NEWSನಮ್ಮರಾಜ್ಯರಾಜಕೀಯ

ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳಬೇಕು: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯ ನವರೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ ಎಂದು ಟ್ವೀಟ್‌ ಮುಲಕ ಕಿಡಿಕಾರಿದ್ದಾರೆ.

ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ?

ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು ಅಲ್ವ ಎಂದು ಕೇಳಿದ್ದಾರೆ.

ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!!.

ವೆಸ್ಟ್ ಎಂಡ್‌ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ