NEWSನಮ್ಮಜಿಲ್ಲೆ

ಮನೆಯೇ ಮಂತ್ರಾಲಯ ಜತೆಗೆ ಇಂದು ಮನೆಯೇ ಆರೋಗ್ಯಾಲಯ

ರಾಮನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಭೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕೋವಿಡ್-19 ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಏ.14ರವರೆಗೆ ಮನೆಯ ಒಳಗೆ ಇರುವಂತೆ ತಿಳಿಸಲಾಗಿದೆ. ಮನೆಯಲ್ಲಿಯೇ ಇದ್ದು ಆರೋಗ್ಯ ಕಪಾಡಿಕೊಳ್ಳಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕೋವಿಡ್ -19 ಹರಡಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅವರು ಪ್ರತಿ ದಿನ ಶ್ರಮ ಪಡುತ್ತಿದ್ದಾರೆ. ಅವರ ಶ್ರಮವನ್ನು ಅರ್ಥ ಮಾಡಿಕೊಳ್ಳಿ. ಅತಿ ಜರೂರು ಕೆಲಸ ಇದ್ದಾರೆ ಮಾತ್ರ ಮನೆಯಿಂದ ಹೊರಗೆ ಬನ್ನಿ ಎಂದು ಸಲಹೆ ನೀಡಿದರು.

ಕೊರೋನಾ ವೈರಸ್ ಸೋಂಕಿಗೆ ಯಾವುದೇ ಔಷಧ ಇಲ್ಲ ಸಾಮಾಜಿಕ ಅಂತರ ಕಾಯ್ದುಕೊಂಡು, ರೋಗ ತಡೆಗಟ್ಟಬಹುದು. ಜಿಲ್ಲೆಯಲ್ಲಿ ಕೋವಿಡ್ ಗೆ ಸಂಬಂಧಿಸಿದಂತೆ 134 ಮಂದಿಯ ಮೇಲೆ ನಿಗಾ ವಹಿಸಲಾಗಿದೆ. 71 ಜನ 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದರು.

ಜಿಲ್ಲೆಯಲ್ಲಿ ಕೋವಿಡ್-19ಗಾಗಿ 80 ಹಾಸಿಗೆಯನ್ನು ಆಸ್ಪತ್ರೆಯಲ್ಲಿ ಸಿದ್ಧಪಡಿಸಲಾಗಿದೆ. ಮುಂದುವರಿದಂತೆ ಇನ್ನೂ 100 ಹಾಸಿಗೆಯನ್ನು ಸಿದ್ಧಪಡಿಸಲಾಗುವುದು. ತೀವ್ರ ನಿಗಾ ಘಟಕದಲ್ಲಿ ಕಾರ್ಯನಿರ್ವಹಿಸಲು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಲು ನುರಿತ ವೈದ್ಯರ ತಂಡವನ್ನು ಕಳುಹಿಸಿಕೊಡಲಾಗುವುದು ಎಂದರು.

ಸಂಸದ ಡಿ.ಕೆ. ಸುರೇಶ್ ಮಾತನಾಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಪ್ರತಿ ದಿನ ಆಟೋ ಮೂಲಕ ಪ್ರಚಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮಾತನಾಡಿ, ಜಿಲ್ಲೆಯಲ್ಲಿ ಥರ್ಮಲ್ ಕೊರತೆ ಇದ್ದು, ಒದಗಿಸಿಕೊಡಬೇಕು. ಜಿಲ್ಲೆಯಲ್ಲೇ ಸ್ಯಾನಿಟೈಸರ್‌ನ್ನು ತಯಾರಿಸಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯಿತಿಗೂ ಒದಗಿಸಲಾಗುವುದು. ವಲಸೆ ಬಂದಿರುವ ಕಾರ್ಮಿಕರನ್ನು ಈ ಸಂದರ್ಭದಲ್ಲಿ ಪುನಃ ಅವರ ಜಿಲ್ಲೆಗಳಿಗೆ ಕಳುಹಿಸುವುದು ಕಷ್ಟಕರವಾಗಿರುತ್ತದೆ. ಅವರಿಗೆ ಬೇಕಿರುವ ಆಹಾರವನ್ನು ವ್ಯವಸ್ಥೆ ಮಾಡಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್, ಉಪವಿಭಾಗಾಧಿಕಾರಿ ದ್ರಾಕ್ಷಾಯಿಣಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಪದ್ಮಾ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ