NEWSಸಂಸ್ಕೃತಿಸಿನಿಪಥ

ಮೈಸೂರು ದಸರಾ:  ಯುವ ಸಂಭ್ರಮಕ್ಕೆ ಅದ್ದೂರಿ ಚಾಲನೆ- ನಟ, ನಟಿಯರು ಭಾಗಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತೀ ಹೆಚ್ಚು ಆಕರ್ಷಣೆ ಪಡೆಯುವ ಯುವ ಸಂಭ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ದೀಪಬೆಳಗಿಸಿ, ಡೊಳ್ಳು ಬಾರಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು.

ಈ ಸುಂದರ ಕಾರ್ಯಕ್ರಮಕ್ಕೆ ನಟ ವಶಿಷ್ಟ ಸಿಂಹ ಹಾಗೂ ನಟಿ ಹರಿಪ್ರಿಯಾ ಸಾಕ್ಷಿಯಾದರು. ಶುಕ್ರವಾರ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಈ ಸುಂದರ ಕಾರ್ಯಕ್ರಮದಲ್ಲಿ ಸಾವಿರಾರು ಯುವಕ, ಯುವತಿಯರು ನೆರೆದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಈ ವೇಳೆ ನಟ ವಶಿಷ್ಟ ಸಿಂಹ ತಮ್ಮ ಕಂಚಿನ ಕಂಠದಲ್ಲಿ ಮರೆತೇ ಹೋದೆನು ಹೊರಟಾ ಕಾರಣ ನಿನ್ನಯ ಮಿಂಚಿಯ ದಾಳಿಯಲಿ, ಏತಕೇ ಬೊಗಸೆ ತುಂಬಾ ಆಸೆ ನೀಡಿದೆ, ಕೂರಕ್ ಕುಕ್ಕರಳ್ಳಿ ಕೆರೆ ಹಾಡು ಹಾಡುವ ಮೂಲಕ ಯುವಮನಸ್ಸುಗಳಿಗೆ ಲಗ್ಗೆ ಇಟ್ಟರು. ನಟಿ ಹರಿಪ್ರಿಯಾ ಲವ್ಲಿ ಸಿನಿಮಾದ ಡೈಲಾಗ್ ಹೇಳಿ ಎಲ್ಲರ ಗಮನಸೆಳೆದರು.

ವಿದ್ಯಾರ್ಥಿಗಳು ಮೈಸೂರು ದಸರಾ ವೈಭವ ಮತ್ತು ಮಾದರಿ ಕರ್ನಾಟಕವಾಗುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರ ಬಿಂಬಿಸುವ ನೃತ್ಯವನ್ನು ಎಚ್.ಡಿ.ಕೋಟೆಯ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮನೋಜ್ಞವಾಗಿ ಪ್ರದರ್ಶಿಸಿದರು. ನಂಜನಗೂಡಿನ ಶ್ರೀಕಂಠೇಶ್ವರ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಹುಲಿಯನೇರಿ ಬಂದ ಮಲೆಯ ಮಾದಪ್ಪ ಹಾಡಿಗೆ ನೃತ್ಯ ಮಾಡಿ ನೋಡುಗರನ್ನು ಭಕ್ತಿಯ ಲೋಕಕ್ಕೆ ಕೊಂಡೊಯ್ದರು.

ಮೈಸೂರಿನ ಜೆಎಸ್‌ಎಸ್ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಪ್ರದಾಯಿಕ, ಶಾಸ್ತ್ರೀಯ ಕಲೆಗಳ ಬಗೆಗಿನ ನೃತ್ಯ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿತು. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರ ಗ್ಯಾರಂಟಿ ಯೋಜನೆಗಳ ನೃತ್ಯ ಸರ್ಕಾರದ ಕೊಡುಗೆಗಳನ್ನು ಅನಾವರಣ ಮಾಡಿತು. ಮದ್ದೂರಿನ ವಜ್ರಕಾಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತೆ ಹಾಗೂ ವಿವಿಧೆತೆಯಲ್ಲಿ ಏಕತೆ ಕುರಿತು ಪ್ರದರ್ಶಿಸಿದ ನೃತ್ಯರೂಪಕ ಯುವಮನಸ್ಸುಗಳಲ್ಲಿ ದೇಶಪ್ರೇಮ ಮೂಡಿಸಿತು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ