ದಾವಣಗೆರೆ: ಶಾಲೆಗೆ ಕಲಿಯಲು ಬರುತ್ತಿದ್ದ ಬಾಲಕಿ ಮೇಲೆ ಕಾಮುಕ ಶಿಕ್ಷಕ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
7 ವರ್ಷದ ಬಾಲಕಿಯೇ ಶಿಕ್ಷಕನಿಂದ ನಿರಂತರ ಅತ್ಯಾಚಾರಕ್ಕೆ ಒಳಗಾದವಳಾಗಿದ್ದು, ಇದರಿಂದ ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಈ ವೇಳೆ ವೈದ್ಯರ ಬಳಿ ಕಿಚಿಕತ್ಸೆ ಕೊಡಿಸಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ಶಿಕ್ಷಕ ಹಲವು ದಿನಗಳಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ವಿಷಯವನ್ನು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ. ಆದರೆ, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಅತ್ಯಾಚಾರವಾಗಿರುವುದು ದೃಢಪಟ್ಟಿದೆ.
ಕೂಡಲೇ ಪೋಷಕರು ಕಾಮುಕ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಿಸಿಕೊಂಡ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.