NEWSಉದ್ಯೋಗನಮ್ಮಜಿಲ್ಲೆ

ಏಕಕಾಲಕ್ಕೆ 5 ಪರೀಕ್ಷೆ: ಗೊಂದಲದಲ್ಲಿ ಅಭ್ಯರ್ಥಿಗಳು – ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅ.28ರಿಂದ 30ರ ವರೆಗೆ ನಡೆಸಲು ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯು ಅಭ್ಯರ್ಥಿಗಳ ಗೊಂದಲಕ್ಕೆ ಕಾರಣವಾಗಿದೆ. ಪ್ರತಿ ನಿಗಮ ಮಂಡಳಿಗಳ ಪರೀಕ್ಷೆಯನ್ನು ಪ್ರತ್ಯೇಕವಾಗಿ ನಡೆಸುವಂತೆ ಆಗ್ರಹ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕಟ್ಟಡ ನಿರ್ಮಾಣ ಮತ್ತು ಕಾರ್ವಿುಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿರುವ ವಿವಿಧ 700ಕ್ಕೂ ಹೆಚ್ಚಿನ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.

ಆದರೆ, ಅ.28ರಂದು ವಿದ್ಯುನ್ಮಾನ ನಿಗಮದ ಆಪ್ತ ಕಾರ್ಯದರ್ಶಿ- ಗ್ರೂಪ್-ಸಿ ಹುದ್ದೆ, ಹಿರಿಯ ಸಹಾಯಕ (ತಾಂತ್ರಿಕ/ತಾಂತ್ರಿಕೇತರ), ಸಹಾಯಕ (ತಾಂತ್ರಿಕ/ತಾಂತ್ರಿಕೇತರ) ಪರೀಕ್ಷೆಗಳು. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಹಿರಿಯ ಸಹಾಯಕ, ಕಾರ್ವಿುಕ ಮಂಡಳಿಯ ಪ್ರಥಮ ದರ್ಜೆ ಸಹಾಯಕ ಗ್ರೂಪ್-ಸಿ, ಆಪ್ತ ಸಹಾಯಕ, ಎಂಎಸ್​ಐಎಲ್​ನ ಸೇಲ್ಸ್ ಮೇಲ್ವಿಚಾರಕ, ಮಾರಾಟ ಪ್ರತಿನಿಧಿ, ಸೇಲ್ಸ್ ಇಂಜಿನಿಯರ್ (ಮೆಕಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಇ ಆಂಡ್ ಸಿ), ಲೆಕ್ಕ ಗುಮಾಸ್ತ ಮತ್ತು ಗುಮಾಸ್ತ ಹುದ್ದೆಗಳಿಗೆ ಒಂದೇ ದಿನ ಪರೀಕ್ಷೆ ನಡೆಸುತ್ತಿದೆ.

ಇದೇ ರೀತಿ ಅ.29 ಮತ್ತು 30ರಂದು ಕೂಡ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿವಿಧ ನಿಗಮ ಮಂಡಳಿಗಳಲ್ಲಿರುವ ಹುದ್ದೆಗಳಿಗೆ ಒಂದಕ್ಕಿಂತ ಹೆಚ್ಚಿನ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಒಂದೇ ಪರೀಕ್ಷೆ ಬರೆಯಲು ಅವಕಾಶವಿದೆ. ಹೆಚ್ಚಿನ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಇದರಿಂದ ಇತರೆ ಇಲಾಖೆಯಲ್ಲಿರುವ ಹುದ್ದೆ ಕೈತಪ್ಪಲಿದೆ. ಹೀಗಾಗಿ ಪ್ರತ್ಯೇಕವಾಗಿ ಪ್ರತಿ ನಿಗಮದ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಆತಂಕ ಬೇಡ ಎಂದ ಕೆಇಎ: ಒಂದಕ್ಕಿಂತ ಹೆಚ್ಚು ಇಲಾಖೆಗಳ ಒಂದೇ ಕೇಡರ್​ಗೆ ಸಂಬಂಧಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಒಂದೇ ಪರೀಕ್ಷೆಯನ್ನು ಬರೆದರೆ ಸಾಕು ಅದನ್ನು ಅದೇ ಕೇಡರ್​ನ ಮತ್ತೊಂದು ನಿಗಮ ಪರೀಕ್ಷೆಗೂ ಅನ್ವಯಿಸಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

2 ಪರೀಕ್ಷೆಗಳಿಗೆ ಶುಲ್ಕ ವಸೂಲಿ: ಅಭ್ಯರ್ಥಿಗಳು ಎಷ್ಟು ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುತ್ತಾರೋ ಅಷ್ಟೂ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ಕೆಇಎ ಶುಲ್ಕವನ್ನು ಪಾವತಿಸಿಕೊಂಡಿದೆ. ಆದರೆ, ಒಂದೇ ಕೇಡರ್​ನಲ್ಲಿನ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗಳಿಗೆ ಒಂದೇ ಪರೀಕ್ಷೆ ನಡೆಸಿದರೆ ಹೇಗೆ? ಹಾಗಾದರೆ, ಒಂದೇ ಕೇಡರ್​ನ ಪರೀಕ್ಷೆಗಳಿಗೆ ಒಂದೇ ಶುಲ್ಕ ಪಡೆಯಬೇಕಿತ್ತು. ಎರಡು ಪರೀಕ್ಷೆಗಳಿಗೆ ಶುಲ್ಕ ಪಡೆದು ಒಂದೇ ಪರೀಕ್ಷೆ ನಡೆಸುವುದು ಎಷ್ಟು ಸರಿ ಎಂಬುದು ಅಭ್ಯರ್ಥಿಗಳ ಪ್ರಶ್ನೆಯಾಗಿದೆ.

ನಿಗಮ ಮಂಡಳಿಗಳ ಭಾಷಾ ಪರೀಕ್ಷೆಗಳಾದ ಕನ್ನಡ/ಇಂಗ್ಲಿಷ್ ಮತ್ತು ಸಾಮಾನ್ಯ ಪರೀಕ್ಷೆಗಳಿಗೆ ಮಾತ್ರ ಒಂದೇ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪತ್ರಿಕೆ-2 ಅನ್ನು ಆಯಾ ನಿಗಮ ಮಂಡಳಿಗಳಿಗೆ ಪ್ರತ್ಯೇಕವಾಗಿಯೇ ನಡೆಸಲಾಗುತ್ತದೆ. ಈ ಸಂಬಂಧ ವಿವರಣಾತ್ಮಕವಾಗಿ ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಸ್ಪಷ್ಟನೆ ನೀಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು