CrimeNEWSನಮ್ಮಜಿಲ್ಲೆ

ಕಬಿನಿ ಎಡದಂಡೆ ನಾಲೆಯಲ್ಲಿ ಈಜಲು ಹೋಗಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬಿನಿ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಕಿಶನ್(21) ಮೃತ ದುರ್ದೈವಿ. ಈತ ಬೆಂಗಳೂರಿನ ಬಾಣಾವರ ನಿವಾಸಿ ಶೈಲೇಂದ್ರ ಎಂಬವರ ಮಗ ಕಿಶನ್, ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ತರಬೇತಿಗಾಗಿ ತನ್ನ ಐವರು ಸಹಪಾಠಿಗಳೊಂದಿಗೆ ಬಂದಿದ್ದರು.

ಭಾನುವಾರ ರಜಾ ದಿನವಾದ್ದರಿಂದ ಸ್ನೇಹಿತರೊಂದಿಗೆ ಈಜಲೆಂದು ಕಬಿನಿ ಎಡದಂಡೆ ನಾಲೆಗೆ ಹೋಗಿದ್ದಾರೆ. ಈ ವೇಳೆ ಈಜಲು ಬಾರದ ಕಿಶನ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ನೀರಿನಲ್ಲಿ ಮುಳುಗುತಿದ್ದ ಕಿಶನ್‌ಅನ್ನು ಸ್ನೇಹಿತರು ಮೇಲೆತ್ತಲು ಹರಸಾಹಸ ಮಾಡಿದರು ಆ ವೇಳೆಗಾಗಲೇ ಕಿಶನ್ ಸಾವನ್ನಪ್ಪಿದ್ದಾನೆ.

ಮೃತ ದೇಹವನ್ನು ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ