NEWSದೇಶ-ವಿದೇಶನಮ್ಮರಾಜ್ಯ

ಮೋದಿ ನಿರಂಕುಶ ಪ್ರಭುತ್ವದಲ್ಲಿ ಪ್ರಾಮಾಣಿಕತೆಗೆ ಬಾರಿ ಬೆಲೆ ತೆರಬೇಕಾಗಿದೆ: ಮು. ಚಂದ್ರು ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ‘ಇಂಡಿಯಾ’ ಒಕ್ಕೂಟದ ಪ್ರಹಾರದಿಂದ ಕಂಗಾಲಾಗಿರುವ ಪ್ರಧಾನಿ ನರೇಂದ್ರ ಮೋದಿ ಇ.ಡಿ, ಸಿಬಿಐ, ಐಟಿ ದಾಳಿಯ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಸಾಕ್ಷ್ಯಾಧಾರಗಳಿಲ್ಲದೆ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವುದು ಅಕ್ಷಮ್ಯ. ಇದು ಪ್ರಜಾಪ್ರಭುತ್ವದ ಕಗ್ಗೋಲೆ. ಸಂವಿಧಾನ ವಿರೋಧಿ ನಡೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿ ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಮುಂಬರುವ ಐದು ವಿಧಾನಸಭೆ ಚುನಾವಣೆಗಳು ಸೇರಿದಂತೆ 2024ರ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿ ಶುರುವಾಗಿದೆ. ಅದಕ್ಕಾಗಿಯೇ ಸರ್ವಾಧಿಕಾರದ ಅಮಲಿನಲ್ಲಿ ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅವರು ಎಷ್ಟೇ ದಾಳಿ ನಡೆಸಿದರೂ ನಾವು ಹೆದರುವುದಿಲ್ಲ. ಭೀತಿ ಎಂಬುದು ಕೇವಲ ತಪ್ಪಿತಸ್ಥರ ಎದೆಯಲ್ಲಿರುತ್ತದೆ. ನಮ್ಮ ಎದೆಯಲ್ಲಿ ಹೋರಾಟದ ಕಿಚ್ಚಿದೆ ಎಂದರು.

ಅರವಿಂದ ಕೇಜ್ರಿವಾಲ್‌ ಅವರನ್ನು ನಿಯಂತ್ರಿಸಲು ಮೋದಿ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ತಿರುಗೇಟು ಎಂಬಂತೆ ಪಂಜಾಬ್‌ನಲ್ಲೂ ಸ್ವತಂತ್ರ ಸರ್ಕಾರ ರಚಿಸಿದ್ದೇವೆ. ಇದೀಗ ದೇಶಾದ್ಯಂತ ಎಎಪಿ ಪರ ಬೆಂಬಲ ವ್ಯಕ್ತವಾಗುತ್ತಿದೆ. ನಮ್ಮ ಸೇರ್ಪಡೆಯಿಂದ ಇಂಡಿಯಾ ಒಕ್ಕೂಟವೂ ಬಲಿಷ್ಠವಾಗಿದೆ. ಎನ್‌ಡಿಎ ಬಲದಿಂದ ದಿನದಿಂದ ದಿನಕ್ಕೆ ಕುಗ್ಗುತ್ತಿದೆ. ನಮ್ಮ ಮಿತ್ರಪಕ್ಷಗಳಿರುವ ರಾಜ್ಯಗಳಲ್ಲಿ ಜಾತಿ ಗಣತಿ ಬಿಡುಗಡೆಯಾಗುತ್ತಿದೆ. ಇದು ಮೋದಿ ಸರ್ಕಾರಕ್ಕೆ ಅರಗಿಸಿಕೊಳ್ಳಲಾಗುತ್ತಿಲ್ಲ ಎಂದರು.

ಸಂಜಯ್ ಸಿಂಗ್ ಅಕ್ರಮ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ ಸದಸ್ಯರು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಮೊಂಬತ್ತಿ ಹಚ್ಚುವ ಮೂಲಕ ಪ್ರಜಾ ಪ್ರಜಾಪ್ರಭುತ್ವದ ಕರ್ಗೊಲೆಯಾಗಿದೆ ಎಂದು ಘೋಷಣೆ ಕೂಗಿದರು.

ನಡೆದಿದೆ ಎನ್ನಲಾಗುತ್ತಿರುವ ಅಬಕಾರಿ ಹಗರಣದ ತನಿಖೆಯನ್ನು ಸುಮಾರು 15 ತಿಂಗಳಿಂದ ನಡೆಸಲಾಗುತ್ತಿದೆ. ನೂರಾರು ಅಧಿಕಾರಿಗಳು ಹಗಲು ರಾತ್ರಿ ಶೋಧ ನಡೆಸುತ್ತಿದ್ದಾರೆ. ಸುಮಾರು 1 ಸಾವಿರ ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ನಮ್ಮ ಮುಖಂಡರಾದ ಸತ್ಯೇಂದ್ರ ಜೈನ್‌, ಮನೀಶ್‌ ಸಿಸೋಡಿಯಾ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಕಸ್ಟಡಿಯಲ್ಲಿಟ್ಟು ಕಿರುಕುಳ ನೀಡಿದ್ದಾರೆ. ಸಲ್ಲದ ಆರೋಪಗಳನ್ನು ಮಾಡಿ ಹಿಂಸಿಸಿದ್ದಾರೆ. ಆದರೆ ಇದುವರೆಗೆ ಒಂದೇ ಒಂದು ಪೈಸೆ ಭ್ರಷ್ಟಾಚಾರದ ಹಣವನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ.

ಸಂಜಯ್‌ ಸಿಂಗ್‌ ಅವರ ನಿವಾಸದಲ್ಲೂ ಒಂದು ರೂಪಾಯಿ ಸಿಕ್ಕಿಲ್ಲ. ನಡೆದಿರದ ಭ್ರಷ್ಟಾಚಾರವನ್ನು ನಡೆದಿದೆ ಎಂದು ಆರೋಪ ಹೊರಿಸಿ ಎಷ್ಟು ಹುಡುಕಿದರೆ ಏನು ಪ್ರಯೋಜನ? ಇದೀಗ ಮೋದಿ ಹೀನಾಯ ಸೋಲು ಅನುಭವಿಸುವುದು ಗ್ಯಾರಂಟಿ ಎಂಬಂತಾಗಿದೆ. ಹಾಗಾಗಿ ವಿಪಕ್ಷಗಳ ನಾಯಕರಿಗೆ ಇಲ್ಲಸಲ್ಲದ ಕಿರುಕುಳ ಕೊಟ್ಟಾದರೂ ಮುಂಬರುವ ಚುನಾವಣೆಯಲ್ಲಿ ಅಧಿಕಾರ ಹಿಡಿಯಬಹುದೇನೋ ಎಂಬ ಪ್ರಯತ್ನದಲ್ಲಿದ್ದಾರೆ. ಇದು ಮೋದಿ ಅವರ ಅಸಹಾಯಕತೆ, ಭೀತಿಯನ್ನು ತೋರಿಸುತ್ತದೆ ಎಂದು ಮು.ಚಂದ್ರ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ, ನಿರ್ಭೀತಿಯಿಂದ ಸಾರ್ವಜನಿಕರ ಪರವಾಗಿ ಪ್ರಶ್ನೆಗಳನ್ನು ಕೇಳುವ ಭಾರತದ ಖ್ಯಾತ ಪತ್ರಕರ್ತರ ಮನೆಗಳ ಮೇಲೆ ನಿನ್ನೆ ದಾಳಿ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಅವರ ಫೋನ್, ಲ್ಯಾಪ್ ಟಾಪ್ ವಶಪಡಿಸಿಕೊಳ್ಳಲಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ವಿಚಾರಣೆ ನಡೆಸಲಾಗಿದೆ. ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟುವ ಪ್ರಯತ್ನ ನಡೆದಿದೆ ಎಂದು ಕಿಡಿಕಾರಿದರು.

ಇನ್ನು ನಿನ್ನೆ ಸಂಜೆ ಟಿಎಂಸಿ ಸಂಸದರು ಕೃಷಿ ಭವನಕ್ಕೆ ಹೋದಾಗ, ಕೃಷಿ ಸಚಿವರನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ, ರೈತರು ಧ್ವನಿ ಎತ್ತಲು ಪ್ರಯತ್ನಿಸಿದಾಗ, ಅವರನ್ನು ಪೊಲೀಸರು ಕೃಷಿ ಭವನದಿಂದ ಹೇಗೆ ಎಳೆದೊಯ್ದರು ಮತ್ತು ಇಂದು 40 ಸ್ಥಳದಲ್ಲಿ ವಿರೋಧ ಪಕ್ಷಗಳ ನಾಯಕರ ಸ್ಥಳಗಳ ಮೇಲೆ ದಾಳಿಯಾಗಿರುವುದನ್ನು ನೋಡಿದರೆ ಇವೆಲ್ಲವೂ ಮೋದಿ ಸರ್ಕಾರದ ಪತನದ ಮುನ್ನುಡಿಯಾಗಿದೆ ಎಂದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ