NEWSನಮ್ಮಜಿಲ್ಲೆ

BMTC: ಅನುಕಂಪದ ಆಧಾರದ ಮೇಲೆ ನೇಮಕಾತಿ – 200 ಮಂದಿಗೆ ಆದೇಶ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಅರ್ಹರಿರುವ 200 ಜನರಿಗೆ ಸಚಿವ ರಾಮಲಿಂಗಾರೆಡ್ಡಿಯವರು ನೇಮಕಾತಿ ಆದೇಶ ಪತ್ರ ವಿತರಿಸಿದರು.

ಶುಕ್ರವಾರ ಆಯೋಜಿಸಿದ್ದ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮಲ್ಲಿ ಬಿಎಂಟಿಸಿಯ 200 ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದ ಸಚಿವರು ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿದೆ.

ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿಯವರು, 546 ಅರ್ಹ ಅಭ್ಯರ್ಥಿಗಳಿದ್ದಾರೆ. ಸದ್ಯಕ್ಕೆ 200 ಅಭ್ಯರ್ಥಿಗಳನ್ನು ಈಗ ನೇಮಕ ಮಾಡಿಕೊಂಡಿದ್ದು, ಉಳಿದವರಿಗೂ ಮುಂದಿನ ದಿನಗಳಲ್ಲಿ ನೌಕರಿ ನೀಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಅಸೋಸಿಯೇಷನ್‌ ಆಫ್‌ ಸ್ಟೇಟ್‌ ರೋಡ್‌ ಟ್ರಾನ್ಸ್‌ಪೋರ್ಟ್‌ ಅಂಡರ್‌ಟೇಕಿಂಗ್‌ (ಎಎಸ್‌ಆರ್‌ಟಿಯು) ವತಿಯಿಂದ ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ಬಲ್ಲಿ ಆಯೋಜಿಸಿದ್ದ ಅಂತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಕ್ರೀಡಾಕೂಟದಲ್ಲಿ ಜಯಗಳಿಸಿದವರನ್ನು ಸನ್ಮಾನಿಸಲಾಯಿತು.

ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ, ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಮಹಿಳೆಯರ ಸಿಂಗಲ್ಸ್‌ನಲ್ಲಿ ಬೆಳ್ಳಿ, ಡಬಲ್ಸ್‌ನಲ್ಲಿ ಕಂಚು ಪಡೆದ ಬಿಎಂಟಿಸಿ ತಂಡದ ಸದಸ್ಯರನ್ನು ಸಚಿವರು ಗೌರವಿಸಿದರು.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ ಸೇರಿದಂತೆ ಉನ್ನತ ಅಧಿಕಾರಿಗಳು ಹಾಗೂ ನೇಮಕಾತಿ ಆದೇಶ ಪತ್ರಪಡೆಯಲು ಬಂದಿದ್ದವರ ಜತೆ ಕುಟುಂಬದವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು