Please assign a menu to the primary menu location under menu

NEWSನಮ್ಮಜಿಲ್ಲೆ

ಸರ್ಕಾರ ಮಹಿಳೆಯರಿಗೆ ಕೊಡುವ ಸಹಾಯಧನವನ್ನು ಬ್ಯಾಂಕ್‌ಗಳು ಸಾಲಗಳಿಗೆ ಬಳಸುವಂತಿಲ್ಲ: ಸಚಿವ ಕೆ.ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಬಡಜನರ ಕಲ್ಯಾಣಕ್ಕಾಗಿ ಸರ್ಕಾರ ನೀಡುವ ವಿವಿಧ ಯೋಜನೆಗಳ ಸಹಾಯಧನವನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳು ಯಾವುದೇ ಸಾಲಗಳಿಗೆ ಬಳಸುವಂತಿಲ್ಲ ಎಂದು ಪಶುಪಾಲನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ತಾಲೂಕಿನ ಗೊರಹಳ್ಳಿ, ಚಪ್ಪರದಹಳ್ಳಿ, ಗಂಗನಕುಪ್ಪೆ, ಅಡಗೂರು, ಹಾರನಹಳ್ಳಿ ಹಾಗೂ ಅಂಬ್ಲಾರೆ ಗ್ರಾಮಗಳಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ರಾಜ್ಯದ ಜನರ ಆರ್ಥಿಕ ಸುಧಾರಣೆಗಾಗಿ ಗೃಹ ಲಕ್ಷ್ಮೀ, ಹಿರಿಯ ನಾಗರಿಕರಿಗೆ ಪಿಂಚಣಿ, ವಿಧವಾ ವೇತನ ಸೇರಿದಂತೆ ಅನೇಕ ಯೋಜನೆಗಳಡಿಯಲ್ಲಿ ಸಹಾಯಧನವನ್ನು ನೀಡುತ್ತಿದ್ದು, ಈ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳು ಸೇರಿದಂತೆ ಯಾವುದೇ ಸಹಕಾರ ಸಂಘಗಳು ಸಾಲಕ್ಕೆ ಬಳಸಿಕೊಳ್ಳಬಾರದು ಒಂದು ವೇಳೆ ಇದನ್ನು ಬ್ಯಾಂಕುಗಳು ಬಳಸಿಕೊಂಡರೆ ತಮ್ಮ ಗಮನಕ್ಕೆ ತರಬೇಕು ಎಂದು ಹೇಳಿದರು.

ಇನ್ನು ತಾಲೂಕಿನಲ್ಲಿರುವ ಮೂಲಭೂತ ಸಮಸ್ಯೆಗಳಿಗೆ ಹಂತಹಂತವಾಗಿ ಪರಿಹಾರ ನೀಡಲಾಗುವುದು. ಗ್ರಾಮಗಳ ಅಭಿವೃದ್ಧಿಗೆ ಪಂಚಾಯಿತಿ ಸದಸ್ಯರು ಪಕ್ಷಭೇದ ಮರೆತು ಕೆಲಸ ಮಾಡಿದರೆ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ, ಸಂಬಂಧಪಟ್ಟ ಅಧಿಕಾರಿಗಳು ಕೂಡ ಸದಸ್ಯರು ಮತ್ತು ಸಾರ್ವಜನಿಕರನ್ನು ಸಮಾನ ರೀತಿ ಕಾಣಬೇಕು. ಸದಸ್ಯರ ಒತ್ತಡಕ್ಕೆ ಮಣಿದು ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆ ಮಾಡಬಾರದು ಎಂದರು.

ತಾಲೂಕಿನ ಜನತೆ ನೀಡುತ್ತಿರುವ ಮನವಿಗಳನ್ನು ಸ್ವೀಕರಿಸಿ ನನ್ನ ಅಧಿಕಾರದ ಅವಧಿಯಲ್ಲಿ ದೇವಸ್ಥಾನ ಅಭಿವೃದ್ಧಿ, ರಸ್ತೆ ಮತ್ತು ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ಮತ್ತಿತರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಹಣವನ್ನು ಬ್ಯಾಂಕ್ ನವರು ಮಹಿಳೆಯರ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ಸಚಿವರ ಗಮನಕ್ಕೆ ತಂದಾಗ ಇದಕ್ಕೆ ಉತ್ತರಿಸಿದ ಅವರು ಸರ್ಕಾರದ ಸಹಾಯಧನವನ್ನು ಮಹಿಳೆಯರಿಗೆ ನೇರವಾಗಿ ತಲುಪಿಸಬೇಕು ಅದನ್ನು ಸಾಲಕ್ಕೆ ಬಳಸಿಕೊಳ್ಳಬಾರದು ಎಂದರು.

ಈ ಸಂದರ್ಭದಲ್ಲಿ ತಾಪಂ ಇಒ ಸುನಿಲ್ ಕುಮಾರ್, ಕೆಪಿಸಿಸಿ ಸದಸ್ಯ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ಸಿಡಿಪಿಒ ಮಮತಾ, ಅಬಕಾರಿ ನಿರೀಕ್ಷಕ ಧರ್ಮರಾಜ್, ತೋಟಗಾರಿಕೆ ಇಲಾಖೆ ಅಧಿಕಾರಿ ಪ್ರಸಾದ್, ಆರ್‌ಎಫ್‌ಒ ಕಿರಣ್ ಕುಮಾರ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮಾದೇಶ್, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಸಣ್ಣಸ್ವಾಮಿ ಸೇರಿದಂತೆ ಸಾರ್ವಜನಿಕರು ಹಾಗೂ ಗ್ರಾಮದ ಮುಖಂಡರು ಇದ್ದರು.

Leave a Reply

error: Content is protected !!
LATEST
ಅಧಿಕಾರಿಗಳ ಬಗ್ಗು ಬಡಿಯಲು "ದಂಡಂ ದಶಗುಣಂ": EPS ಪಿಂಚಣಿದಾರರ ಎಚ್ಚರಿಕೆ ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯೊಳಗೆ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ಸಾರಿಗೆ ಬಸ್‌-ಕಾರು ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು, ಇಬ್ಬರ ಸ್ಥಿತಿ ಗಂಭೀರ ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ