ಬೆಂಗಳೂರು: ಜುಲೈ 1 ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿ ಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶಹೊರಡಿಸಿದ್ದು, ಅದೇ ರೀತಿ ರಾಜ್ಯ ಸರ್ಕಾರವು ಕೂಡ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿದಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.
ಈ ಸಂಬಂಧ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿದೆ.
ಪ್ರಸ್ತುತ ಕೇಂದ್ರ ಸರ್ಕಾರವು ಈ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿ 01-07-2023ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆದ್ದರಿಂದ ತಾವು ಕೂಡ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 01-02-2023ರಿಂದ ಪೂರ್ವಾನ್ವಯವಾಗುವಂತೆ ಶೇ.4ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪಾದಲ್ಲಿ ನೀಡಿ ಆದೇಶ ಹೊರಡಿಸಲು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮನವಿ ಮಾಡಿದ್ದಾರೆ.