ಬೆಂಗಳೂರು: ಆಮ್ ಆದ್ಮಿ ಪಕ್ಷದ ಸಂಘಟನೆ ಕ್ರಮದ ಭಾಗವಾಗಿ ಪಕ್ಷದ ಕಾರ್ಯದರ್ಶಿ, ಉಪಾಧ್ಯಕ್ಷರ ನೇಮಕ ಸೇರಿದಂತೆ ಹಲವು ನಾಯಕರಿಗೆ ವಿವಿಧ ಜವಾಬ್ದಾರಿಗಳನ್ನು ನೀಡಲಾಗಿದೆ ಎಂದು ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಅವರು, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಮೋಹನ್ ದಾಸರಿ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರನ್ನಾಗಿ ವಿಜಯ್ ಶರ್ಮಾ ಮತ್ತು ಶಾಂತಲಾ ದಾಮ್ಲೆ ಅವರನ್ನು ನೇಮಿಸಲಾಗಿದೆ. ಮಾಲವಿಕ ಗುಬ್ಬಿವಾಣಿಯವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ನವೀನಚಂದ್ರ ಪೂಜಾರಿ, ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಲೋಹಿತ್ ಹನುಮಾಪುರ, ಯುವ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಗಿರೀಶ್ ನಾಯ್ಡು, ರಾಜ್ಯ ಕಾಫಿ ಬೆಳೆಗಾರರ ಘಟಕದ ಅಧ್ಯಕ್ಷರನ್ನಾಗಿ ಹೇಮಂತ್ ಕುಮಾರ್ ಅವರನ್ನು ನೇಮಕ ಮಾಡಿಲಾಗಿದೆ.
ಇನ್ನು ರಾಜ್ಯ ಆಟೋ ಚಾಲಕರ ಘಟಕದ ಅಧ್ಯಕ್ಷರಾಗಿ ಆಯುಬ್ ಖಾನ್, ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಗೀತಾ ಎಂ. ಯಾಡಗಿ, ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ರಾಜೇಶ್ವರಿ ಮತ್ತು ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿಯನ್ನಾಗಿ ಜ್ಯೋತಿ ವಿ. ಅವರನ್ನು ನೇಮಿಸಲಾಗಿದೆ ಎಂದು ಹೇಳಿದರು.