NEWSನಮ್ಮಜಿಲ್ಲೆಸಂಸ್ಕೃತಿ

ಮಹಾತ್ಮ ಗಾಂಧೀಜಿ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್‌ಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪ್ರತಿಯೊಬ್ಬರೂ ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿಯ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು, ಅಹಿಂಸೆ , ಅಸಹಕಾರ ಚಳವಳಿಯಿಂದಲೇ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಪ್ರತಿವರ್ಷ ಅಕ್ಟೋಬರ್‌ 2 ರಂದು ದೇಶದ ಜನ ರಾಷ್ಟ್ರಪಿತ ಮಹಾತ್ಮ ಗಾಂ​ಧೀಜಿಯವರ ಗುಣಗಾನ ಮಾಡುತ್ತಾರೆ. ಹಾಗೇ ಮತ್ತೊಬ್ಬ ಶ್ರೇಷ್ಠ ಮುತ್ಸದ್ಧಿ, ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿಯವರನ್ನೂ ನೆನೆಯುತ್ತಾರೆ. ಶಾಸ್ತ್ರೀಜಿ ಈ ದೇಶ ಕಂಡ ಅಪ್ರತಿಮ ನಾಯಕ. ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಮಹೋನ್ನತ ಮಂತ್ರ ಘೋಷಿಸಿದವರು. ಸಜ್ಜನ ನೇತಾರ ಎಂದು ಸ್ಮರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಡೆಸಿದ್ದ ಮಹಾತ್ಮ ಗಾಂಧೀಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ ಅವರು ಮಹಾತ್ಮ ಗಾಂಧೀಜಿ ಅವರ ಜೀವನಚರಿತ್ರೆ, ಹೋರಾಟ, ತತ್ವಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಗಾಂಧಿ ಪ್ರಿಯಭಜನೆಗಳನ್ನು ಹಾಡಲಾಯಿತು.

ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ಉಪ ನಿರ್ದೇಶಕಿ ಸಿ. ರೂಪಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ