ನ್ಯೂಡೆಲ್ಲಿ: ನನಗೆ ಇಡಿ ನೀಡಿರುವ ನೋಟಿಸ್ ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದ್ದು, ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಬಿಜೆಪಿಯ ಒತ್ತಾಯದ ಮೇರೆಗೆ ಇಡಿಯಿಂದ ನೋಟಿಸ್ ಕಳುಹಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ಈ ನೋಟಿಸ್ ಕಳುಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಉಪ ಮುಖ್ಯಮಂತ್ರಿ ಆಗಿದ್ದ ಮನೀಸ್ ಸಿಸೋಡಿಯಾ ಅವರನ್ನು ಬಂಧಿಸಿದೆ. ಈಗ ಬಿಜೆಪಿ ಆಜ್ಞೆಯ ಮೇರೆಗೆ ನನಗೆ ನೋಟಿಸ್ ನೀಡಿದೆ. ಇದು ಅಕ್ರಮ ಮತ್ತು ರಾಜಕೀಯ ಪ್ರೇರಿತ. ನೋಟಿಸ್ ಹಿಂಪಡೆಯಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ಕೇಜ್ರಿವಾಲ್ ಅವರು ಬೆಳಗ್ಗೆ 11 ಗಂಟೆಗೆ ಕೇಂದ್ರ ತನಿಖಾ ಸಂಸ್ಥೆಯ ದೆಹಲಿ ಕಚೇರಿಯ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದು ಸಮನ್ಸ್ ಅನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ.
ಯಾರೇ ಆದರೂ ಇ.ಡಿ ಸಮನ್ಸ್ಗಳನ್ನು ಗರಿಷ್ಠ ಮೂರು ಬಾರಿ ತಿರಸ್ಕರಿಸಬಹುದು. ಬಳಿಕ ಇಡಿ ಜಾಮೀನು ರಹಿತ ವಾರಂಟ್ ನೀಡಬಹುದು. ಇಡಿ ಕಟ್ಟುನಿಟ್ಟಾದ ಅಕ್ರಮ ಹಣ ವರ್ಗಾವಣೆ ಆಕ್ಟ್ ಅಥವಾ PMLA ಅಡಿಯಲ್ಲಿ ಸಮನ್ಸ್ ನೀಡಬಹುದು.