NEWSಕೃಷಿನಮ್ಮರಾಜ್ಯ

‘ದಾರಿ’ ಸಮಸ್ಯೆ ನಿವಾರಿಸಿ ಕಾಲುದಾರಿ, ಬಂಡಿದಾರಿಗೆ ಅನುವು ಮಾಡಲು ತಹಸೀಲ್ದಾರರಿಗೆ ಸರ್ಕಾರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿಯವರ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿಗೆ ಅನುವು ಮಾಡಿಕೊಡಲು ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಆದೇಶದ ಸುತ್ತೋಲೆಯಲ್ಲಿ, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂ ಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಈ ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುತ್ತವೆ ಎಂದು ಕಂದಾಯ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದರೂ ಕೆಲವು ಭೂ ಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ – ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ, ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬಂದಿದೆ.

ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ, ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.

The Indian Easement Act, 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು, ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ, ಈ ಬಗ್ಗೆ ಕ್ರಮ ವಹಿಸಲು ಅವಕಾಶ ಇದೆ ಎಂದು ಕಂದಾಯ ಇಲಾಖೆ (ಭೂ ಮಂಜೂರಾತಿ-1)ಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಮ್ಮ ಸಿ. ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತಿ ತಹಸೀಲ್ದಾರರು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮ ವಹಿಸುವ ಅಧಿಕಾರ ಹೊಂದಿದ್ದಾರೆ.

ಅದರಂತೆ, ಆಯಾ ತಾಲೂಕಿನ ತಹಸೀಲ್ದಾರರು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ದಾರಿಗಳನ್ನು ಸುಗಮಗೊಳಿಸಲು ಕ್ರಮ ವಹಿಸುವಂತೆ ರಾಜ್ಯದ ಎಲ್ಲ ಸಹಸೀಲ್ದಾರರಿಗೂ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ