Friday, November 1, 2024
NEWSನಮ್ಮರಾಜ್ಯಮೈಸೂರು

ಮೈಸೂರಿನ ರತ್ನಖಚಿತ ಸಿಂಹಾಸನದ ವಿಶೇಷತೆ, ಅದರ ಜೋಡಣೆ ಹೇಗೆ? ಇದು ನಿಮಗೆ ಗೊತ್ತಾ..!!?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ದಸರಾ ಮಹೋತ್ಸದ ವೇಳೆ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್‌ ಪ್ರಮುಖವಾಗಿದ್ದು, ಇಲ್ಲಿನ ದರ್ಬಾರ್‌ಹಾಲ್‌ನಲ್ಲಿರುವ ರತ್ನ ಖಚಿತ ಸಿಂಹಾಸವೂ ಅಷ್ಟೇ ಆಕರ್ಷಣೀಯವಾಗಿದೆ. ಇದರ ಜೋಡಣಾ ಕಾರ್ಯ ಸೋಮವಾರ (ಅ.9) ಅಂದರೆ ಇಂದು ನಡೆದಿದ್ದು, ನ.8ರಂದು ವಿಸರ್ಜನೆ ಮಾಡಲಾಗುತ್ತದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದಸರಾ ಸಂದರ್ಭದಲ್ಲಿ ಅರಮನೆಯಲ್ಲಿರುವ ರತ್ನ ಖಚಿತ ಸಿಂಹಾಸನದ ಬಗ್ಗೆಯೂ ಹೇಳಲೇ ಬೇಕಾಗುತ್ತದೆ. ಇದಕ್ಕೆ ಪೌರಾಣಿಕ ಇತಿಹಾಸವಿರುವುದು ಇದರ ಮಹತ್ವವನ್ನು ಹೇಳುತ್ತದೆ. ಈ ರತ್ನಖಚಿತ ಸಿಂಹಾಸನದ ಮೇಲೆ ಕುಳಿತು ಮೈಸೂರು ಸಂಸ್ಥಾನವನ್ನು ಮಹಾರಾಜರು ಆಳಿದ್ದಾರೆ. ಇಂತಹ ಸಿಂಹಾಸನದ ಮೇಲೆ ಈ ಬಾರಿ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಸೀನರಾಗಿ ಖಾಸಗಿ ದರ್ಭಾರ್ ನಡೆಸಿದರೆ, ಯುವರಾಣಿ ತ್ರಿಷಿಕಾ ಒಡೆಯರ್ ಅವರು ಧಾರ್ಮಿಕರ ಮತ್ತು ಸಾಂಪ್ರದಾಯಿಕ ಕಾರ್ಯಗಳನ್ನು ನೆರವೇರಿಸಲಿದ್ದಾರೆ.

ಈ ಖಾಸಗಿ ದರ್ಬಾರ್ ಕಾರ್ಯಕ್ರಮಕ್ಕೆ ರತ್ನಖಚಿತ ಸಿಂಹಾಸನವನ್ನು ಜೋಡಿಸುವುದು ಸುಲಭದ ಕೆಲಸವಲ್ಲ. ಪ್ರತ್ಯೇಕವಾಗಿರುವ ಸಿಂಹಾಸನವನ್ನು ಜೋಡಿಸುವ ಕಾರ್ಯವನ್ನು ಎಲ್ಲರೂ ಮಾಡುವುದಿಲ್ಲ. ಹಿಂದಿನಿಂದಲೂ ಸಮೀಪದ ಗೆಜ್ಜಗಳ್ಳಿ ಗ್ರಾಮದಿಂದ ಆಯ್ದ ಕೆಲವು ಕೆಲಸಗಾರರು ಆಗಮಿಸಿ ಜೋಡಣಾ ಕಾರ್ಯವನ್ನು ಮಾಡುತ್ತಾರೆ. ಹಲವು ವೈಶಿಷ್ಟ್ಯತೆಯನ್ನು ಹೊಂದಿರುವ ಮೈಸೂರಿನ ರತ್ನಖಚಿತ ಸಿಂಹಾಸನದ ಹಿಂದೆ ಪ್ರಾಚೀನ ಮತ್ತು ಐತಿಹಾಸಿಕ ಕಥೆಗಳು ಬಿಚ್ಚಿಕೊಳ್ಳುವುದನ್ನು ನಾವು ಕಾಣಬಹುದು.

ಇದು ಪಾಂಡವರ ಕಾಲದೆನ್ನಲಾಗಿದ್ದು, ಆ ಕಾಲದಲ್ಲಿ ಕಂಪುಲ ರಾಜನು ಇದನ್ನು ತಂದು ಪೆನಗೊಂಡದಲ್ಲಿ ಹೂತಿಟ್ಟಿದ್ದನು ಎನ್ನಲಾಗಿದೆ. 1338ರಲ್ಲಿ ಮಹರ್ಷಿ ವಿದ್ಯಾರಣ್ಯರು ಧ್ಯಾನದೃಷ್ಠಿಯಿಂದ ಇದನ್ನು ಅರಿತು ವಿಜಯನಗರದ ಚಕ್ರಾಧಿಪತ್ಯದ ಸ್ಥಾಪಕ ಹರಿಹರನಿಗೆ ತಿಳಿಸಿದರೆಂದು ಅದರಂತೆ ಹೊರತೆಗೆದು 150 ವರ್ಷಗಳ ಕಾಲ ಆನೆಗೊಂದಿಯಲ್ಲಿ ಅಲಂಕರಿಸಿದರೆಂದೂ, ಬಳಿಕ ವಿಜಯನಗರದ ಅವನತಿಯ ವೇಳೆಗೆ ಶ್ರೀರಂಗಪಟ್ಟಣದಲ್ಲಿದ್ದ ವಿಜಯನಗರದ ರಾಯಬಾರಿಯ ಅರಮನೆಗೆ ಸಾಗಿಸಲಾಯಿತೆಂದು ಹೇಳಲಾಗಿದೆ.

ಇನ್ನು ಆ ಬಳಿಕ 1609ರಲ್ಲಿ ಆಗಿನ ಮೈಸೂರು ಅರಸರಾದ ರಾಜಒಡೆಯರ್ ಶ್ರೀರಂಗರಾಜುಲುರನ್ನು ತಲಕಾಡಿಗೆ ಓಡಿಸಿ ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡರು. 1610ರಲ್ಲಿ ತಮ್ಮ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಬದಲಾಯಿಸಿದಾಗ ಸಿಂಹಾಸನವನ್ನು ಮೈಸೂರಿನ ಅರಮನೆಗೆ ಸಾಗಿಸಲಾಯಿತು.

ಸಿಂಹಾಸನವು ಚಿನ್ನದ ಬಾಳೆಯ ಕಂಬ ಮತ್ತು ಚಿನ್ನದ ಮಾವಿನ ಎಲೆಗಳಿಂದ ಅಲಂಕರಿಸಲ್ಪಟ್ಟಿದೆ. ಛತ್ರಿಯ ತುದಿಯಲ್ಲಿ ಒಡವೆಗಳಿಂದ ಅಲಂಕರಿಸಿದ ಪಕ್ಷಿಯನ್ನು ಕೂರಿಸಲಾಗಿದೆ. ಸಿಂಹಾಸನವನ್ನು ಹತ್ತುವ ಎರಡು ಕಡೆಗಳಲ್ಲೂ ಸ್ತ್ರೀಪುತ್ಥಳಿಯನ್ನು ನಿರ್ಮಿಸಲಾಗಿದೆ. ಜೊತೆಗೆ ಛತ್ರಿಯ ಸುತ್ತಲೂ ಮುತ್ತಿನ ಕುಚ್ಚುಗಳನ್ನು ಕಟ್ಟಲಾಗಿದೆ. ಅಲ್ಲದೆ ಸಿಂಹಾಸನಕ್ಕೆ ಕೂರ್ಮರೂಪದ ಆಸನವನ್ನು ಒದಗಿಸಲಾಗಿದೆ. ಉಭಯ ಪಾರ್ಶ್ವಗಳಲ್ಲಿ ಯಾಳಿಗಳನ್ನು ಮತ್ತು ನಾಲ್ಕು ಕಡೆಗಳಲ್ಲಿ ಬಳ್ಳಿ ಲತೆಗಳನ್ನು ಕೆತ್ತಲಾಗಿದೆ.

ಸಿಂಹಾಸನದ ದಕ್ಷಿಣದಲ್ಲಿ ಬ್ರಹ್ಮ, ಉತ್ತರದಲ್ಲಿ ಶಿವ, ಮಧ್ಯದಲ್ಲಿ ವಿಷ್ಣುವನ್ನು ನಿಲ್ಲಿಸಲಾಗಿದೆ. ವಿಜಯ ಸೂಚಕ ನಾಲ್ಕು ಸಿಂಹಗಳನ್ನು ಇಡಲಾಗಿದೆ. ಮೂರು ಕೋನಗಳಲ್ಲೂ ರಾಕ್ಷಸ ಶರೀರ, ಎರಡು ಕುದುರೆಗಳು ಮತ್ತು ನಾಲ್ಕು ಹಂಸಪಕ್ಷಿಗಳನ್ನಿಡಲಾಗಿದೆ. ನಾಗದೇವತೆಗಳ ಚಿತ್ರಗಳು, ಸ್ವಸ್ತಿಕ ಆಕೃತಿ ಮತ್ತು ಮುತ್ತಿನ ಹಡಗು ಮೇಲಿನ ಗುಡಾರಗಳ ಚಿತ್ರಣಗಳಿವೆ. ಸಿಂಹಾಸನವನ್ನು ನಾಲ್ಕು ದಿಕ್ಕುಗಳಲ್ಲಿ ತೆರೆಯಲಾಗಿದೆ. ಸಿಂಹಾಸನದ ಛತ್ರಿಯ ಮೇಲೆ ಸಂಸ್ಕೃತದ 96 ಸಾಲುಗಳ ಶ್ಲೋಕಗಳಿವೆ. ಒಟ್ಟಾರೆ ಮೈಸೂರಿನ ರತ್ನ ಖಚಿತ ಸಿಂಹಾಸನವು ಮೈಸೂರು ರಾಜರ ಆಡಳಿತ ವೈಭವದ ಪ್ರತೀಕವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...