NEWSನಮ್ಮರಾಜ್ಯ

ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ: ಬೋರ್ಡ್‌ ಹಾಕಿದ ಪ್ರಾಮಾಣಿಕ ಅಧಿಕಾರಿ ಲೋಕೇಶ್

ವಿಜಯಪಥ ಸಮಗ್ರ ಸುದ್ದಿ

ಹಾಸನ: ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳೆಂದರೆ ಅಲ್ಲಿ ಬರೀ ಲಂಚಬಾಕರೇ ಇರುತ್ತಾರೆ ಎನ್ನುವುದು ಜನರ ಮನಸ್ಸಿನಲ್ಲಿ ಬೇರೂರಿಬಿಟ್ಟಿದೆ. ಇದಕ್ಕೆ ಕಾರಣ ಸಣ್ಣಸಣ್ಣ ಕೆಲಸಗಳಿಗೂ ಸರ್ಕಾರಿ ಕಚೇರಿಯ ಅಧಿಕಾರಿಗಳು ಜನರನ್ನು ಅಲೆದಾಡಿಸುವುದಲ್ಲದೆ, ಅವರ ಬಳಿ ಹಣವನ್ನು ಪೀಕುತ್ತಿರುವುದು.

ಎಲ್ಲೆಡೆ ಈ ಲಂಚ ತಾಂಡವವಾಡುತ್ತಿರುವುದರ ಮಧ್ಯೆ ಹಾಸನದ ಬಿಇಒ ಕಚೇರಿಯ ಅಧೀಕ್ಷಕ ಡಿ.ಎಸ್. ಲೋಕೇಶ್ ಅವರು ತಮ್ಮ ಟೇಬಲ್ ಮೇಲೆ ನಾನು ಭ್ರಷ್ಟನಲ್ಲ‌, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ ಮೆರೆಯುತ್ತಿದ್ದು, ಈ ವಿಚಾರ ಸಾಮಾಜಿಕ ಜಲಾತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಈ ಹಿಂದೆ ಮಾಜಿ ಪ್ರಧಾನಿ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಲೋಕೇಶ್ ಅವರು ತಮ್ಮ ಜನಸ್ನೇಹಿ ಕೆಲಸದಿಂದ‌ ಜನಮೆಚ್ಚುಗೆ ಗಳಿಸಿದ್ದರು. ಇದೀಗ ಪ್ರಮೋಷನ್ ಪಡೆದು ಬಿಇಒ ಕಚೇರಿಯ ಅಧೀಕ್ಷರಾಗಿದ್ದು, ಅವರು ಕರ್ತವ್ಯ ಆರಂಭಿಸಿದ ದಿನದಿಂದ ಹೀಗೊಂದು ಬೋರ್ಡ್ ಹಾಕಿ ಕೆಲಸ ಮಾಡುತ್ತಿರುವುದು ಎಲ್ಲರ ಗಮನ ಸೆಳೆದಿದೆ.

ಇನ್ನು ಇಂತಹ ಪ್ರಾಮಾಣಿಕ ಅಧಿಕಾರಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿ ಎಂದು ಜನರು ಮನದಾಳದಿಂದ ಹೇಳುತ್ತಿದ್ದು, ಇವರಂತೆಯೇ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ ಏಕೆ ಬೋರ್ಡ್‌ ಹಾಕಿಕೊಳ್ಳಬಾರದು ಅಧಿಕಾರಿಗಳೂ ಎಂದು ಕೂಡ ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನು ಈ ರೀತಿ ಬೋರ್ಡ್‌ ಹಾಕಿದರೆ ತಮ್ಮ ಬಳಿ ಬರುವವರಿಗೆ ಈ ಕೆಲಸಕ್ಕೆ ಎಷ್ಟು ಕೊಡಬೇಕೋ ಎಂಬ ಅಳುಕು ಇಲ್ಲದೆ ಕೆಲಸವನ್ನು ಮಾಡಿಸಿಕೊಳ್ಳುವುದಕ್ಕೆ ಮುಂದಾಗುತ್ತಾರೆ ಅಲ್ಲವೆ. ಅದು ಅಲ್ಲದೆ ನಿಮ್ಮ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹೇಬರು ಇಷ್ಟು ಲಂಚ ಕೇಳುತ್ತಿದ್ದಾರೆ ನಾನು ಮಾತನಾಡುತ್ತೇನೆ ನೀನು ಇಷ್ಟು ಕೊಡು ಎಂದು ಹೇಳಿ ನಿಮಗೆ ಗೊತ್ತಿಲ್ಲದೆ ಸಿಬ್ಬಂದಿಗಳು ಲಂಚ ಪಡೆಯುವುದಕ್ಕೂ ಬ್ರೇಕ್‌ ಬೀಳುತ್ತದೆ ಅಲ್ಲವೆ ಎಂದು ಪ್ರಾಮಾಣಿಕ ಅಧಿಕಾರಿಗಳು ಈ ಕೆಲಸ ಮಾಡಿ ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ