NEWSದೇಶ-ವಿದೇಶಬೆಂಗಳೂರು

ಕಾವೇರಿ ನೀರಿಗಾಗಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖವತ್ ಭೇಟಿ ಮಾಡಿದ ನಿಯೋಗ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬರಗಾಲದ ಸಂಕಷ್ಟದಲ್ಲಿರುವ ಕರ್ನಾಟಕ ರೈತರು, ಜನಸಾಮಾನ್ಯರಿಗೆ ನೀರು ಉಳಿಸದೆ, ಕಾವೇರಿ ನೀರು ತಮಿಳುನಾಡಿಗೆ ಹರಿಸಿ, ಕರ್ನಾಟಕ ರಾಜ್ಯದ ರೈತರಿಗೆ ಮತ್ತು ಕುಡಿಯುವ ನೀರಿಗೆ ಸಂಕಷ್ಟ ತಂದಿರುವ ನೀತಿಯನ್ನು ಸರಿಪಡಿಸುವಂತೆ, ಕಾವೇರಿ ನೀರು ನಿರ್ವಹಣಾ ಮಂಡಳಿಯ ಆವೈಜ್ಞಾನಿಕ ಆದೇಶ ತಡೆಯಾಕಬೇಕು ಎಂದು ಕರ್ನಾಟಕ ಜಲ ಸಂರಕ್ಷಣ ಸಮಿತಿ ನಿಯೋಗ ಇಂದು ಕೇಂದ್ರ ಜಲ ಶಕ್ತಿ ಸಚಿವರನ್ನು ಒತ್ತಾಯಿಸಿದೆ.

ಈ ಸಂಬಂಧ ಸೋಮವಾರ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖವತ್ ಅವರನ್ನು ಭೇಟಿ ಮಾಡಿದ ನಿಯೋಗವು ಈ ಒತ್ತಾಯ ಪತ್ರ ಸಲ್ಲಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಬರಗಾಲಕ್ಕೆ 195 ತಾಲೂಕುಗಳು ತುತ್ತಾಗಿ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕಾವೇರಿ ಅಚ್ಚುಗಟ್ಟು ಭಾಗದ 38 ತಾಲೂಕುಗಳು ಬರಗಾಲಕ್ಕೆ ತುತ್ತಾಗಿ ರೈತರು ಯಾವುದೇ ಬೆಳೆ ಬೆಳೆದಿಲ್ಲ. ಇತ್ತ ಕಾವೇರಿ ವ್ಯಾಪ್ತಿಗೆ ಬರುವ ಬೆಂಗಳೂರು ಒಂದು ಕೋಟಿ 30 ಲಕ್ಷ ಜನರ ಕುಡಿಯುವ ನೀರಿನ ಸಂಕಷ್ಟ ಬಂದಿದೆ.

ಇಂಥ ಸಂದಿಗ್ಧ ಸಮಯದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರತಿನಿತ್ಯ 5000 ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಹರಿಸಬೇಕೆಂಬಅವೈಜ್ಞಾನಿಕ ಆದೇಶವನ್ನು ಹೊರಡಿಸಿತ್ತು. ಆದೇಶ ಪಾಲನೆ ಮಾಡಬೇಕು ಎಂದು ಕಾವೇರಿ ನೀರು ತಮಿಳನಾಡಿಗೆ ಬಿಡುವ ಮೂಲಕ ಜಲಾಶಯದಲ್ಲಿ ನೀರು ಕಡಿಮೆಯಾಗುತ್ತಿದೆ. ಇದರಿಂದ ಜನರಿಗೆ ಆತಂಕವಾಗಿದೆ. ಬೆಂಗಳೂರು ನಗರದಲ್ಲಿ ಎರಡು ಬಾರಿ ಜನಸಾಮಾನ್ಯರೇ ಶಾಂತಿಯುತ ಬಂದ್ ಆಚರಣೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದದೇವೆ.

ನಾವು ನಡೆಸಿದ ಹೋರಾಟದ ನಂತರವೂ ಮಂಡಳಿ 3000 ಕ್ಯೂಸೆಕ್ಸ್ ನೀರು ಬಿಡಬೇಕೆಂಬ ಆದೇಶ ನೀಡಿರುವುದನ್ನು ಒಪ್ಪಿ , ರಾಜ್ಯ ಸರ್ಕಾರ ಮತ್ತೆ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ, ಕುಡಿಯುವ ನೀರು ಉಳಿಸುವಂತೆ ಒತ್ತಾಯಿಸಿದ್ದು, ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು, ಕರ್ನಾಟಕದ ಜಲ, ನೆಲ, ಭಾಷೆ ವಿಚಾರದಲ್ಲಿ ಹೋರಾಡಲು ಆರಂಭವಾಗಿರುವ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಈ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ ಎಂದು ರೈತ ರತ್ನ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು : 1. ರಾಜ್ಯ ಸರ್ಕಾರ ನೀರು ನಿರ್ವಹಣಾ ಮಂಡಳಿ ಆದೇಶ ಪಾಲಿಸಿ ತಮಿಳುನಾಡಿಗೆ ಅವೈಜ್ಞಾನಿಕವಾಗಿ ಹರಿಸುತ್ತಿರುವ ನೀರನ್ನು ಈ ಕೂಡಲೇ ನಿಲ್ಲಿಸಬೇಕು.

2.ಸಾಂಪ್ರದಾಯಿಕ ಮುಂಗಾರು ಮಾರುತದ ಅವಧಿಯಲ್ಲಿ ನಿಗದಿತ ಪ್ರಮಾಣದ ಮಳೆ ಬಾರದೇ ಕೊರತೆ ಉಂಟಾದರೆ ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ಮತ್ತು ಕುಡಿಯುವ ನೀರಿಗೆ ತೀವ್ರ ತೊಂದರೆ ಉಂಟಾದರೆ ಇದರ ಪರಿಹಾರಕ್ಕಾಗಿ ಉಭಯ ರಾಜ್ಯಗಳ ನಡುವೆ ಮಳೆ ಆಧಾರಿತ ಸಂಕಷ್ಟ ಸೂತ್ರವನ್ನು ಜಾರಿಗೊಳಿಸುವುದು ಅತ್ಯಂತ ಪ್ರಮುಖ ಆದ್ಯತೆಯ ವಿಷಯವಾಗಿದೆ.

ಇನ್ನು ಹಿಂಗಾರಿನ ಅವಧಿಯಲ್ಲಿ ಪಕ್ಕದ ರಾಜ್ಯ ತಮಿಳುನಾಡಿನಲ್ಲಿ ವ್ಯಾಪಕ ಮಳೆ ಆಗುವ ಕಾರಣ ಈ ಸಂದರ್ಭದಲ್ಲಿ ಉತ್ಪತ್ತಿಯಾಗುವ 70 ಟಿಎಂಸಿಗೂ ಅಧಿಕ ನೀರನ್ನು ತಮಿಳುನಾಡು ರಾಜ್ಯವು ಬಳಸಿಕೊಳ್ಳುತ್ತಿದೆ. ಆದ್ದರಿಂದ ಉಲ್ಲೇಖಿತ ಪ್ರಮಾಣಕ್ಕೆ ಸಮನಾದ ನೀರನ್ನು ಕರ್ನಾಟಕವು ತನ್ನ ವ್ಯಾಪ್ತಿಯ ಪ್ರದೇಶದಲ್ಲಿ ಸಂಗ್ರಹಿಸಿಕೊಂಡು, ಕುಡಿಯುವ ನೀರಿಗಾಗಿ ಹಾಗೂ ಕೈಗಾರಿಕೆಗಳ ಉಪಯೋಗಕ್ಕಾಗಿ ಬಳಸಿಕೊಂಡು ನಂತರ ತಡೆಹಿಡಿಯಲಾದ ನೀರನ್ನು ಪರಿಸ್ಥಿತಿ ಆದರಿಸಿಕೊಂಡು ತಮಿಳುನಾಡಿಗೆ ಬಿಡಲಾಗುವುದು, ಇದರಿಂದ ನೆರೆಯ ರಾಜ್ಯ ತಮಿಳುನಾಡಿಗೆ ಯಾವ ರೀತಿಯ ಕ್ಕೆ ಆಗುವುದಿಲ್ಲ ಎಂಬ ಸಂದೇಶವನ್ನು ಕೇಂದ್ರ ಸರ್ಕಾರ ತಮಿಳುನಾಡಿಗೆ ತಿಳಿಸಬೇಕು. ಮೊದಲು ಕುಡಿಯುವ ನೀರಿಗೆ ಆದ್ಯತೆ ಎಂಬ ಸಂದೇಶ ರವಾನಿಸಬೇಕು.

ಈಗಾಗಲೇ ಕಾವೇರಿ ನೀರು ನಿರ್ವಹಣಾ ಮಂಡಳಿ ಜಾರಿ ಮಾಡಿರುವ 3000 ಕೂಸೆಕ್‌ ನೀರು ಬಿಡಬೇಕೆಂಬ ಆದೇಶ ವಾಸ್ತವಂಶವನ್ನು ಆಧರಿಸಿರುವುದಿಲ್ಲ ಆದ್ದರಿಂದ ಆದೇಶ ರದ್ದುಗೊಳಿಸಬೇಕು.

  1. ವಿವಿಧ ರಾಜಕೀಯ ಪಕ್ಷಗಳ ಸರ್ಕಾರಗಳ ಒತ್ತಡದಲ್ಲಿ ಕಾವೇರಿ ಪ್ರಾಧಿಕಾರ, ನೀರು ನಿರ್ವಹಣಾ ಮಂಡಳಿ ಕಾರ್ಯನಿರ್ವಹಿಸುತ್ತಿರುವ ಕಾರಣ ಕೂಡಲೇ ಅವುಗಳನ್ನು ರದ್ದುಪಡಿಸಬೇಕು. ಯಾರ ಒತ್ತಡಕ್ಕೂ ತಲೆಭಾಗದೆ, ಪರಿಸ್ಥಿತಿಯ ಗಂಭೀರತೆ ಅರಿತು, ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು.

ಈ ಮಂಡಳಿಯಲ್ಲಿ: ಕಾವೇರಿ ವ್ಯಾಪ್ತಿಗೆ ಸೇರಿದ ನಾಲ್ಕು ರಾಜ್ಯಗಳ ಪರಿಣಿತರು, ನೀರಾವರಿ ತಜ್ಞರು, ರೈತ ಪ್ರತಿನಿಧಿಗಳು, ಹವಮಾನ ತಜ್ಞರು, ನೀರಾವರಿ ಇಲಾಖೆಯ ಅಧಿಕಾರಿಗಳು- ಎಲ್ಲರನ್ನು ಒಳಗೊಂಡಂತೆ ಶಾಶನ ಬದ್ಧ ಮಂಡಳಿ ರಚನೆ ಮಾಡಿ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ, ಭಾರತೀಯ ಚುನಾವಣಾ ಆಯೋಗ ಕಾರ್ಯನಿರ್ವಹಿಸುವಂತೆ ನಿರ್ವಹಣೆ ಮಾಡಲು ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ನಿರ್ದೇಶನ ನೀಡಬೇಕು.

ಪಶ್ಚಿಮ ಘಟ್ಟಗಳ ಅರಣ್ಯವನ್ನ ಬೆಳೆಸಿ ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯದ ಹಣ ಖರ್ಚು ಮಾಡಲಾಗುತ್ತಿದೆ. ಈ ಅರಣ್ಯದ ಒತ್ತಡದಿಂದಲೇ ಮಳೆ ಸುರಿದು ನೀರು ಉತ್ಪತ್ತಿಯಾಗುತ್ತಿದೆ ಅದಕ್ಕೆ ನಮ್ಮ ರಾಜ್ಯದ ಹಣ ಖರ್ಚಾಗುತ್ತಿದೆ. ಅದರ ಹಕ್ಕು ನಮ್ಮ ರಾಜ್ಯಕ್ಕೆ ಮುಖ್ಯವಾಗಿರಬೇಕು. ನೀರಿನಲ್ಲಿ ಪಾಲು ಕೇಳುವ ತಮಿಳುನಾಡಿನವರು ಅರಣ್ಯ ಸಂರಕ್ಷಣೆ ಮಾಡಲು ಕರ್ನಾಟಕ ಸರ್ಕಾರಕ್ಕೆ ವರ್ಷಕ್ಕೆ 2000 ಕೋಟಿ ಹಣ ನೀಡುವ ವ್ಯವಸ್ಥೆ ಜಾರಿಗೆ ತರಬೇಕು.

ಹೆಚ್ಚು ಮಳೆ ಬಂದಾಗ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕಿಂತಲೂ ಹೆಚ್ಚು ನೀರು ತಮಿಳುನಾಡಿಗೆ ಹರಿದಿರುತ್ತದೆ ಕಳೆದ ವರ್ಷ ಸುಮಾರು 480 ಟಿಎಂಸಿ ನೀರು ತಮಿಳುನಾಡಿಗೆ ಹರಿಸಿದಾಗ ಹೆಚ್ಚುವರಿ ನೀರನ್ನ ತಮಿಳುನಾಡು ಸರ್ಕಾರ ಸಮರ್ಪಕವಾಗಿ ಬಳಸಿಕೊಳ್ಳದೆ ವ್ಯರ್ಥವಾಗಿ ಬಂಗಾಳಕೊಲ್ಲಿ ಸಮುದ್ರ ಸೇರಿದೆ ತಮಿಳುನಾಡಿಗೆ ಬಿಡಬೇಕಾದ ನೀರನ್ನು ಕರ್ನಾಟಕ ಹರಿಸಿದ ನಂತರ ಹೆಚ್ಚುವರಿಯಾಗಿ ಉಳಿಯುವ ನೀರನ್ನ ಕುಡಿಯುವ ಹಾಗೂ ವಿದ್ಯುತ್ ಉತ್ಪಾದನೆಗಾಗಿ ಬಳಸಿಕೊಳ್ಳಲು ಸಮಾನಂತರ ಜಲಾಶಯವನ್ನು ಕರ್ನಾಟಕದ ಮೇಕೆದಾಟುವಿದಲ್ಲಿ ನಿರ್ಮಿಸಲು ಕೂಡಲೇ ಅನುಮತಿ ನೀಡುವುದು ಅವಶ್ಯಕವಿದೆ ಆದ್ದರಿಂದ ಸಂಕಷ್ಟಕಾಲಕ್ಕೆ ಅನುಕೂಲವಾಗುವ 65 ಟಿಎಂಸಿ ಸಾಮರ್ಥ್ಯದ ಮೇಕೆದಾಟು ನಿರ್ಮಾಣಕ್ಕೆ ಕೂಡಲೇ ಸೂಚನೆ ನೀಡಬೇಕು. ಇದರಿಂದ ತಮಿಳುನಾಡಿಗೆ ನೀರು ಹರಿಸಲು ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂಬುದನ್ನು ಆ ರಾಜ್ಯಕ್ಕೆ ತಿಳಿಸಬೇಕು.

ಈ ಬಗ್ಗೆ ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡು ಕರ್ನಾಟಕದ ಜನರ ಹಿತ ಶಕ್ತಿ ಕಾಪಾಡಬೇಕು ಎಂದು ಒತ್ತಾಯಿಸುತಿದ್ದೇವೆ ಎಂದು ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಹಾಗೂ ನಿಯೋಗದಲ್ಲಿ ಕನ್ನಡ ಚಳುವಳಿ ಕೇಂದ್ರ ಸಮಿತಿಯ ಗುರುದೇವ್ ನಾರಾಯಣ್, ಕರ್ನಾಟಕ ರಾಜ್ಯ ಎಎಪಿಯ ಉಪಾಧ್ಯಕ್ಷ ಮೋಹನ್ ದಾಸರಿ, ವಿಜಯ ಸಿಂಗ್ ಮತ್ತಿತರರು ಇದ್ದರು.

ಎಲ್ಲ ಸಮಸ್ಯೆಗಳು ಅರಿವಾಗಿದೆ: ಸಚಿವರು ನಿಯೋಗದ ಮನವಿಯನ್ನು ಆಲಿಸಿ ನನಗೆ ಕಾವೇರಿ ಅಚ್ಚುಕಟ್ಟು ಭಾಗದ ಎಲ್ಲ ಸಮಸ್ಯೆಗಳು ಅರಿವಾಗಿದೆ ಕೇಂದ್ರ ಸರ್ಕಾರ ನ್ಯಾಯಾಲಯದ ಆದೇಶದ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಆದರೂ ಸಹ ಮುಂದಿನ ಎರಡು ದಿನಗಳಲ್ಲಿ ಕಾವೇರಿ ನೀರಿನ ನಿರ್ವಹಣಾ ಸಮಿತಿ ಸಭೆ ನಡೆಯಲಿದೆ ಆ ಸಭೆಯಲ್ಲಿ ನಿಮ್ಮ ನಿಯೋಗದ ಒತ್ತಾಯಗಳ ಬಗ್ಗೆ ಮಂಡಿಸಿ ಗಮನ ಸೆಳೆಯಲಾಗುವುದು. ಸಕಾರಾತ್ಮಕವಾದ ನಿರ್ಧಾರ ಕೈಗೊಳ್ಳಲು ತಿಳಿಸಲಾಗುವುದು ಕೇಂದ್ರ ಸರ್ಕಾರ ಕರ್ನಾಟಕದ ಹಿತಾಸಕ್ತಿಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?