ 2024ರ ಜನವರಿ 2ರಂದು ಮದುವೆ ನಿಶ್ಚಯವಾಗಿತ್ತು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಡಿವೈಎಸ್ಪಿ ಸೋಮೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಹಿಂದಿನ ನಿಜಾಂಶ ತಿಳಿದು ಬರಬೇಕಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ