NEWSನಮ್ಮಜಿಲ್ಲೆಬೆಂಗಳೂರು

ಗೃಹಜ್ಯೋತಿ ಯೋಜನೆ ಈಗ ಗ್ರಹಣಜ್ಯೋತಿಯಾಗಿದೆ: ಬಿ.ಟಿ. ನಾಗಣ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮನೆ ಬಳಕೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಹಳ್ಳ ಹಿಡಿದಿದೆ. ಗೃಹಜ್ಯೋತಿ ಈಗ ಗ್ರಹಣ ಜ್ಯೋತಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ನಗರ ಆಮ್‌ ಆದ್ಮಿ ಪಕ್ಷದ ಕಚೇರಿಯಲ್ಲಿ ಗ್ರಹಣಜ್ಯೋತಿ ಎನ್ನುವ ಪ್ಲೇ ಕಾರ್ಡ್ ಬಿಡುಗಡೆ ಮಾತನಾಡಿದ ಅವರು, ಚುನಾವಣೆಗೆ ಮೊದಲು ಉಚಿತ ವಿದ್ಯುತ್ ಕೊಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಗೃಹಜ್ಯೋತಿ ಯೋಜನೆಗಾಗಿ ರಾಜ್ಯದ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ರೈತರ ಪಂಪ್‌ಸೆಟ್‌ಗಳಿಗೆ ಈ ಮೊದಲು 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು, ಈಗ 2 ಗಂಟೆಗಳ ಕಾಲ ಕೂಡ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಹೇಳಿದರು.

ದೆಹಲಿಯಲ್ಲಿ ನಾವು ಭರವಸೆ ನೀಡಿದಂತೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲಾಗುತ್ತಿದೆ. ದೆಹಲಿಯಲ್ಲಿ ವಿದ್ಯುತ್ ಪೂರೈಕೆದಾರರು ಒಂದು ಗಂಟೆ ವಿದ್ಯುತ್ ಕಡಿತ ಮಾಡಿದರೆ ಒಂದು ಗಂಟೆಗೆ 50 ರೂಪಾಯಿ ದಂಡ ಕಟ್ಟಿಕೊಡಬೇಕಾಗುತ್ತದೆ, 2 ಗಂಟೆಗಿಂತ ಹೆಚ್ಚು ಸಮಯ ವಿದ್ಯುತ್ ಕಡಿತ ಮಾಡಿದರೆ ಗಂಟೆಗೆ 100 ರೂಪಾಯಿಯಂತೆ ದಂಡ ಕಟ್ಟಿಕೊಡಬೇಕು, ಅಂತಹ ಕಾನೂನು ರೂಪಿಸಲಾಗಿದೆ. ಅಂತಹ ಕಾನೂನು ಇಲ್ಲಿ ತರಲಿ ಎಂದು ಒತ್ತಾಯಿಸಿದರು.

ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಐದು ವಿದ್ಯುತ್ ಶಕ್ತಿ ಪೂರೈಕೆ ಕಂಪನಿಗಳು ಈಗಾಗಲೇ 63000 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿವೆ ಈ ಸಮಯದಲ್ಲಿ ಮುಖ್ಯಮಂತ್ರಿಗಳು 85,000 ಕೋಟಿ ಸಾಲವನ್ನು ಪಡೆಯಲು ಈಗಾಗಲೇ ಆರ್ಥಿಕ ಇಲಾಖೆಗೆ ಸೂಚಿಸಿರುವುದನ್ನು ಗಮನಿಸಿದಾಗ ರಾಜ್ಯವು ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದರು.

ರಾಜ್ಯದ ರೈತರಿಗೆ ಪ್ರತಿ ವರ್ಷ ವಿದ್ಯುತ್ ಶಕ್ತಿ ಸಬ್ಸಿಡಿ ರೂಪದಲ್ಲಿ 6000 ಕೋಟಿ ರೂಪಾಯಿಗಳಷ್ಟು ನೀಡುತ್ತಿರುವ ಸರ್ಕಾರ ಎಲ್ಲ ರೈತರಿಗೂ ಸೋಲಾರ್ ಪಂಪನ್ನು ವಿತರಿಸದೆ ಅನವಶ್ಯಕವಾಗಿ ಸಾವಿರಾರು ಕೋಟಿ ಸಬ್ಸಿಡಿ ಹಣವನ್ನು ಪೋಲು ಮಾಡುತ್ತಿರುವುದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಕುಸುಮ್ ಯೋಜನೆ ಅಸಮರ್ಪಕ ಬಳಕೆ: ಮಳೆ ಕೊರತೆಯಾಗಿದ್ದರಿಂದ ರೈತರು ಪಂಪ್‌ಸೆಟ್‌ಗಾಗಿ ಹೆಚ್ಚಿನ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೇಂದ್ರ ಸರ್ಕಾರದ ಕುಸುಮ್ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯಕ್ಕೆ ಕೇಂದ್ರದಿಂದ 10314 ಸೋಲಾರ್ ಪಂಪ್‌ಗಳನ್ನು ನೀಡಲಾಗಿದೆ ಆದರೆ ಕೇವಲ 314 ಸೋಲಾರ್ ಪಂಪ್‌ಗಳನ್ನು ಮಾತ್ರ ರಾಜ್ಯದ ರೈತರಿಗೆ ನೀಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್ ಅವರು ಹೇಳಿದರು.

ನಮ್ಮ ರಾಜ್ಯದ ಭಗವಂತ್ ಖೂಬಾ ಅವರು ಕೇಂದ್ರದಲ್ಲಿ ಇದೇ ಖಾತೆಯನ್ನು ಹೊಂದಿದ್ದಾರೆ, ಅವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಬೇಕಿದೆ. ಸರಿಯಾದ ಮಾಹಿತಿ ಇಲ್ಲದೆ ರೈತರು ಸೋಲಾರ್ ಪಂಪ್ ಅಳವಡಿಕೆ ಮಾಡಿಕೊಳ್ಳುತ್ತಿಲ್ಲ, ಎಸ್ಕಾಂ ಸಿಬ್ಬಂದಿ ಈ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದರು.

ಬೇರೆ ರಾಜ್ಯದಿಂದ ಪ್ರತಿ ಯುನಿಟ್‌ಗೆ 5.56 ರೂಪಾಯಿ ನೀಡಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ರಾಜ್ಯಕ್ಕೆ ಅಗತ್ಯವಿರುವ 1.52 ಲಕ್ಷ ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಅನ್ನು ನಾವೇ ಉತ್ಪಾದನೆ ಮಾಡಬಹುದು ಎಂದು ಸರ್ಕಾರ ತನ್ನ ಗೆಜೆಟ್‌ನಲ್ಲೇ ಹೇಳಿದೆ, ಆದರೆ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವುದು 8 ಸಾವಿರ ಮೆಗಾ ವ್ಯಾಟ್ ಮಾತ್ರ, ವಿದ್ಯುತ್ ಖರೀದಿಯಲ್ಲಿ ಕೂಡ ಭ್ರಷ್ಟಾಚಾರ ಇದೆ, ಸರ್ಕಾರ ನಡೆಸುವರಿಗೆ ಇದರಲ್ಲಿ ಲಾಭ ಇದೆ ಎಂದು ಆರೋಪಿಸಿದರು.

ಮುಂದಿನ 4.5 ವರ್ಷ ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಮತ್ತು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಅಥವಾ ಅಫಿಡಿವಿಟ್ ಅನ್ನು ನೀಡಬೇಕು. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲು ಏನು ಯೋಜನೆ ರೂಪಿಸಿದ್ದೀರಾ ಎದು ತಿಳಿಸುವಂತೆ ಒತ್ತಾಯಿಸಿದರು.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ