NEWSಕೃಷಿನಮ್ಮರಾಜ್ಯ

ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಹೇಳಿದ್ದಾರೆ.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ಧಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದು ಹೇಳಿದ್ದಾರೆ.

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಸರಕಾರ ಇದೆ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ