ಕೊರೊನಾ ಜಾಗೃತಿ ಮೂಡಿಸಿದ ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು
ತುಮಕೂರು: ಕೊರೋನಾ ವೈರಸ್ ರೋಗವನ್ನು ದೂರವಿಡಲು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಶ್ರೀನಗರ-ಬಂಡೇಪಾಳ್ಯ ಬಡಾವಣೆಯ ಜನತೆ ತಮಗೆ ತಾವೇ ಹಾಕಿಕೊಂಡಿರುವ ಈ ನಿರ್ಬಂಧಗಳು ನಿಜವಾಗಿಯೂ ಇತರರಿಗೆ ಮಾದರಿ ಹಾಗೂ ಶ್ಲಾಘನೀಯವಾದುದು ಎಂದು ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊರೋನಾ ವೈರಸ್ ರೋಗವು ತಂತ್ರ-ಮಂತ್ರಗಳಿಂದ ತೊಲಗುವಕಾಖಾಯಿಲೆಯಲ್ಲ. ವೈಯಕ್ತಿಕ ಹಾಗೂ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಂಡಲ್ಲಿ ಈ ರೋಗದಿಂದ ನಮ್ಮನ್ನು ನಾವು ಸಂರಕ್ಷಿಸಿಕೊಳ್ಳಬಹುದು. ಶ್ರೀನಗರ ಬಡಾವಣೆಯ ನಿವಾಸಿಗಳು ಅನುಸರಿಸುತ್ತಿರುವ ರೀತಿಯಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿರ್ಬಂಧವನ್ನು ತಮಗೆ ತಾವೇ ಹಾಕಿಕೊಳ್ಳುವುದರಿಂದ ವಿಶ್ವದಾದ್ಯಂತ ಹರಡುತ್ತಿರುವ ಮಾರಣಾಂತಿಕ ಕೋವಿಡ್-19 ವೈರಾಣುವಿನಿಂದ ಮುಕ್ತಿ ಹೊಂದಬಹುದಾಗಿದೆ ಎಂದು ತಿಳಿ ಹೇಳಿದ್ದಾರೆ.
ಸ್ವಯಂ ಸೇವಕರಾಗಿ ಮಹೇಶ್, ಹರೀಶ್, ರೇಣುಕ, ಚೇತನ್, ನಾಗೇಶ್, ನಾರಾಯಣಗೌಡ ಸೇರಿದಂತೆ 40 ಯುವಕರು ಈ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೇ ಬಡಾವಣೆಯ ಸಿಎಫ್ಟಿಆರ್ಐ.ನ ಬಯೋಟೆಕ್ನಾಲಜಿ ಇಂಜಿನಿಯರ್ ಮತ್ತು ರೀಸರ್ಚರ್ ಆರ್.ವಿ. ಮಹೇಶ್ ಅವರ ಸಲಹೆ ಸೂಚನೆಯನ್ವಯ ಈ ಮಹತ್ವದ ಮುಂದಡಿಯನ್ನು ಇಡಲಾಗಿದೆ ಎಂದು ಶ್ರೀನಗರ ನಾಗರೀಕ ಕ್ಷೇಮಾಭಿವೃದ್ಧಿಸಮಿತಿ ತಿಳಿಸಿದೆ.