ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 2285 ನಿರ್ವಾಹಕರು ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆಪಟ್ಟಿಯನ್ನು 2025ರ ಜನವರಿ 20 ರಂದು ಬಿಡುಗಡೆ ಮಾಡಲಾಗಿತ್ತು.
ಆ ಆಯ್ಕೆಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಯ ಶೇಕಡವಾರು (ಕಟ್ ಆಫ್) ಅಂಕಗಳ ವಿವರಗಳನ್ನು ಬಿಡುಗಡೆ ಮಾಡಿ, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸ್ವೀಕೃತ ಆಕ್ಷೇಪಣೆಗಳನ್ನು ಪರಿಶೀಲನೆ ಮಾಡಿ, ನಿನ್ನೆ (ಮೇ 05, 2025 ) ಅಂತಿಮ ಆಯ್ಕೆಪಟ್ಟಿಯನ್ನು ಹಾಗೂ ಮೀಸಲಾತಿವಾರು ಕೊನೆ ಅಭ್ಯರ್ಥಿಗಳ ಕಟ್‌ಆಫ್ ಅಂಕಗಳನ್ನು, ಹುಟ್ಟಿದ ದಿನಾಂಕದ ವಿವರ ಸಹಿತ ಬಿಡುಗಡೆ ಮಾಡಲಾಗಿದೆ.
ನಿರ್ವಾಹಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಈ ಕೆಳಕಂಡ ಕೆಲವು ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಪ್ರಕಟಿಸಲಾಗಿದೆ. 1) ಅಂತಿಮ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದ ಮಾತ್ರಕ್ಕೆ ಅಭ್ಯರ್ಥಿಯು ಆಯ್ಕೆ / ನೇಮಕಾತಿಗೆ ಯಾವುದೇ ವಿಧವಾದ ಹಕ್ಕು ಹೊಂದಿರುವುದಿಲ್ಲ.
2) ದಿನಾಂಕ 01-09-2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಶೇಕಡ.75 ರಷ್ಟು ಮತ್ತು ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿನ ಶೇಕಡ.25 ರಷ್ಟು ಅಂಕಗಳನ್ನು ಸೇರಿಸಿ ಒಟ್ಟು ಶೇ. ಅಂಕಗಳ ಅರ್ಹತೆ ಮತ್ತು ಮೀಸಲಾತಿ ನಿಯಮಾನುಸಾರ ಈ ಅಂತಿಮ ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ.
3) ಅಭ್ಯರ್ಥಿಗಳು ಸಲ್ಲಿಸಿರುವ ದಾಖಲಾತಿಗಳು ಅಂದರೆ, ಶೈಕ್ಷಣಿಕ ವಿದ್ಯಾರ್ಹತೆ, ಮೀಸಲಾತಿ ಮತ್ತು ಇನ್ನಿತರೆ ದಾಖಲಾತಿಗಳು ಸಂಬಂಧಿಸಿದ ಪ್ರಾಧಿಕಾರಿಗಳಿಂದ ಪರಿಶೀಲನಾ ವರದಿ ಮತ್ತು ಪೂರ್ವೋತ್ತರ ನಡೆತೆಯ ತನಿಖಾ ವರದಿಗೆ ಒಳಪಟ್ಟಿರುತ್ತದೆ.
4) ಆಯ್ಕೆಯಾದ ಅಭ್ಯರ್ಥಿಗಳು ಕರಾರಸಾಸಂ (ಪದವೃಂದ ಮತ್ತು ನೇಮಕಾತಿ) ನಿಯಮಾವಳಿ 1992ರ ಷೆಡ್ಯೂಲ್ ‘ಬಿ’ ಮತ್ತು ಅನುಬಂಧ ‘ಬಿ’ ರಲ್ಲಿ ತಿಳಿಸಿರುವಂತೆ ಕಣ್ಣು ಪರೀಕ್ಷೆ ಹಾಗೂ ಇತರೆ ವೈದ್ಯಕೀಯ ಪರೀಕ್ಷೆಗಳನ್ನು ಜಿಲ್ಲಾ ವೈದ್ಯಾಧಿಕಾರಿ ಹಾಗೂ ಸೂಕ್ತ ವೈದ್ಯಕೀಯ ಪ್ರಾಧಿಕಾರದಿಂದ ವೈದ್ಯಕೀಯ ಪ್ರಮಾಣಪತ್ರವನ್ನು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವ ಸಮಯದಲ್ಲಿ ಸಲ್ಲಿಸತಕ್ಕದ್ದು.
5) ಆಯ್ಕೆಪಟ್ಟಿಯಲ್ಲಿರುವ ಅಭ್ಯರ್ಥಿಗಳಲ್ಲಿ ಎಸ್‌ಎಸ್‌ಎಲ್‌ಸಿ / ಪಿಯುಸಿ / ತತ್ಸಮಾನ ವಿದ್ಯಾರ್ಹತೆಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಸಿಸದವರು ನೇಮಕಾತಿ ಪೂರ್ವದಲ್ಲಿ ನೇಮಕ ನಿಯಮಾವಳಿ 4 (8) ರ ಅನ್ವಯ ಸಂಸ್ಥೆಯ ವತಿಯಿಂದ ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಒಂದೇ ಬಾರಿಗೆ ಉತ್ತೀರ್ಣರಾಗುವುದು. ತಪ್ಪಿದ್ದಲ್ಲಿ ಅವರ ಆಯ್ಕೆಯ ಹಕ್ಕನ್ನು ಕಳೆದುಕೊಳ್ಳಲಿರುವರು.
6) ಆಯ್ಕೆಗೊಂಡ ಹುದ್ದೆಯಲ್ಲಿ ಅಭ್ಯರ್ಥಿಗಳು ಒಂದು (1) ವರ್ಷಕಾಲ ವೃತ್ತಿ ತರಬೇತಿಗೆ ಒಳಪಡುವುದು. ಆಯ್ಕೆ / ನೇಮಕಾತಿಗೆ ಸಂಬಂಧಿಸಿದಂತೆ ಸಂಸ್ಥೆಯು ತೆಗೆದುಕೊಳ್ಳುವ ನಿರ್ಧಾರಗಳು ಅಂತಿಮವಾಗಿರುತ್ತವೆ ಎಂದು ಸಂಸ್ಥೆಯ ಆಯ್ಕೆ ಸಮಿತಿ ಅಧ್ಯಕ್ಷರಾದ ನಿರ್ದೇಶಕರು (ಭದ್ರತಾ ಮತ್ತು ಜಾಗೃತ) ತಿಳಿಸಿದ್ದಾರೆ.
ಇನ್ನು ಬಿಎಂಟಿಸಿ ನಿರ್ವಾಹಕರ ಅಂತಿಮ ಆಯ್ಕೆಪಟ್ಟಿ, ಕಟ್‌ಆಫ್ ಅಂಕ ಚೆಕ್ ಮಾಡಲು…:
– ವೆಬ್ ವಿಳಾಸ https://mybmtc.karnataka.gov.in/ ಗೆ ಭೇಟಿ ನೀಡಿ.
– ಹೋಮ್‌ಪೇಜ್ ಓಪನ್ ಆಗುತ್ತದೆ. ಇಲ್ಲಿ ‘Recruitment’ ಮೆನು ಮೇಲೆ ಕ್ಲಿಕ್ ಮಾಡಿ.
– ನಂತರ ತೆರೆಯುವ ವೆಬ್‌ಪೇಜ್‌ನಲ್ಲಿ ‘ಕಂಡಕ್ಟರ್ (ಆರ್‌ಪಿಸಿ)’ ಹುದ್ದೆಗಳ ನೇಮಕಾತಿ ಸಂಬಂಧ ಮೊದಲೆರಡು ಲಿಂಕ್‌ಗಳನ್ನು ಕ್ಲಿಕ್ ಮಾಡಿ.
– ಅಂತಿಮ ಆಯ್ಕೆಪಟ್ಟಿ, ಕಟ್‌ಆಫ್ ಅಂಕಗಳ ಪಿಡಿಎಫ್ ಪೇಜ್ ಓಪನ್ ಆಗುತ್ತದೆ.
– ನಿಮ್ಮ ಹೆಸರು ಇರುವ ಬಗ್ಗೆ ಚೆಕ್ ಮಾಡಿಕೊಳ್ಳಿ.
ಅಥವಾ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಪಿಡಿಎಫ್ ಪೇಜ್ ಓಪನ್ ಆಗುತ್ತದೆ: bmtc conductor_to_upload1746443716
Related

You Might Also Like
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...