NEWSನಮ್ಮರಾಜ್ಯಬೆಂಗಳೂರು

ಸಂವಿಧಾನ ಗೌರವಿಸುತ್ತೀರಿ ಎಂದಾದರೆ ಜಗದೀಶ್‌ ಗುಡಗಂಟಿಯ ಪಕ್ಷದಿಂದ ಉಚ್ಛಾಟಿಸಿ: ಬಿಜೆಪಿಗೆ ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೀಸಲಾತಿಯನ್ನು ತೆಗೆದು ಒಗೆಯಿರಿ ಎಂದಿರುವ ಜಮಖಂಡಿ ಬಿಜೆಪಿ ಶಾಸಕ ಜಗದೀಶ್‌ ಗುಡಗುಂಟಿ ಅವರ ಹೇಳಿಕೆಗೆ ಆಮ್‌ ಆದ್ಮಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿದ ಜಗದೀಶ್‌ ಗುಡಗಂಟಿ ಮೀಸಲಾತಿ ತೆಗೆಯಿರಿ, ಎಲ್ಲರೂ ಟಾಪ್ ಕ್ಲಾಸ್​ನಲ್ಲಿ ಬಂದುಬಿಡುತ್ತಾರೆ ಎಂದು ಹೇಳಿರುವ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಕಿಡಿಕಾರಿದ ಎಎಪಿ ಮುಖಂಡ ಜಗದೀಶ್‌ ವಿ. ಸದಂ ಬಿಜೆಪಿಗರು ಸಂವಿಧಾನ ವಿರೋಧಿಗಳು ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ಸದಂ, ಬಡವರು ಮತ್ತು ಹಿಂದುಳಿದವರು ಎಲ್ಲರಂತೆ ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಜೆಪಿಗರು ಸಹಿಸುವುದಿಲ್ಲ. ಎಸ್‌ಸಿ/ಎಸ್‌ಟಿ ಸೇರಿದಂತೆ ಇತರೆ ಹಿಂದುಳಿದ ವರ್ಗದವರು ಹಿಂದಿನಂತೆ ಕೂಲಿಗಳಾಗಿ, ಜೀತದಾಳುಗಳಾಗಿ ಬದುಕಬೇಕೆಂದು ಬಯಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬಿಜೆಪಿಗರು ಪ್ರಜಾಪ್ರಭುತ್ವ ವಿರೋಧಿಗಳು. ಇವರು ವಾಸ್ತವದಲ್ಲಿ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವಕ್ಕೆ ಗೌರವ ಕೊಡುವುದಿದ್ದರೆ ತಕ್ಷಣ ಜಗದೀಶ್‌ ಗುಡಗಂಟಿ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಒತ್ತಾಯಿಸಿದರು.

ಮೀಸಲಾತಿ ಹಕ್ಕು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಕೊಟ್ಟಿರುವ ಅತ್ಯಮೂಲ್ಯ ಕೊಡುಗೆಯಾಗಿದೆ. ಮೀಸಲಾತಿಯು ನಮ್ಮ ದೇಶದ ದೃಢೀಕರಣದ ಒಂದು ವ್ಯವಸ್ಥೆಯಾಗಿದ್ದು ಅದು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಐತಿಹಾಸಿಕವಾಗಿ ಅನನುಕೂಲಕರ ಗುಂಪುಗಳಿಗೆ ಪ್ರಾತಿನಿಧ್ಯವನ್ನು ಒದಗಿಸುತ್ತದೆ. ಇದನ್ನು ಮೊದಲು ಅರಿಯಬೇಕು ಎಂದು ತಿಳಿಸಿದರು.

ಇನ್ನು ಭಾರತೀಯ ಸಂವಿಧಾನದಲ್ಲಿನ ನಿಬಂಧನೆಗಳ ಆಧಾರದ ಮೇಲೆ, ಇದು ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಮತ್ತು ಪ್ರಾಂತ್ಯಗಳಿಗೆ ಮೀಸಲು ಕೋಟಾಗಳು ಅಥವಾ ಸೀಟುಗಳನ್ನು ಹೊಂದಿಸಲು ಅನುಮತಿಸುತ್ತದೆ. ಮೀಸಲಾತಿಯು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ನಾಗರಿಕರಿಗೆ ಪರೀಕ್ಷೆಗಳು, ಉದ್ಯೋಗಾವಕಾಶಗಳು ಇತ್ಯಾದಿಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ