ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಹಾವೇರಿ: ರಸ್ತೆ ಪಕ್ಕದಲ್ಲಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
ಹರಿಹರದ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು.
ಇನ್ನು ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಎಂಬುವರು ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿ ಅಶೋಕ್ ಎಂಬುವವರ ಸಂಬಂಧಿಕರ ಮಕ್ಕಳು ಎಂದು ತಿಳಿದು ಬಂದಿದೆ.
ಶಾಲೆ ರಜೆ ಹಿನ್ನೆಲೆಯಲ್ಲಿ ಸಂಬಂಧಿಕರೆಲ್ಲ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವ ಪ್ಲಾನ್ನಲ್ಲಿದ್ದರು. ಆದರೆ ಅಷ್ಟರಲ್ಲೇ ಜವರಾಯನ ತನ್ನ ಅಟ್ಟಹಾಸ ಮೆರೆದಿದ್ದಾನೆ.
ಅತಿ ವೇಗವಾಗಿ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಡಿಕ್ಕಿ ಹೊಡಿದಿದೆ ಪರಿಣಾಮ ಆರು ಜನರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ರವಾನೆ ಮಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದ ಬ್ಯಾಡಗಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Related
