NEWSಕೃಷಿನಮ್ಮರಾಜ್ಯ

ಗ್ಯಾರಂಟಿ ನೆಪದಲ್ಲಿ ರೈತರ ಹಿತ ಮರೆತ ರಾಜ್ಯ ಸರ್ಕಾರ: ಬಸವನಗೌಡ ಪಾಟೀಲ್ ಯತ್ನಾಳ್ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನೆಪದಲ್ಲಿ ರೈತರ ಹಿತವನ್ನು ಮರೆತಿದೆ ಎಂದು ವಿಜಯಪುರ ಶಾಸಕ ಹಾಗೂ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಮಂಗಳವಾರ ತಾಲೂಕಿನ ಮಾಕೋಡು ಬೋರೆ, ರಾವಂದೂರು ಎಸ್.ಕೊಪ್ಪಲು, ಅಲ್ಪನಾಯಕನಹಳ್ಳಿ ಗ್ರಾಮಗಳಲ್ಲಿ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಬೆಟ್ಟದಪುರದ ಸಲಿಲೈಕ್ಯ ಮಠದ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ರಾಜ್ಯದಲ್ಲಿ ಈ ಬಾರಿ ಎಂದೂ ಕಂಡು ಕೇಳರಿಯದ ರೀತಿಯಲ್ಲಿ ಬರ ಆವರಿಸಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದರೂ ನಾವು ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದೇವೆ ಎಂಬ ಹುಂಬುತನದಲ್ಲಿ ರೈತರ ಹಿತವನ್ನು ಮರೆತಿದ್ದಾರೆ. ಸರ್ಕಾರದ ಜವಾಬ್ದಾರಿಯುತ ಖಾತೆ ನಿರ್ವಹಿಸುತ್ತಿರುವ ಶಿವಾನಂದ ಪಾಟೀಲ್ ಎಂಬ ಸಚಿವ ರೈತರು 5 ಲಕ್ಷ ಹಣ ಸಿಗುತ್ತದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.ಅವರಿಗೆ ನಾನು ಹೇಳಬಯಸುತ್ತೇನೆ 5 ಕೋಟಿ ಹಣ ನೀಡುತ್ತಿದ್ದೇನೆ ನೀವೇ ಆತ್ಮಹತ್ಯೆ ಮಾಡಿಕೊಳ್ಳಿ ನೋಡೋಣ ಎಂದರು.

ಇನ್ನು ಮಳೆ ಇಲ್ಲದೆ, ವಿದ್ಯುತ್‌ನ ಸಮಸ್ಯೆಯೂ ಹೆಚ್ಚಾಗಿದೆ. ರೈತರಿಗೆ ಸಮರ್ಪಕ ವಿದ್ಯುತ್‌ ಸೌಲಭ್ಯ ನೀಡಿದ್ದರೆ ಕೊಳವೆ ಬಾವಿಯಲ್ಲಿರುವ ಅಲ್ಪಸ್ವಲ್ಪ ನೀರು ಬಿಟ್ಟುಕೊಂಡು ಬೆಳೆಗಳನ್ನು ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ರಾಜ್ಯ ಸರ್ಕಾರ ಇಂತಹ ಯಾವುದೇ ಜನಪರ ಕಾರ್ಯಕ್ರಮಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಇದನ್ನು ಬಿಟ್ಟು ಪ್ರಧಾನಿ ಮೋದಿ ಅವರ ಮೇಲೆ ಟೀಕೆಗಳನ್ನು ಮಾಡುವುದರಲ್ಲೇ ಮಗ್ನವಾಗಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಗೂ ಮೊದಲು ರೈತರೊಂದಿಗೆ ಮಳೆಯ ಕೊರತೆ, ಬೆಳೆ ಹಾನಿ, ನಷ್ಟ, ದೊರೆಯಬೇಕಾದ ಪರಿಹಾರ, ಸರ್ಕಾರದಿಂದ ಪರಿಹಾರ ಪಡೆಯುವ ನಿಟ್ಟಿನಲ್ಲಿ ಇರುವ ಸಾಧಕ-ಬಾಧಕ ಬಗ್ಗೆ ಕೂಲಂಕಷವಾಗಿ ಚರ್ಚಿಸಿ, ಮಾಹಿತಿ ಪಡೆದರು. ಬರ ಅಧ್ಯಯನ ಪ್ರವಾಸದ ಬಳಿಕ ಎಲ್ಲವನ್ನೂ ಕ್ರೋಡೀಕರಿಸಿ ಅಂತಿಮ ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸ ಲಾಗುವುದು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ರೈತರ ಪರ ಬಿಜೆಪಿ ಧ್ವನಿ ಎತ್ತಲಿದೆ ಎಂದರು.

ಈ ನಡುವೆ ಅಧ್ಯಯನ ತಂಡದಲ್ಲಿದ್ದ ಶಾಸಕ ಶ್ರೀವತ್ಸ, ಕೊಡಗು ಜಿಲ್ಲೆಯ ರೈತ ಮೋರ್ಚಾದ ಕಾರ್ಯದರ್ಶಿ ಡಾ| ನವೀನ್‌ಕುಮಾರ್‌, ಮಾಜಿ ಸಂಸದ ಸಿ.ಎಚ್‌.ವಿಜಯಶಂಕರ್‌ ಗ್ರಾಮದ ಹಲವಾರು ಹೊಲಗಳಲ್ಲಿ ಒಣಗಿ ಹೋಗಿರುವ ಮೆಕ್ಕೆಜೋಳ, ಜೋಳ ಇತರ ಬೆಳೆಗಳನ್ನು ವೀಕ್ಷಿಸಿದರು.

ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಮಾಜಿ ಶಾಸಕರಾದ ಎನ್.ಮಹೇಶ್, ನಿರಂಜನ್ ಕುಮಾರ್, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಉಪಾಧ್ಯಕ್ಷ ನಂದಿಪುರ ಲೋಕೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ, ಪ್ರಧಾನ ಕಾರ್ಯದರ್ಶಿ ಬೆಮ್ಮತ್ತಿ ಚಂದ್ರು, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಡಾ.ನವೀನ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷ ಪುಟ್ಟಬುದ್ದಿ, ಮಾಜಿ ಸದಸ್ಯ ಪಿ.ರಾಜೇಂದ್ರ, ಮಾಜಿ ಸಿಂಡಿಕೇಟ್ ಸದಸ್ಯ ವಸಂತಕುಮಾರ್, ಮುಖಂಡರಾದ ರಮೇಶ್ ಕುಮಾರ್, ಆರ್.ಟಿ.ಸತೀಶ್, ಕೌಲನಹಳ್ಳಿ ಸೋಮಶೇಖರ್, ಲೋಕಪಾಲಯ್ಯ, ಬೆಟ್ಟದಪುರ ಬೆಟ್ಟದಪುರದ ಮೈಲಾರಿ, ಮನುಗನಹಳ್ಳಿ ಮಧು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...