CrimeNEWSನಮ್ಮಜಿಲ್ಲೆ

KKRTC ಬೀದರ್‌: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ- ಸುನೀಲಸಿಂಗ್ ರಜಪೂತ ನಿಧನ

ವಿಜಯಪಥ ಸಮಗ್ರ ಸುದ್ದಿ

ಬೀದರ್‌: ಬೆಂಗಳೂರು-ಬೀದರ್‌ ಮಾರ್ಗದಲ್ಲಿ ಕರ್ತವ್ಯದ ನಿರ್ವಹಿಸುವಾಗ ಹೃದಯಾಘಾತಕ್ಕೊಳಗಾದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ್‌ ಘಟಕ ಒಂದರ ಚಾಲಕ -ಕಂ-ನಿರ್ವಾಹಕ ಸುನೀಲ ಸಿಂಗ್ ರಜಪೂತ (45) ನಿಧನರಾಗಿದ್ದಾರೆ.

ಮಂಗಳವಾರ (ನಿನ್ನೆ ) ದಸರಾ ಹಿನ್ನೆಲೆ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿತ್ತು. ಈ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಾಯಂಕಾಲ 6ಗಂಟೆ ಸುಮಾರಿಗೆ ಬೀದರ್‌ ಕೇಂದ್ರ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.

ಬೀದರ್‌- ಬೆಂಗಳೂರು ಮಾರ್ಗದಲ್ಲಿ ಕರ್ತವ್ಯದ ನಿರ್ವಹಿಸುವಾಗ ಈ ಅವಘಡ ಸಂಭವಿಸಿದೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ- ಸ್ನೇಹಿತರನ್ನು ಅಗಲಿದ್ದಾರೆ.

ಇಂದು ಬುಧವಾರ (ಅ.25) ಮಧ್ಯಾಹ್ನ ಸ್ವಗ್ರಾಮ ಕುಮಾರ ಚಿಂಚೊಳಿಯ ಅವರ ಹೊಲದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ