NEWSನಮ್ಮರಾಜ್ಯ

ರಾಜ್ಯದಲ್ಲಿ 88 ಕೊರೊನಾ ಪಾಸಿಟಿವ್ ಪ್ರಕರಣಗಳು

 ಆರೋಗ್ಯ ಸಚಿವ ಬಿ.ಶ್ರೀರಾಮುಲು ಮಾಹಿತಿ l ಕೋವಿಡ್-19 ಬಗ್ಗೆ ಇರಲಿ ಎಚ್ಚರ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ರಾಜ್ಯದಲ್ಲಿ ಇದುವರೆಗೆ 88 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಭಾನುವಾರ ಮೈಸೂರಿನಲ್ಲಿ ಐದು ಪಾಸಿಟಿವ್ ಪ್ರಕರಣಗಳು ಕಂಡು ಬಂಧಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ 19 ರ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಇದುವರೆಗೆ 3,170 ಜನರ ಸ್ಯಾಪಲ್ ಅನ್ನು ಪರೀಕ್ಷೆ ಮಾಡಿದ್ದು ಇವರಲ್ಲಿ 88 ಜನರಿಗೆ ಪಾಸಿಟಿವ್ ಕಂಡುಬಂದಿದ್ದು ಇವರಲ್ಲಿ 3 ಜನ ಮರಣ ಹೊಂದಿದ್ದಾರೆ. 5 ಜನರು ಗುಣಮುಖರಾಗಿದ್ದಾರೆ. ಪರೀಕ್ಷಿಸಿದವಲ್ಲಿ 2874 ಜನರಿಗೆ ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಸಿದ್ದು, ಎಲ್ಲಾ ಪಕ್ಷದವರೂ ಸರ್ಕಾರದ ನಿರ್ದಾರಗಳಿಗೆ ಬೆಂಬಲ ಸೂಚಿಸಿದ್ದಾರೆ. ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ಕೋವಿಡ್-19 ಬೆಡ್‍ಗಳು, ಐಸೋಲೇಷನ್ ಬೆಡ್‍ಗಳು ಹಾಗೂ ವೆಂಟಿಲೇಟರ್‍ಗಳು ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮುಂದೆ ಹೆಚ್ಚಿನ ವೆಂಟಿಲೇಟರ್‍ಗಳ ಅಗತ್ಯ ಇದ್ದಲ್ಲಿ ಶಾಸಕರು ಹಾಗೂ ಸಂಸದರ ಅನುದಾನದಲ್ಲಿ ವೆಂಟಿಲೇಟರ್‍ಗಳ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ದೇಶದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಸಾವರ ಗಡಿ ದಾಟಿದ್ದು, 27ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಜನರು ಈ ಬಗ್ಗೆ ಎಚ್ಚರಿಕೆ ವಹಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಜತೆಗೆ ಅಕ್ಕಪಕ್ಕದವರ ಆರೋಗ್ಯ ಕಾಳಜಿಯನ್ನು ಹೊಂದಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ