CrimeNEWSಬೆಂಗಳೂರು

BMTC – ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: ಹೆಂಡತಿ ಸೀಮಂತಕ್ಕೆ ಹೂ ತರುತ್ತಿದ್ದ ಪತಿ ಸೇರಿ ಇಬ್ಬರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗ ಸಂಸ್ಥೆ ಬಸ್‌ಗಳಿಗೆ ಪ್ರತ್ಯೇಕ ಸ್ಥಳಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ.

ಈ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮಹಿಳೆ ಹುಳಿಮಾವು ಬಳಿ ಅಸುನೀಗಿರೆ. ಹೆಂಡತಿ ಸೀಮಂತ ಸಂಭ್ರಮದಲ್ಲಿದ್ದ ಪತಿ ವಿಜಯನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟಿದ್ದಾರೆ.

ವಿಜಯನಗರ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿಗೆ ಬೈಕ್‌ ಸವಾರ, ಅನ್ನಪೂರ್ಣೇಶ್ವರಿ ನಗರ ನಿವಾಸಿ ಕುಮಾರ್ (45) ಎಂಬಾತ ಸಿಲುಕಿ ಮೃತಪಟ್ಟಿದ್ದಾರೆ. ಗೋವಿಂದರಾಜನಗರ ಬೈ ಟು ಕಾಫಿ ಮುಂಭಾಗ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

ಬೈಕ್‌ ಸವಾರ ಕುಮಾರ್ ಹೆಂಡತಿಯ ಸೀಮಂತ ಕಾರ್ಯದ ನಿಮಿತ್ತ ವಿಜಯನಗರ ಮಾರ್ಕೆಟ್‌ನಿಂದ ಹೂ ತೆಗೆದುಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಮಾರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸದ್ಯ ಬಿಎಂಟಿಸಿ ಚಾಲಕ ಶ್ರೀನಿವಾಸ್ ಎಂಬುವರನ್ನು ವಿಜಯನಗರ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ವೀಣಾ ಎಂಬ ಮಹಿಳೆ ರಸ್ತೆ ದಾಟುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವೀಣಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ