NEWSಆರೋಗ್ಯನಮ್ಮರಾಜ್ಯ

BMTC ಶೇ.50 ರಷ್ಟು ಚಾಲನಾ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ: ಡಾ.ಮಂಜುನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಚಾಲನಾ ಸಿಬ್ಬಂದಿಗಳಲ್ಲಿ 100ಕ್ಕೆ 40-50 ಮಂದಿ ಹೃದ್ರೋಗದಿಂದ ಬಳಲುತ್ತಿದ್ದಾರೆ, ಜತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ರಕ್ತನಾಳ ಸಂಬಂಧಿತ ಕಾಯಿಲೆಗಳಿಂದಲೂ ಬಳಲುತ್ತಿದ್ದಾರೆ.

ಈ ಬಗ್ಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಮಾಹಿತಿ ನೀಡಿದ್ದು, 12-13 ತಿಂಗಳಲ್ಲಿ ಆಸ್ಪತ್ರೆಯು 8,200 ಬಿಎಂಟಿಸಿ ಚಾಲನಾ ಸಿಬ್ಬಂದಿಗಳಿಗೆ ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ತಪಾಸಣೆ ಮಾಡಲಾಯಿತು. ಈ ವೇಳೆ ಹೃದಯ ಸಂಬಂಧಿ ಸಮಸ್ಯೆಯಿಂದ ಶೇ.50 ರಷ್ಟು ಚಾಲನಾ ಸಿಬ್ಬಂದಿ ಬಳಲುತ್ತಿರುವುದಾಗಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ತಪಾಸಣೆ ವೇಳೆ 8,200 ಚಾಲನಾ ಸಿಬ್ಬಂದಿಗಳ ರಕ್ತ ಪರೀಕ್ಷೆ, ಹೃದಯ ಒತ್ತಡ ಪರೀಕ್ಷೆಗಳು, ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್‌ಗಳೊಂದಿಗೆ (ಇಕೋ) ಸಮಗ್ರ ಆರೋಗ್ಯ ತಪಾಸಣೆಗೆ ಒಳಪಡಿಲಾಗಿತ್ತು. ಪರೀಕ್ಷಿಸಿದ ವೇಳೆ 40 ಪ್ರತಿಶತದಷ್ಟು ಮಧುಮೇಹಿಗಳು, 40 ಪ್ರತಿಶತದಷ್ಟು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವುದು ಮತ್ತು 62 ಪ್ರತಿಶತದಷ್ಟು ಇತರ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿದೆ.

ಈಗಾಗಲೇ ಹೃದಯದಲ್ಲಿ ರಕ್ತ ಪರಿಚಲನೆ ಸರಿಯಾಗಿ ಆಗದೆ ಅಡಚಣೆಯಂತಹ ಪರಿಸ್ಥಿತಿಗಳನ್ನು ಎದುರಿಸುತ್ತಿರುವ ಶೇಕಡಾ 5 ರಷ್ಟು ಚಾಲಕರ ಬಗ್ಗೆಯೂ ಪರೀಕ್ಷೆ ನಡೆಸಿದ್ದು ವೈದ್ಯರು ಈ ಬಗ್ಗೆ ಎಚ್ಚರಿಕೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಾರೆ. ಇನ್ನು ಸುಮಾರು 35 ಪ್ರತಿಶತ ಚಾಲನಾ ಸಿಬ್ಬಂದಿ ಧೂಮಪಾನ, ಮದ್ಯಪಾನಿಗಳಾಗಿರುವುದು ಕಂಡುಬಂದಿದೆ.

ಅನಿಯಮಿತ ಕೆಲಸದ ಸಮಯ, ಅಸಮರ್ಪಕ ಆಹಾರ ಸೇವನೆ, ವ್ಯಾಯಾಮದ ಕೊರತೆ ಮತ್ತು ದೂರದ ಪ್ರಯಾಣದ ಸಮಯದಲ್ಲಿ ನಿರಂತರವಾಗಿ ಕುಳಿತುಕೊಳ್ಳುವುದು ಸೇರಿದಂತೆ ಆಯಾಸದಿಂದ ಚಾಲಕರು ಹೃದಯ ಸಂಬಂಧಿ ಕಾಯಿಲೆಗಳಿಗೆ ಗುರಿಯಾಗುತ್ತಾರೆ ಎಂದು ಮಂಜುನಾಥ್ ವಿವರಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಮತ್ತು ಪೊಲೀಸ್‌: ಇ ದೇ ರೀತಿ ಸಮಗ್ರ ಆರೋಗ್ಯ ತಪಾಸಣೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಪೊಲೀಸ್ ಸಿಬ್ಬಂದಿಗಳಿಗೂ ವಿಸ್ತರಿಸಲು ಪ್ರಸ್ತಾಪಿಸಲಾಗಿದೆ. ಕಾರಣ ಅವರಲ್ಲೂ ಸಹ ಹೃದಯ ಸಂಬಂಧಿ ಸಮಸ್ಯೆಗಳ ಹೆಚ್ಚಿನ ಅಪಾಯವಿದೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಹೃದ್ರೋಗದಿಂದ ಶೇ.30 ರಷ್ಟು ಮಂದಿ ಸಾಯುವುದು ಕಂಡು ಬಂದಿದೆ. ಹೀಗಾಗಿ ಆರಂಭಿಕ ಹಂತದಲ್ಲಿ ಜನರನ್ನು ಪರೀಕ್ಷಿಸುವುದು ಬಹಳ ಮುಖ್ಯ, ಇದು ಮರಣ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಎಂದು ಅವರು ಹೇಳಿದರು.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಒತ್ತಡದ ಕೆಲಸವನ್ನು ಹೊಂದಿರುವುದರಿಂದ ಮತ್ತು ಪ್ರತಿದಿನವೂ ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ಇವರಲ್ಲಿ ಹೆಚ್ಚಾಗಲು ಮತ್ತೊಂದು ಕಾರಣವಾಗಿದೆ.

ವಾಯು ಮಾಲಿನ್ಯವು ಕೇವಲ ಉಸಿರಾಟದ ಸಮಸ್ಯೆಗಳಿಗೆ ಮಾತ್ರ ಕಾರಣವಲ್ಲ, ಆದರೆ 2.5 ಮಿ.ಗ್ರಾಂ.ಗಿಂತ ಕಡಿಮೆ ಇರುವ ಕಣಗಳ ಇನ್ಹಲೇಷನ್ ಸುಲಭವಾಗಿ ಶ್ವಾಸಕೋಶದ ಮೂಲಕ ಹಾದುಹೋಗುತ್ತದೆ ಮತ್ತು ಅಪಧಮನಿಗಳಲ್ಲಿ ಅಡಚಣೆಯನ್ನು ಉಂಟುಮಾಡುತ್ತದೆ. ಆರೋಗ್ಯದಲ್ಲಿ ಏರುಪೇರಾಗುವುದು ಸಹಜವಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ