NEWSಆರೋಗ್ಯ

ವಿಜಯನಗರ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ವಿಜಯನಗರ: ಇಲ್ಲಿನ ಜಿಲ್ಲಾ ವೈದ್ಯಕೀಯ ಆಸ್ಪತ್ರೆಗೆ ಬರುವ ರೋಗಿಗಳಿಗೆ ಆಸ್ಪತ್ರೆಯ ಒಳಗೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಒಂದು ವೇಳೆ ಪ್ರವೇಶಿಸಿದರೂ, ಅಲ್ಲಿ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳ ನೋವಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ನಮ್ಮನ್ನು ತೀರಾ ನಿಷ್ಕೃಷ್ಠವಾಗಿ ಕಾಣುತ್ತಿದ್ದಾರೆ. ಊಟ ಕೊಡುವುದಿಲ್ಲ, ಔಷಧಿ ಕೊಡಲ್ಲ…. – ಈ ಎಲ್ಲ ಕುಂದುಕೊರತೆಗಳು, ಸಮಸ್ಯೆಗಳು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಕಂಡುಬಂದಿದೆ.

ಬಳ್ಳಾರಿ ಜಿಲ್ಲಾ ಪ್ರವಾಸದಲ್ಲಿರುವ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನೇತೃತ್ವದ ತಂಡ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಸಂದರ್ಭ ಕಂಡುಬಂದ ದೃಶ್ಯವಿದು. ರೋಗಿಗಳು ತಾವು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಈ ರೀತಿಯಾಗಿ ಅಳಲು ತೋಡಿಕೊಂಡಿದ್ದಾರೆ. ದಿನನಿತ್ಯವು ಈ ಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ಹೇಳಿದ್ದಾರೆ.

ಪರಿಸ್ಥಿತಿಯನ್ನು ಅವಲೋಕಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಆಸ್ಪತ್ರೆಯಲ್ಲಿನ ಹಲವಾರು ಅವ್ಯವಸ್ಥೆಗಳ ಬಗ್ಗೆ ದೂರು ಬಂದಿತ್ತು. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ಸುದ್ದಿ ತಿಳಿದು ನಮ್ಮ ತಂಡ ಇಲ್ಲಿಗೆ ಭೇಟಿ ನೀಡಿತು. ಇಲ್ಲಿಗೆ ಬಂದಾಗ ನಮಗೂ ಅವ್ಯವಸ್ಥೆಯ ದರ್ಶನವಾಯಿತು. ಈ ಅವ್ಯವಸ್ಥೆಯು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಲುಪಬೇಕು ಎಂದು ಹೇಳಿದರು.

ರೋಗಿಗಳಿಗೆ ಅಗತ್ಯ ಸೌಲಭ್ಯ ದೊರಕುತ್ತಿಲ್ಲ. ಔಷಧಿಗಳನ್ನು ಹೊರಗಡೆಯಿಂದ ತರುವಂತೆ ಹೇಳಲಾಗುತ್ತಿದೆ. ಆಸ್ಪತ್ರೆಯ ಸಿಬ್ಬಂದಿಗೆ ಸೌಜನ್ಯವೇ ಇಲ್ಲ. ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಊಟದ ವ್ಯವಸ್ಥೆ ಸರಿಯಾಗಿ ನಡೆಯುತ್ತಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿವೆ ಎಂದು ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಯ ವ್ಯವಸ್ಥಾಪಕರ ಗಮನಕ್ಕೆ ತಂದರು.

“ಕಟ್ಟಡವನ್ನು ಕೆಡವಲಾಗಿದೆ. ಹೀಗಾಗಿ, ಸದ್ಯ ಬೆಡ್ ಕೊರತೆ ಸಾಕಷ್ಟಿದ್ದು, ಜನಗಳ ಸಂಖ್ಯೆ ಹೆಚ್ಚಾಗಿದೆ. ಈ ನಡುವೆಯೂ ನಾವು ನಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ. ಔಷಧಿಗಳು ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ವೇಳೆ ಹೊರಗಡೆಯಿಂದ ತರಲು ಕೇಳಲಾಗುತ್ತಿದೆ.

ತಾಲೂಕು ಮಟ್ಟದ ಆಸ್ಪತ್ರೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ. ಬೆಡ್ ಕೊರತೆಯಿಂದ ಕೆಲವೊಮ್ಮೆ ಒಂದೇ ಬೆಡ್‌ನಲ್ಲಿ ಇಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಚಂದ್ರು ಅವರಿಗೆ ವೈದ್ಯಾಧಿಕಾರಿಗಳು ಭರವಸೆ ನೀಡಿದರು.

ಈ ವೇಳೆ ಎಎಪಿ ಸಂಘಟನಾ ಕಾರ್ಯದರ್ಶಿ ಅರ್ಜುನ್ ಹಲಗಿ ಗೌಡ, ರಾಜ್ಯ ಉಪಾಧ್ಯಕ್ಷ ದುರ್ಗಯ್ಯ ನವಲಿ ಮಠ, ರಾಜ್ಯ ಕಾರ್ಯದರ್ಶಿ ಬಸವರಾಜ್ ಮುದಿಗೌಡರ್, ರವಿಕುಮಾರ್ ಸೇರಿದಂತೆ ಜಿಲ್ಲಾ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಇದ್ದರು.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ