NEWSನಮ್ಮಜಿಲ್ಲೆರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇಲ್ಲ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇಲ್ಲ. ರಾಜ್ಯಾಧ್ಯಕ್ಷ ಯಾರಿಗೆ, ಯಾವಾಗ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಒಂದು ಕೋಟಿ ಮಂದಿ ಸದಸ್ಯರಿದ್ದಾರೆ. ಯಾರಿಗೆ, ಯಾವ ಸ್ಥಾನ ನೀಡಬೇಕು ಅದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷದ ಋಣ ತೀರಿಸಲು ಪಕ್ಷ ತೀರ್ಮಾನಿಸುತ್ತದೆ. ಅಧ್ಯಕ್ಷನಿಂದಲೇ ಪಕ್ಷ ಬೆಳೆಯುತ್ತದೆ ಎಂಬುದು ತಪ್ಪು ಕಲ್ಪನೆ. ನಿತಿನ್ ಗಡ್ಕರಿಯಿಂದಲೇ ಪಕ್ಷ ಬೆಳೆದಿಲ್ಲ. ಈಶ್ವರಪ್ಪ ಅವರಿಂದಲೂ ಪಕ್ಷ ಬೆಳೆದಿಲ್ಲ. ಏಕ ವ್ಯಕ್ತಿಯಿಂದ ಪಕ್ಷ ಬೆಳೆಯುತ್ತದೆ ಎಂಬುದು ಭ್ರಮೆ ಎಂದರು.

ಕೇಂದ್ರದ ಯೋಜನೆ ಬೇರೆಯದೇ ಇತ್ತು. ವಿ.ಸೋಮಣ್ಣ ಪವರ್ ಫುಲ್ ಲೀಡರ್. ಸಿದ್ದರಾಮಯ್ಯ ಅವರನ್ನು ಸೋಲಿಸುವ ಶಕ್ತಿ ಇತ್ತು. ಆದರೆ, ಸಿದ್ದರಾಮಯ್ಯ ಹೇಗೆ ಗೆದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಕೇಂದ್ರದ ನಾಯಕರು ಸೋಮಣ್ಣರನ್ನು ಕೈ ಬಿಡಲ್ಲ. ಕಾಲೆಳೆದವರ ಪ್ರಯತ್ನ ನಡೆದಿರುತ್ತದೆ. ಆದರೆ, ಸೋಮಣ್ಣ ಕಾಲೆಲೆಯಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಅಸಮಾಧಾನ ಸಂಬಂಧ ಪ್ರತಿಕ್ರಿಯಿಸಿದ ಅವರು, ಯಾವುದೋ ಒಬ್ಬ ವ್ಯಕ್ತಿ ಬಗ್ಗೆ ಕೇಳ್ತೀರಿ. ಅವರ ಬಗ್ಗೆ ಯಾಕೆ ಮಹತ್ವ ಕೊಡ್ತೀರಿ. ಯಾವುದೇ ವ್ಯಕ್ತಿ ಬಿಜೆಪಿಯನ್ನು ಮುಜುಗರಕ್ಕೆ ಒಳಪಡಿಸಲು ಸಾಧ್ಯವಿಲ್ಲ. ಪಕ್ಷದ ಸಿದ್ಧಾಂತದ ಜೊತೆ ಇದ್ದರೆ ಒಳಿತು. ಇಲ್ಲದಿದ್ದರೆ ಪಕ್ಷ ಸೂಕ್ತ ಕ್ರಮ ಕೈಗೊಳ್ಳುತ್ತದೆ.

ಎಸ್.ಟಿ.ಸೋಮಶೇಖರ್ ಅವರಿಗೆ ಗೌರವದಿಂದ ಹೇಳುತ್ತೇವೆ. ಪರ-ವಿರೋಧದ ಬಗ್ಗೆ ಮಾತಾಡಲು ನೀನು ಯಾರು? ನೀನೊಬ್ಬ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಹಿರಿಯರ ಮಾತು ಕೇಳಿಕೊಂಡು ಬಿಜೆಪಿಯಲ್ಲಿ ಇರೋದಾದರೆ ಇರು. ಪಕ್ಷ ಏನು ತೀರ್ಮಾನ ಮಾಡುತ್ತದೆ ಅದರಂತೆ ನಡೆದುಕೊಳ್ಳಬೇಕು ಎಂದು ಹೇಳಿದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ