Vijayapatha – ವಿಜಯಪಥ
Friday, November 1, 2024
CrimeNEWSನಮ್ಮಜಿಲ್ಲೆ

ಗದಗ: NWKRTC ಬಸ್‌ ಟಾಟಾಸುಮೋ ನಡುವೆ ಡಿಕ್ಕಿ ಐವರು ಸಾವು, ಹಲವರಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಗದಗ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಟಾಟಾ ಸುಮೋ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯತು ಸೇರಿದಂತೆ ಐವರು ಮೃತಪಟ್ಟಿದ್ದು ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೃತರು ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ. ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಈ ಘಟನೆಯಲ್ಲಿ ಟಾಟಾ ಸುಮೋದಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ಸಾರಿಗೆ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಟಾಟಾ ಸುಮೋದಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದ್ದರಿಂದ ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ.

ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಉಂಟಾಗಿದ್ದ ಟ್ರಾಫಿಕ್‌ ಕ್ಲಿಯರ್ ಮಾಡಿದರು.

ರಸ್ತೆ ಬದಿ ಮನೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್: ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಆಗ್ಗುಂದ ಗ್ರಾಮ ಬಳಿ ನಡೆದಿದೆ. ಅರಸೀಕೆರೆಯಿಂದ ಹುಳಿಯಾರಕ್ಕೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಗ್ಗುಂದ ಗ್ರಾಮದ ಮನಯೊಂದಕ್ಕೆ ನುಗ್ಗಿದೆ. ಘಟನೆಯಲ್ಲಿ ನಾಲ್ಕೈದು ಮಂದಿಗೆ ಸಣ್ಣ ಪುಟ್ಚ ಗಾಯಗಳಾಗಿದ್ದು, ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ