NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಮೈಸೂರು ದಸರಾ: ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರಗಳಿಗೆಆದ್ಯತೆ- ಸಚಿವ ಎಚ್‌ಸಿಎಂ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಜಂಬೂಸವಾರಿಯಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ ಅರ್ಥಪೂರ್ಣ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗದಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ಸಿದ್ಧತೆ ಸಂಬಂಧ ವಿವಿಧ ಜಿಲ್ಲೆಗಳ ನೋಡೆಲ್ ಅಧಿಕಾರಿಗಳು ಹಾಗೂ ಕಲಾವಿದರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಸಮಾಜದ ಪರಿವರ್ತನೆಗೆ ಅನುಕೂಲವಾಗುವಂತಹ ಪರಿಕಲ್ಪನೆ ಅಡಿಯಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.

ನಾರಾಯಣ ಗುರು ಸಮಾನತೆಗಾಗಿ ಶ್ರಮಿಸಿದರು. ದೇಶದಲ್ಲೇ ಮೊದಲು ಮಹಿಳೆಯರಿಗೆ ಶಿಕ್ಷಣವನ್ನು ಸಾವಿತ್ರಿ ಬಾಯಿ ಫುಲೆ ನೀಡಿದರು. ಸಮೃದ್ಧ ಭಾರತ ನಿರ್ಮಾಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ, ನೀರಾವರಿ, ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿ ಸಾಮಾಜಿಕ ನ್ಯಾಯದ ಪರ ಆಡಳಿತ ನಡೆಸಿದರು. ಹೀಗೆ ದೇಶದ ಹಲವಾರು ಮಹಾನ್ ಸಮಾಜ ಸುಧಾರಕರ ಬದುಕು, ಹೋರಾಟ ತಿಳಿಸಿಕೊಡುವ ಕೆಲಸವಾಗಬೇಕು ಎಂದರು.

ಪ್ರತಿ ಜಿಲ್ಲೆಗೆ ಅದರದೇ ಆದ ಐತಿಹಾಸಿಕ ಘಟನೆಗಳು ಇರುತ್ತವೆ. ವಿಭಿನ್ನ ಆಚಾರ, ವಿಚಾರಗಳು, ಕಲೆ, ಸಂಸ್ಕೃತಿಗಳನ್ನು ಒಳಗೊಂಡಿರುತ್ತವೆ. ಐತಿಹಾಸಿಕ ಮಾಹಿತಿ ಜತೆಗೆ ಜೀವಂತವಾಗಿ ನಡೆದಿರುವಂತೆ ಘಟನೆಗಳನ್ನು ಬಿಂಬಿಸುವ ಶಿಸ್ತುಬದ್ಧ ಎಲ್ಲರ ಕಣ್ಮನ ಸೆಳೆಯುವ ಕಲಾಕೃತಿ ಒಳಗೊಂಡಿರಲಿ ಎಂದು ತಿಳಿಸಿದರು.

ಕಲಾವಿದರು ಸಂಪೂರ್ಣವಾಗಿ ತೊಡಗಿಸಿಕೊಂಡು ಸೃಜನಶೀಲತೆಯಿಂದ ಉತ್ತಮವಾದ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ. ನಿಮಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಪ್ರಶಸ್ತಿ ಪತ್ರವನ್ನು ವಿಭಾಗೀಯ ಮಟ್ಟದಲ್ಲಿ ನೀಡುವುದು ಹಾಗೂ ಕಲಾವಿದರಿಗೂ ಪ್ರತ್ಯೇಕ ಪ್ರಶಸ್ತಿ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಸ್ತಬ್ಧಚಿತ್ರದ ಜೊತೆಗೆ ಆಯಾ ಜಿಲ್ಲೆಯ ಕಲಾತಂಡಗಳನ್ನು ನಿಯೋಜಿಸುವುದು. ಅಕ್ಕಪಕ್ಕದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಇರಬೇಕು. ಅನವಶ್ಯಕವಾಗಿ ಯಾರಿಗೂ ಅವಕಾಶ ನೀಡಬಾರದು. ಸ್ತಬ್ಧಚಿತ್ರದ ಅಳತೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಾಸ ಇರಬಾರದು. ಅಗಲ, ಎತ್ತರ, ಉದ್ದ ಜಿಲ್ಲಾಡಳಿತ ನಿಗದಿಪಡಿಸಿದ ಅಳತೆಯನ್ನು ಮೀರಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು