NEWSನಮ್ಮರಾಜ್ಯಬೆಂಗಳೂರು

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಎಎಪಿಯಿಂದ ಪತ್ರ ಚಳವಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ನಗರಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕ ಪತ್ರ ಚಳವಳಿಯನ್ನು ಆರಂಭಿಸಿದೆ.

ವಸಂತ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರ ಚಳವಳಿಗೆ ಚಾಲನೆ ನೀಡಿತು. ಮೇಕೆದಾಟು ಅಣೆಕಟ್ಟು ನಿರ್ಮಿಸಬೇಕು ಹಾಗೂ ಬೆಂಗಳೂರು ಜಲಮೂಲಗಳ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ನಿವಾಸಿಗಳ ಕೈಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪತ್ರಗಳನ್ನು ಬರೆಸುವ ಮೂಲಕ ಒತ್ತಡ ಹೇರಲಿದೆ.

ವಸಂತನಗರದ ನಾಗರಿಕರು ಅಂಗಡಿ ಮಾಲೀಕರು ಅತ್ಯಂತ ಉತ್ಸುಕತೆಯಿಂದ ಈ ಪತ್ರ ಚಳವಳಿಗೆ ಸಹಿ ಹಾಕುವ ಮೂಲಕ ಸಂಪೂರ್ಣ ಸಹಕಾರ ನೀಡಿದರು. ಪಕ್ಷದ ಮುಖಂಡರು ಖುದ್ದಾಗಿ ಕಾರ್ಮಿಕರು, ಆಟೋ ಚಾಲಕರು, ಕಚೇರಿ ಸಿಬ್ಬಂದಿ, ಬಿಬಿಎಂಪಿ ಸಿಬ್ಬಂದಿ ಸೇರಿದಂತೆ ಬೆಂಗಳೂರಿನ ಎಲ್ಲ ವರ್ಗದ ಜನರನ್ನು ಭೇಟಿಯಾಗಿ ಪತ್ರವನ್ನು ಬರೆಸುತ್ತಿದ್ದಾರೆ.

ಪತ್ರ ಚಳವಳಿ ಹಾಗೂ ಜಾಗೃತಿ ಕಾರ್ಯದಲ್ಲಿ ನಗರದಾದ್ಯಂತ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಬೆಂಗಳೂರು ಸಂಘಟನಾ ಕಾರ್ಯದರ್ಶಿಗಳಾದ ಅಶೋಕ್ ಮೃತ್ಯುಂಜಯ, ವಿಶ್ವನಾಥ್, ಶಶಿಧರ್ ಆರಾಧ್ಯ, ಬಸವರಾಜ್ ಜಮ್ ಶೆಟ್ಟಿ, ಅನಿಲ್ ನಾಚಪ್ಪ, ಜಗದೀಶ್ ಬಾಬು, ಮರಿಯಾ, ಉಸ್ಮಾನ್, ಡಾ. ಕೇಶವ್ ಕುಮಾರ್ ಚಂದನ್ ಶೆಟ್ಟಿ ಸೇರಿದಂತೆ ಪಕ್ಷದ ಎಲ್ಲ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು