CrimeNEWSನಮ್ಮಜಿಲ್ಲೆ

ಕೌಟುಂಬಿಕ ಕಲಹ: ಅಣ್ಣನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಮ್ಮ ಪರಾರಿ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೌಟುಂಬಿಕ ಕಲಹದಿಂದ ತನ್ನ ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ ಮೈದುನ ಪರಾರಿಯಾಗಿರುವ ಘಟನೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.

ಯಳ್ಳೂರು ಗ್ರಾಮದ ಗೀತಾ ಮರೀಗೌಡ್ರು (32), ಅಕುಲ್ (10), ಅಂಕಿತಾ (7) ಕೊಲೆಯಾದವರು. ಈ ಮೂವರನ್ನು ಹತ್ಯೆ ಮಾಡಿ ಕುಮಾರಗೌಡ್ ಮರೀಗೌಡ್ರು (35) ತಲೆಮರೆಸಿಕೊಂಡಿದ್ದಾನೆ.

ಆರೋಪಿಯ ಅಣ್ಣ ಹೊನ್ನೇಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆರೋಪಿಯು ಅಣ್ಣನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಯಳ್ಳೂರು ಗ್ರಾಮದ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಆದರೆ ಕೊಲೆಗೆ ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ​ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...