NEWSನಮ್ಮಜಿಲ್ಲೆ

 ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಿ

ಚಿಕ್ಕಮಗಳೂರು ಅಧಿಕಾರಿಗಳಿಗೆ ಸಚಿವ ಸಿ.ಟಿ. ರವಿ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕೊರೊನಾ ಸೋಂಕಿನಿಂದ ವಿಶ್ವವೇ ತತ್ತರಿಸಿದ್ದು, ನಮ್ಮ ಜಿಲ್ಲೆಗೆ ಯಾವುದೇ ರೀತಿಯಲ್ಲೂ ಸೋಂಕು ಹರಡದಂತೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಹರಡದಂತೆ ಕ್ರಮಗಳನ್ನು ಕೈಗೊಂಡಿದ್ದು, ಆಶಾ ಕಾರ್ಯಕರ್ತೆಯರು, ತಹಸೀಲ್ದಾರ್‌ರರು ಹಾಗೂ ಆರೋಗ್ಯ ಅಧಿಕಾರಿಗಳನ್ನೊಳಗೊಂಡ ಅನೇಕ ಸಭೆಗಳನ್ನು ನಡೆಸಲಾಗಿದ್ದು,  ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ಒಟ್ಟಾರೆಯಾಗಿ ಜಿಲ್ಲೆಯಲ್ಲಿ 87 ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು, ೩ ಜನರಲ್ಲಿ ರೋಗದ ಲಕ್ಷಣಗಳು ಕಾಣಿಸಿದ್ದು ಅವು ಕೂಡ ನಕಾರತ್ಮಕ (ನೆಗೆಟಿವ್) ಎಂದು ದೃಢಪಟ್ಟಿವೆ. ಜಿಲ್ಲೆಯಲ್ಲಿ ಒಟ್ಟು 1177 ಎನ್-95 ಮಾಸ್ಕ್‌ಗಳಿದ್ದು, ಚಿಕ್ಕಮಗಳೂರು ತಾಲ್ಲೂಕಿನಲ್ಲಿ 351 ಎನ್-19 ಮಾಸ್ಕ್‌ಗಳಿವೆ ಹಾಗೂ ತ್ರಿಬಲ್ ಎ ಒಟ್ಟು 17520ಮಾಸ್ಕ್‌ಗಳು, ಜಿಲ್ಲೆಯಲ್ಲಿ ಒಟ್ಟು 17030 ಹ್ಯಾಂಡ್‌ಗ್ಲೌಸ್ ಮತ್ತು ತಾಲೂಕಿನಲ್ಲಿ ಖಾಸಗಿ ಹಾಗೂ ಜಿಲ್ಲಾಸ್ಪತ್ರೆಯನ್ನು ಒಳಗೊಂಡಂತೆ ಒಟ್ಟು 12 ವೆಂಟಿಲೇಟರ್‌ಗಳು ಇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 247 ಜನರು ಗೃಹ ನಿರ್ಬಂಧನದಲ್ಲಿದ್ದು, ಚಿಕ್ಕಮಗಳೂರು ತಾಲ್ಲೂಕಿನಲ್ಲಿ 87 ಜನರನ್ನು  ಗೃಹ ನಿರ್ಬಂಧನದಲ್ಲಿ ಇರಿಸಿ ಅಂತವರ ಮೇಲೆ ಹೆಚ್ಚಾಗಿ ನಿಗಾ ವಹಿಸಿ ಕೈಗೆ ಮುದ್ರೆ ಹಾಕಿ ಅವರ ಮನೆಗಳ ಮೇಲೆ ನೋಟಿಸ್‌ಗಳನ್ನು ಅಂಟಿಸಲಾಗಿದ್ದು ಬೇರೆ ಯಾರ ಜೊತೆ ಸಂಪರ್ಕದಲ್ಲಿ ಇರದಂತೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ 60 ಕ್ಕೂ ಹೆಚ್ಚು ನಿರ್ಗತಿಕರಿದ್ದು ಚಿಕ್ಕಮಗಳೂರು ತಾಲೂಕಿನಲ್ಲಿ 34 ಜನರಿದ್ದಾರೆ. ಅವರಿಗೆ ನಗರದ ಎಐಟಿ ಬಳಿ ಇರುವ ಬಿ.ಸಿ.ಎಂ ಹಾಸ್ಟೆಲ್‌ನ ಒಂದು ಕೊಠಡಿಯಲ್ಲಿ ಇರಿಸಿ ಎನ್.ಜಿ.ಓ ಗಳ ಮುಖಾಂತರ ಊಟದ ವ್ಯವಸ್ಥೆಯ ಅವಕಾಶ ಕಲ್ಪಿಸಲಾಗಿದ್ದು, ಎಲ್ಲರಿಗೂ ಅಗತ್ಯವಾಗಿ ಆರೋಗ್ಯ ಚಿಕಿತ್ಸೆ ಮಾಡುವುದಾಗಿ ಹಾಗೂ ಅಲೇಮಾರಿಗಳು ಇದ್ದಲ್ಲಿ ಅವರಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ಒದಗಿಸುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು526 ನ್ಯಾಯಬೆಲೆ ಅಂಗಡಿಗಳಿದ್ದು, 2 ತಿಂಗಳ ಪಡಿತರವನ್ನು  ಒಟ್ಟಿಗೆ ನೀಡುವಂತೆ ಆಹಾರ ಮತ್ತು ಸರಬರಾಜು ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು ಹಾಗೂ ಪಡಿತರ ನೀಡುವಾಗ ಮುನ್ನೆಚ್ಚರಿಕಾ ಕ್ರಮವಾಗಿ ಬೆರಳಚ್ಚು ನೀಡುವಾಗ ಮತ್ತು ನೀಡಿದ ನಂತರದಲ್ಲಿ ಸ್ಯಾನಿಟೈಸರ್‌ಗಳನ್ನು ಬಳಸಿ, ಸಾರ್ವಜನಿಕರು ಅಂತರವನ್ನು ಕಾಯ್ದಿರಿಸುವಂತೆ  ಎಚ್ಚರ ವಹಿಸಿ ಎಂದರು.

ಜನದಟ್ಟಣೆ ಆಗದಂತೆ ನೋಡಿಕೊಳ್ಳಲು ಟೋಕನ್ ನೀಡಿ ಪಡಿತರವನ್ನು ವಿತರಿಸಬೇಕು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಾರ್ಚ್ 31 ರವರೆಗೆ ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳ ಮನೆಗಳಿಗೆ ಹೋಗಿ ಆಹಾರ ಧಾನ್ಯವನ್ನು ನೀಡಲಿದ್ದಾರೆ ಎಂದರು.

ಗ್ರಾಮೀಣ ಪ್ರದೇಶದ ದಿನಸಿ ಅಂಗಡಿ ಮಾಲೀಕರು ನಗರ ಹಾಗೂ ಪಟ್ಟಣದಿಂದ ದಿನಸಿಯನ್ನು ತೆಗೆದುಕೊಂಡು ಹೋಗುವುದಕ್ಕೆ ಯಾವುದೇ ನಿರ್ಬಂಧವಿಲ್ಲ, ಲಗೇಜ್ ವಾಹನಗಳಲ್ಲೇ ದಿನಸಿ ತೆಗೆದುಕೊಂಡು ಹೋಗಬಹುದು ಎಂದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ