ಬೆಂಗಳೂರು: ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲು, ಆಮ್ ಆದ್ಮಿ ಪಕ್ಷ ಸಾರ್ವಜನಿಕರಿಂದ ಸಹಿ ಸಂಗ್ರಹಣಾ ಅಭಿಯಾನ ಮಾಡುತ್ತಿದ್ದು, ಕೆಲವು ಬಿಜೆಪಿ ಬೆಂಬಲಿಗರು ಇದಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷದ ಸಹಿ ಸಂಗ್ರಹ ಅಭಿಯಾನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶುಕ್ರವಾರ ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್‌ಹಳ್ಳಿಯಲ್ಲಿ ಸಹಿ ಸಂಗ್ರಹ ನಡೆಸುವ ಸಂದರ್ಭದಲ್ಲಿ ಕೆಲವು ಬಿಜೆಪಿ ಬೆಂಬಲಿಗರು ಅಭಿಯಾನಕ್ಕೆ ಅಡ್ಡಿಪಡಿಸಲು ಮುಂದಾದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಆಂಜನೇಯ ರೆಡ್ಡಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅವರು, ಪೊಲೀಸರಿಗೆ ಅಭಿಯಾನದ ಬಗ್ಗೆ ವಿವರಣೆ ನೀಡಿದ ನಂತರ, ಪೊಲೀಸರು ಕೂಡ ಸಹಿ ಸಂಗ್ರಹ ಮಾಡಲು ಒಪ್ಪಿಗೆ ಕೊಟ್ಟರು.
ಮೇಕೆದಾಟು ಡ್ಯಾಂ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ವಿಚಾರವಾಗಿ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರದಾದ್ಯಂತ ಜನರಿಂದ ಸಹಿ ಸಂಗ್ರಹ ಮಾಡುತ್ತಿದೆ. ಈ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
BJP ಗೂಂಡಾಗಳಿಗೆ ತೊಂದರೆ ಮಾಡುವುದೊಂದೇ ಅವರ ಕಾಯಕ. ಇಂದು ಮಹಾದೇವಪುರದ ಮಾರತ್ತಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸಹಿ ಸಂಗ್ರಹಣಾ ಅಭಿಯಾನ ನಡೆಸುತ್ತಿದ್ದಾಗ, ಬಿಜೆಪಿ ಗೂಂಡಾಗಳು ತಮ್ಮ 25 ಗುಲಾಮ ಸಂಸದರನ್ನು ಪ್ರಶ್ನಿಸುವುದನ್ನು ಬಿಟ್ಟು ನಮ್ಮ ಜೊತೆ ಜಗಳವಾಡಲು ಬರುತ್ತಾರೆ. BJP ಬೀದಿ ಗೂಂಡಾಗಳಿಂದ ತುಂಬಿಹೋಗಿದೆ ಅನಿಸುತ್ತೆ. pic.twitter.com/VLLCpuhZSy
— Mohan Dasari – ಮೋಹನ್ ದಾಸರಿ (@MohanDasari_) October 13, 2023